ಬುಧವಾರ, ಏಪ್ರಿಲ್ 24, 2024
ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ

Twitter
Facebook
LinkedIn
WhatsApp
ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ

ನವದೆಹಲಿ (ಮಾರ್ಚ್‌ 26, 2023): ರಾಹುಲ್ ಗಾಂಧಿಯನ್ನು “ಹುತಾತ್ಮನ ಮಗ” ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ, ನೆಹರು-ಗಾಂಧಿ ಕುಟುಂಬವನ್ನು ಸಹ ಬಿಡದೆ ಬಿಜೆಪಿ ಪ್ರತಿದಿನ ರಾಹುಲ್‌ನನ್ನು ಅವಮಾನಿಸುತ್ತಿದೆ ಎಂದು ಹೇಳಿದರು. ರಾಹುಲ್‌ ಗಾಂಧಿಯನ್ನು ಲೋಕಸಭೆ ಸಂಸತ್‌ ಸ್ಥಾನದಿಂದ ಅನರ್ಹಗೊಳಿಸಿದ್ದನ್ನು ವಿರೋಧಿಸಿ ಸಂಕಲ್ಪ ಸತ್ಯಾಗ್ರಹ ವೇಳೆ ಕಾಂಗ್ರೆಸ್‌ ಈ ಆರೋಪ ಮಾಡಿದೆ. ಮಹಾತ್ಮ ಗಾಂಧಿ ಸ್ಮಾರಕದಲ್ಲಿ ಪ್ರತಿಭಟನೆಯ ಮನವಿಯನ್ನು ಪೊಲೀಸರು ತಿರಸ್ಕರಿಸಿದ ನಂತರ ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯ ರಾಜ್ ಘಾಟ್‌ನ ಹೊರಗೆ “ಸತ್ಯಾಗ್ರಹ” ನಡೆಸಿದರು.

ಈ ವೇಳೆ ಮಾತನಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ “ನನ್ನ ಸಹೋದರನನ್ನು ಹುತಾತ್ಮನ ಮಗ, ದೇಶದ್ರೋಹಿ ಮತ್ತು ಮೀರ್ ಜಾಫರ್ ಎಂದು ಕರೆಯುತ್ತೀರಿ, ನೀವು ಅವರ ತಾಯಿಯನ್ನು ಅವಮಾನಿಸುತ್ತೀರಿ. ನಿಮ್ಮ ಮುಖ್ಯಮಂತ್ರಿ ರಾಹುಲ್ ಗಾಂಧಿಗೆ ಅವರ ತಾಯಿ ಯಾರೆಂದು ಗೊತ್ತಿಲ್ಲ ಎಂದು ಹೇಳುತ್ತಾರೆ. ಹೀಗೆ, ನೀವು ನನ್ನ ಕುಟುಂಬವನ್ನು ಪ್ರತಿದಿನ ಅವಮಾನಿಸುತ್ತೀರಿ. ಆದರೆ ಯಾವುದೇ ಪ್ರಕರಣಗಳನ್ನು ದಾಖಲಿಸುವುದಿಲ್ಲ’’ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಆಕ್ರೋಶ ವ್ಯಕ್ತಡಿಸಿದ್ದಾರೆ.

ಅಲ್ಲದೆ, “ನಿಮ್ಮ ಪ್ರಧಾನಿ, ಜನರಿಂದ ತುಂಬಿರುವ ಸಂಸತ್ತಿನಲ್ಲಿ, ‘ಈ ಕುಟುಂಬ ನೆಹರೂ ಹೆಸರನ್ನು ಏಕೆ ಬಳಸುವುದಿಲ್ಲ’ ಎಂದು ಹೇಳುತ್ತಾರೆ. ಅವರು ಇಡೀ ಕಾಶ್ಮೀರಿ ಪಂಡಿತರ ಕುಟುಂಬವನ್ನು ಅವಮಾನಿಸುತ್ತಾರೆ ಮತ್ತು ತಂದೆಯ ಸಾವಿನ ನಂತರ ಕುಟುಂಬದ ಹೆಸರನ್ನು ಮುಂದಕ್ಕೆ ಸಾಗಿಸುವ ಮಗನ ಸಂಪ್ರದಾಯವನ್ನು ಅವಮಾನಿಸುತ್ತಾರೆ’’ ಎಂದೂ ಪ್ರಿಯಾಂಕಾ ಗಾಂಧಿ ಕಿಡಿ ಕಾರಿದ್ದಾರೆ. 

ಮಾನನಷ್ಟ ಅಪರಾಧ ಮತ್ತು ಸಂಸತ್ತಿನ ಅನರ್ಹತೆಗೆ ಕಾರಣವಾದ ರಾಹುಲ್‌ ಗಾಂಧಿಯ ಹೇಳಿಕೆಯನ್ನು ಇತರ ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಬಿಂಬಿಸುವ ಬಿಜೆಪಿಯ ಪ್ರಯತ್ನಗಳನ್ನು ವಿರೋಧಿಸಿದ ಮಲ್ಲಿಕಾರ್ಜುನ ಖರ್ಗೆ, “ನೀರವ್ ಮೋದಿ ಒಬಿಸಿಯೇ? ಮೆಹುಲ್ ಚೋಕ್ಸಿ ಒಬಿಸಿಯೇ? ಲಲಿತ್ ಮೋದಿ ಒಬಿಸಿಯೇ??  ಅವರು ಪರಾರಿಯಾಗಿದ್ದಾರೆ’’ ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.

“ಕಪ್ಪುಹಣದೊಂದಿಗೆ ಪಲಾಯನ ಮಾಡುತ್ತಿರುವ ಇವರ ವಿರುದ್ಧ ಮಾತ್ರ ರಾಹುಲ್ ಗಾಂಧಿ ಅವರು ಪ್ರಸ್ತಾಪಿಸಿದರು. ಕಾಂಗ್ರೆಸ್ ದೇಶಾದ್ಯಂತ ಇಂತಹ ನೂರಾರು ಪ್ರತಿಭಟನೆಗಳನ್ನು ನಡೆಸುತ್ತದೆ. ನಾವು ವಾಕ್ ಸ್ವಾತಂತ್ರ್ಯವನ್ನು ಕಾಪಾಡಲು ಹೋರಾಡುತ್ತೇವೆ. ರಾಹುಲ್ ಗಾಂಧಿಯವರೊಂದಿಗೆ ನಿಂತಿದ್ದಕ್ಕಾಗಿ ನಾನು ಎಲ್ಲಾ ವಿರೋಧ ಪಕ್ಷಗಳಿಗೆ ಧನ್ಯವಾದಗಳನ್ನು ಹೇಳುತ್ತೇನೆ” ಎಂದೂ ಮಲ್ಲಿಕಾರ್ಜುನ ಖರ್ಗೆ ಹೇಳಿದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ