ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಹುಲ್‌ ಪಾದಯಾತ್ರೆಗೆ ಶ್ರಮಿಸದಿದ್ದರೆ ಗೇಟ್‌ಪಾಸ್‌: ಶಾಸಕರಿಗೆ ಡಿಕೆಶಿ ಕಠಿಣ ಎಚ್ಚರಿಕೆ

Twitter
Facebook
LinkedIn
WhatsApp
ಡ್ಯಾನ್ಸ್ ಮಾಡಿ ಕಾಲಹರಣ ಮಾಡುವುದು ಬಿಟ್ಟು ಸರ್ಕಾರ ನ್ಯಾಯಾಂಗ ತನಿಖೆಗೆ ನಡೆಸಲಿ: ಡಿಕೆಶಿ

ಹೈಕಮಾಂಡ್‌ ಸೂಚನೆ ಉಲ್ಲೇಖಿಸಿ ಕಟುವಾಗಿ ಮಾತನಾಡಿದ ಅವರು, ‘ಕೆಲವರು ನನ್ನ ಬಿಟ್ಟರೆ ನಮ್ಮ ಕ್ಷೇತ್ರದಲ್ಲಿ ಏನೂ ಮಾಡಲು ಸಾಧ್ಯ ಎಂಬ ಭ್ರಮೆಯಲ್ಲಿದ್ದಾರೆ. ಕೇರಳದಲ್ಲಿ ಸುಮಾರು 13 ಹಾಲಿ ಶಾಸಕರಿಗೆ ಟಿಕೆಟ್‌ ನಿರಾಕರಿಸಲಾಗಿತ್ತು. ಹೀಗಾಗಿ ಹೈಕಮಾಂಡ್‌ ಯಾವ ನಿರ್ಧಾರವನ್ನಾದರೂ ತೆಗೆದುಕೊಳ್ಳಬಹುದು. ರಾಹುಲ್‌ ಗಾಂಧಿ ಕಾರ್ಯಕ್ರಮಕ್ಕೆ 1 ದಿನ 5 ಸಾವಿರ ಜನರನ್ನು ಕರೆ ತರಲಾಗದು ಎಂದರೆ ಒಪ್ಪಲು ಸಾಧ್ಯವಿಲ್ಲ. ನಿಮಗೆ ಆಗುವುದಿಲ್ಲ ಎಂದಾದರೆ ಕೆಲಸ ಮಾಡಲು ಸಾಕಷ್ಟುಮಂದಿ ಉತ್ಸುಕರಿದ್ದಾರೆ’ ಎಂದು ಹೇಳುವ ಮೂಲಕ ಜವಾಬ್ದಾರಿ ನಿಭಾಯಿಸದಿದ್ದರೆ ಟಿಕೆಟ್‌ ತಪ್ಪಲಿದೆ ಎಂಬ ಸ್ಪಷ್ಟ ಸಂದೇಶ ರವಾನಿಸಿದರು.

ಬೆಂಗಳೂರಿನ ಅಂಬೇಡ್ಕರ್‌ ಭವನದಲ್ಲಿ ನಡೆದ ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಸಂಯೋಜಕರ ಸಭೆಯಲ್ಲಿ ಮಾತನಾಡಿದ ಅವರು, ಪಾದಯಾತ್ರೆ ಸಿದ್ಧತೆಗೆ ಪಾದಯಾತ್ರೆ ಸಾಗುವ ಭಾಗಗಳ ಶಾಸಕರಿಂದ ಸೂಕ್ತ ಸ್ಪಂದನೆ ದೊರೆಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಅಧಿವೇಶನದ ವೇಳೆ ಇಡಿ ಸಮನ್ಸ್ ಜಾರಿ ರಾಜಕೀಯ ಸಂಚು ಎಂದ ಕೆಪಿಸಿಸಿ ಅಧ್ಯಕ್ಷ

‘ಈ ಪಾದಯಾತ್ರೆಗೆ ಮನೆ ಮನೆಗೂ ಹೋಗಿ ನಿಮ್ಮ ಮನೆ ಕಾರ್ಯಕ್ರಮಕ್ಕೆ ಆಹ್ವಾನಿಸುವ ರೀತಿ ಜನರನ್ನು ಕರೆಯಬೇಕು. ಪ್ರತಿ ಶಾಸಕರು 5 ಸಾವಿರ ಜನರನ್ನು ಕರೆತರಬೇಕು ಎಂದು ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಅವರು ಹೇಳಿದ್ದಾರೆ. ಪ್ರತಿ ನಿತ್ಯ ಇಬ್ಬರು ಶಾಸಕರಿಗೆ ಅವಕಾಶ ನೀಡಲಿದ್ದು, ನಿತ್ಯ ಕನಿಷ್ಠ 20 ಸಾವಿರ ಮಂದಿ ಹೆಜ್ಜೆ ಹಾಕಬೇಕು. ಈ ಜವಾಬ್ದಾರಿಯಲ್ಲಿ ನಿರ್ಲಕ್ಷ್ಯ ತೋರಿದರೆ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಹೇಳಿದರು.

ನನ್ನನ್ನೂ ಪರಿಶೀಲಿಸುತ್ತಿದ್ದಾರೆ: ‘ಎಐಸಿಸಿ ಒಂದು ವಿಶೇಷ ತಂಡ ನೀಡಿದೆ. ನಾನು, ಹರಿಪ್ರಸಾದ್‌, ವೀರಪ್ಪ ಮೊಯ್ಲಿ ಸೇರಿದಂತೆ 16 ನಾಯಕರನ್ನು ಕರೆದು ಈ ತಂಡವನ್ನು ನೇಮಿಸಿರುವುದಾಗಿ ಸೂಚಿಸಿದ್ದಾರೆ. ಅವರು ನಿಮ್ಮ ಜತೆ ಗುರುತಿಸಿಕೊಳ್ಳುವುದಿಲ್ಲ. ನೀವು ಹಾಗೂ ನಾನು ಏನೆಲ್ಲಾ ಮಾಡುತ್ತಿದ್ದೇವೆ ಎಂದು ಆ ತಂಡ ಪರಿಶೀಲನೆ ಮಾಡುತ್ತಿದೆ. ನಾನು ಕೇವಲ ಸಭೆ ಸಮಾರಂಭಗಳಿಗೆ ಹೋಗುತ್ತಿದ್ದೇನೋ ಅಥವಾ ಪಕ್ಷ ಸಂಘಟನೆಗೆ ಹಳ್ಳಿ ಹಳ್ಳಿಗೆ ಹೋಗುತ್ತಿದ್ದೇನೋ ಎಂದು ಗಮನಿಸುತ್ತಿದ್ದಾರೆ. ಅದೇ ರೀತಿ ಪ್ರತಿ ಕ್ಷೇತ್ರದ ಶಾಸಕರು, ಪರಾಜಿತ ಅಭ್ಯರ್ಥಿಗಳು, ಟಿಕೆಟ್‌ ಆಕಾಂಕ್ಷಿಗಳ ಕೆಲಸವನ್ನು ನೋಡುತ್ತಿದ್ದಾರೆ’ ಎಂದರು.

‘ಯಾರು ಪಕ್ಷದ ಪರವಾಗಿ ಕೆಲಸ ಮಾಡಲು ಸಾಧ್ಯವಿಲ್ಲವೋ ಅವರಿಗೆ ವಿಶ್ರಾಂತಿ ನೀಡಿ ಕೆಲಸ ಮಾಡುವವರಿಗೆ ಪಕ್ಷದಲ್ಲಿ ಅವಕಾಶ ನೀಡಲಾಗುವುದು ಎಂದು ರಾಷ್ಟ್ರೀಯ ನಾಯಕರು ಈಗಾಗಲೇ ತಿಳಿಸಿದ್ದು, ಈ ಸಂದರ್ಭದಲ್ಲಿ ನಾನದನ್ನು ನಿಮಗೆ ನೆನಪಿಸುತ್ತಿದ್ದೇನೆ. ನಮ್ಮ ಕರ್ತವ್ಯಗಳಿಗೆ ನಾವೆಲ್ಲರೂ ಹೊಣೆಗಾರರಾಗಬೇಕು’ ಎಂದು ಸ್ಪಷ್ಟಪಡಿಸಿದರು.

ಇನ್ನೂ ಧಮ್‌, ವೇಗ ಬೇಕು ಎಂದಿದ್ದೇನೆ: ಕಾರ್ಯಕ್ರಮದ ಬಳಿಕ ಸುದ್ದಿಗೋಷ್ಠಿ ನಡೆಸಿ ಸಭೆಯಲ್ಲಿ ತರಾಟೆಗೆ ತೆಗೆದುಕೊಂಡ ಬಗ್ಗೆ ಸ್ಪಷ್ಟನೆ ನೀಡಿದ ಡಿ.ಕೆ.ಶಿವಕುಮಾರ್‌, ‘ಶಾಸಕರು ಈಗ ಸಹಕಾರ ನೀಡುತ್ತಿಲ್ಲ ಎಂಬುದು ಪ್ರಶ್ನೆಯಲ್ಲ. ಇನ್ನೂ ಧಮ್‌ ಬೇಕು, ಇನ್ನೂ ವೇಗ ಬೇಕು. ಹೀಗಾಗಿ ಇನ್ನೂ ಹೆಚ್ಚು ಕೆಲಸ ಮಾಡಿ ಎಂದು ಶಾಸಕರಿಗೆ ಹೇಳಿದ್ದೇನೆ. ಶಾಸಕರಿಗೆ ಅವರ ಕರ್ತವ್ಯದ ಬಗ್ಗೆ ದಾಖಲೆ ಇರಬೇಕು. ಹಾಗಾಗಿ ಜವಾಬ್ದಾರಿಗಳನ್ನು ನೀಡಿದ್ದೇನೆ’ ಎಂದು ಹೇಳಿದರು. ಸಭೆಗೆ ಬಂದು ಹೋದರೆ ಸಾಲದು, ಕೆಲಸ ಮಾಡಬೇಕು. ಎಐಸಿಸಿಯ ರಾಷ್ಟ್ರೀಯ ನಾಯಕರು ಬರುತ್ತಾರೆ ಎಂಬುದು ಗಮನದಲ್ಲಿರಬೇಕು ಎಂದು ಹೇಳಿದ್ದೇನೆ. ಅದನ್ನು ಹೊರತುಪಡಿಸಿ ಬೇರೇನೂ ಇಲ್ಲ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ