ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಿಂಕು ಸಿಂಗ್, ರಾಣಾ ಅಬ್ಬರ; ಸಿಎಸ್‌ಕೆಗೆ ಶಾಕ್, ಪ್ಲೇ ಆಫ್ ರೇಸ್‌ನಲ್ಲಿ ಕೆಕೆಆರ್!

Twitter
Facebook
LinkedIn
WhatsApp
ರಿಂಕು ಸಿಂಗ್, ರಾಣಾ ಅಬ್ಬರ; ಸಿಎಸ್‌ಕೆಗೆ ಶಾಕ್, ಪ್ಲೇ ಆಫ್ ರೇಸ್‌ನಲ್ಲಿ ಕೆಕೆಆರ್!

ಚೆನ್ನೈ(ಮೇ.14): ರಿಂಕು ಸಿಂಗ್ ಹಾಗೂ ನಾಯಕ ನಿತೀಶ್ ರಾಣಾ ಹೋರಾಟಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಬಳಿ ಉತ್ತರ ಇರಲಿಲ್ಲ. ಟಿ20 ಶೈಲಿಯಲ್ಲಿ ಬ್ಯಾಟಿಂಗ್ ಮಾಡಲು ವಿಫಲವಾದ ಚೆನ್ನೈ ಸೂಪರ್ ಕಿಂಗ್ಸ್ 144 ರನ್ ಡಿಫೆಂಡ್ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಆರಂಭದಲ್ಲಿ ಹಿನ್ನಡೆ ಅನುಭವಿಸಿದರೂ ಕೆಕೆಆರ್ ತಂಡಕ್ಕೆ ರಿಂಕು ಸಿಂಗ್ ಹಾಗೂ ನಿತೀಶ್ ರಾಣಾ ಹೋರಾಟದಿಂದ ಗೆಲುವಿನ ನಗೆ ಬೀರಿದೆ. ಕೆಕೆಆರ್ 6 ವಿಕೆಟ್ ಗೆಲುವು ದಾಖಲಿಸಿ ಇದೀಗ ಪ್ಲೇ ಆಫ್ ರೇಸ್‌ನಲ್ಲಿ ಕಾಣಿಸಿಕೊಂಡಿದೆ.

ಕೋಲ್ಕತಾ ನೈಟ್ ರೈಡರ್ಸ್‌ ಸುಲಭ ಟಾರ್ಗೆಟ್ ಪಡೆದಿತ್ತು. 145 ರನ್ ಚೇಸ್ ಮಾಡಲು ಕಣಕ್ಕಿಳಿದ ಕೆಕೆಆರ್ ಆರಂಭದಲ್ಲೇ ಆಘಾತ ಅನುಭವಿಸಿತ್ತು. ರಹಮಾನುಲ್ಲಾ ಗುರ್ಬಾಜ್ 1 ರನ್ ಸಿಡಿಸಿ ನಿರ್ಗಮಿಸಿದರು. ಇದರ ಬೆನ್ನಲ್ಲೇ ವೆಂಕಟೇಶ್ ಅಯ್ಯರ್ 9 ರನ್ ಸಿಡಿಸಿ ಔಟಾದರು. ಕೆಕೆಆರ್ 21 ರನ್‌ಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟ ಅನುಭವಿಸಿತು. ಕೆಕೆಆರ್ ಚೇತರಿಸಿಕೊಳ್ಳುವ ಮೊದಲೇ ಜೇಸನ್ ರಾಯ್ 12 ರನ್ ಸಿಡಿಸಿ ನಿರ್ಗಮಿಸಿದರು. ಕೆಕೆಆರ್ ಪ್ರಮುಖ 3 ವಿಕೆಟ್ ಕಳೆದುಕೊಂಡು ಕುಸಿತ ಕಂಡಿತು.

ನಾಯಕ ನಿತೀಶ್ ರಾಣಾ ಹಾಗೂ ರಿಂಕು ಸಿಂಗ್ ಹೋರಾಟದಿಂದ ಕೆಕೆಆರ್ ಮತ್ತೆ ಪಂದ್ಯದ ಮೇಲೆ ಹಿಡಿತ ಸಾಧಿಸಿತು. ಇವರಿಬ್ಬರ ಜೊತೆಯಾಟ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನ ಆಸೆಗೆ ಅಡ್ಡಿಯಾಯಿತು. ರಿಂಕು ಸಿಂಗ್ ಹಾಗೂ ನಿತೀಶ್ ರಾಣಾ ಹಾಫ್ ಸೆಂಚುರಿ ಸಿಡಿಸಿ ಮಿಂಚಿದರು. ಅಂತಿಮ 18 ಎಸೆತದಲ್ಲಿ ಕೆಕೆಆರ್ ಗೆಲುವಿಗೆ 13 ರನ್ ಅವಶ್ಯಕತೆ ಇತ್ತು. ಈ ವೇಳೆ ಅನಗತ್ಯ ರನ್ ಕದಿಯಲು ಹೋದ ರಿಂಕು ಸಿಂಗ್ ರನೌಟ್‌ಗೆ ಬಲಿಯಾದರು. ರಿಂಕು ಸಿಂಗ್ 54 ರನ್ ಕಾಣಿಕೆ ನೀಡಿದರು. 

ನಿತೀಶ್ ರಾಣಾ ಹಾಗೂ ಆ್ಯಂಡ್ರೆ ರಸೆಲ್ ಹೋರಾಟ ಕೆಕೆಆರ್ ತಂಡಕ್ಕೆ ಗೆಲುವು ತಂದುಕೊಟ್ಟಿತು. 18.3 ಎಸೆತದಲ್ಲಿ ಕೆಕೆಆರ್ 4 ವಿಕೆಟ್ ಕಳೆದುಕೊಂಡು ಗೆಲುವು ದಾಖಲಿಸಿತು. ನಿತೀಶ್ ಅಜೇಯ 57 ರನ್ ಸಿಡಿಸಿದರು. ಈ ಮೂಲಕ ಕೆಕೆಆರ್ ಇದೀಗ ಪ್ಲೇ ಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ.

ಮೊದಲು ಬ್ಯಾಟಿಂಗ್ ನಡೆಸಿದ ಚೆನ್ನೈ ಸೂಪರ್ ಕಿಂಗ್ಸ್ ಅಬ್ಬರಿಸಲು ವಿಫಲವಾಯಿತು. ರುತುರಾಜ್ ಗಾಯಕ್ವಾಡ್ 17 ರನ್ ಸಿಡಿಸಿ ಔಟಾದರು. ಡೆವೋನ್ ಕಾನ್ವೇ 30 ರನ್ ಸಿಡಿಸಿ ಔಟಾದರು. ಅಜಿಂಕ್ಯ ರಹಾನೆ 16 ರನ್ ಸಿಡಿಸಿ ನಿರ್ಗಮಿಸಿದರು. ಸಿಎಸ್‌ಕೆ ಟಾಪ್ ಆರ್ಡರ್ ಅಲ್ಪ ಕಾಣಿಕೆ ನೀಡಿದರೂ ರನ್‌ರೇಟ್ ಟಿ20 ಶೈಲಿಯಲ್ಲಿ ಇರಲಿಲ್ಲ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ರನ್‌ರೇಟ್ ಇಲ್ಲದೆ ಪರದಾಡಿತು. 

ಅಂಬಟಿ ರಾಯುಡು ಕೇವಲ 4 ರನ್ ಸಿಡಿಸಿ ಔಟಾದರು. ಮೊಯಿನ್ ಆಲಿ 1 ರನ್ ಸಿಡಿಸಿ ನಿರ್ಗಮಿಸಿದರು. ಇತ್ತ ಶಿವಂ ದುಬೆ ಹಾಗೂ ರವೀಂದ್ರ ಜಡೇಜಾ ಜೊತೆಯಾಟದಿದ ಚೇತರಿಸಿಕೊಂಡಿತು. ಆದರೆ ಕಳಪೆ ರನ್‌ರೇಟ್‌ನಿಂದ ಚೆನ್ನೈ ಬೃಹತ್ ಮೊತ್ತ ಸಿಡಿಸಲು ವಿಫಲವಾಯಿತು. ಜಡೇಜಾ 24 ಎಸೆತದಲ್ಲಿ 20 ರನ್ ಸಿಡಿಸಿದರು. ಶಿವಂ ದುಬೆ ಅಜೇಯ 48 ರನ್ ಸಿಡಿಸಿದರು. ಅಂತಿಮ 3 ಎಸೆತ ಎದುರಿಸಿದ ಧೋನಿ 2 ರನ್ ಸಿಡಿಸಿದರು. ಈ ಮೂಲಕ ಧೋನಿ 6 ವಿಕೆಟ್ ನಷ್ಟಕ್ಕೆ 144 ರನ್ ಸಿಡಿಸಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist