ಬುಧವಾರ, ಮೇ 1, 2024
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಿಕ್ಷಾ ಚಾಲಕನಿಗೆ ತನ್ನ ಕೋಟಿ ರೂ. ಆಸ್ತಿ ದಾನ ಮಾಡಿದ ಅಜ್ಜಿ!

Twitter
Facebook
LinkedIn
WhatsApp
ರಿಕ್ಷಾ ಚಾಲಕನಿಗೆ ತನ್ನ ಕೋಟಿ ರೂ. ಆಸ್ತಿ ದಾನ ಮಾಡಿದ ಅಜ್ಜಿ!

ಕಟಕ್: 63 ವರ್ಷದ ವೃದ್ಧೆಯೋರ್ವರು ತನಗೆ ಹಾಗೂ ತನ್ನ ಕುಟುಂಬಕ್ಕೆ 25 ವರ್ಷಗಳ ಕಾಲ ಮಾಡಿದ ಸೇವೆಯನ್ನು ಗುರುತಿಸಿ ತನ್ನ ಎಲ್ಲಾ ಆಸ್ತಿಗಳನ್ನು ರಿಕ್ಷಾ ಚಾಲಕನಿಗೆ ದಾನ ಮಾಡಿದ ಘಟನೆ ಒಡಿಶಾದ ಕಟಕ್‌ನಲ್ಲಿ ನಡೆದಿದೆ.

ಸುತಾಹತ್‌‌ನ ಮಿನಾತಿ ಪಟ್ನಾಯಕ್‌ ಅವರು ರಿಕ್ಷಾ ಚಾಲಕ ಬುಧಾ ಸಮಲ್‌‌ ಅವರಿಗೆ ತಮ್ಮ ಮೂರು ಅಂತಸ್ತಿನ ಮನೆ, ಚಿನ್ನಾಭರಣಗಳು ಹಾಗೂ ತನ್ನ ಎಲ್ಲಾ ಆಸ್ತಿಯನ್ನು ದಾನ ಮಾಡಿದ್ದಾರೆ.
ಮಿನಾತಿ ಪಟ್ನಾಯಕ್ ಅವರ ಕುಟುಂಬಕ್ಕೆ ರಿಕ್ಷಾ ಚಾಲಕ ಬುಧಾ ಸಮಲ್‌ ಅವರು ಎರಡು ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ.
ಕಳೆದ ವರ್ಷ ಕಿಡ್ನಿ ವೈಫಲ್ಯದಿಂದ ಮಿನಾತಿ ಅವರು ಪತಿಯನ್ನು ಕಳೆದುಕೊಂಡಿದ್ದರು. ಇತ್ತೀಚೆಗೆ ಇವರು ಮಗಳು ಕೋಮಲ್‌ ಹೃದಯಾಘಾತದಿಂದ ಮೃತಪಟ್ಟಿದ್ದರು. ಹಾಗಾಗಿ ತನಗೆ ಹಾಗೂ ಪತಿಗೆ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಡ ರಿಕ್ಷಾ ಚಾಲಕನ ಕುಟುಂಬಕ್ಕೆ ತನ್ನ ಆಸ್ತಿಯನ್ನು ದಾನ ಮಾಡಿದ್ದಾರೆ.
“ನನ್ನ ಪತಿ ಹಾಗೂ ಮಗಳ ಸಾವಿನ ಬಳಿಕ ನಾನು ದುಃಖದಲ್ಲಿ ಜೀವನ ಸಾಗಿಸುತ್ತಿದ್ದೆ. ನನ್ನ ಕಷ್ಟಕಾಲದಲ್ಲಿ ನನ್ನ ಸಂಬಂಧಿಕರು ಯಾರೂ ಕೂಡಾ ನನಗೆ ನೆರವಾಗಲಿಲ್ಲ. ಪತಿ ಹಾಗೂ ಮಗಳ ಸಾವಿನ ಬಳಿಕ ನಾನು ಒಬ್ಬಂಟಿಯಾಗಿದ್ದೆ. ಹೀಗಿರುವಾಗ ರಿಕ್ಷಾ ಚಾಲಕ ಹಾಗೂ ಅವನ ಕುಟುಂಬ ನನ್ನ ಬೆಂಬಲಕ್ಕೆ ನಿಂತಿತ್ತು. ಏನನ್ನೂ ನಿರೀಕ್ಷಿಸದೇ ನನ್ನ ಆರೋಗ್ಯವನ್ನು ನೋಡಿಕೊಂಡಿದ್ದಾರೆ” ಎಂದು ಮಿನಾತಿ ಅವರು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

“ನನ್ನ ಸಂಬಂಧಿಕರ ಬಳಿ ಸಾಕಷ್ಟು ಆಸ್ತಿಯಿದೆ. ನನ್ನ ಆಸ್ತಿಯನ್ನು ನಾನು ಬಡ ಕುಟುಂಬಕ್ಕೆ ನೀಡಲು ಬಯಸಿದ್ದೆ. ನನ್ನ ಮರಣದ ಬಳಿಕ ಯಾರಿಗೂ ಕಿರುಕುಳ ನೀಡದಿರಲು ನಾನು ಬುಧಾ ಸಮಲ್‌ ಹಾಗೂ ಅವನ ಕುಟುಂಬಕ್ಕೆ ಎಲ್ಲಾವನ್ನೂ ಕಾನೂನುಬದ್ಧವಾಗಿ ದಾನ ಮಾಡಲು ತೀರ್ಮಾನಿಸಿದ್ದೇನೆ” ಎಂದಿದ್ದಾರೆ.
“ನನ್ನ ಮಗಳನ್ನು ಅವನು ಕಾಲೇಜಿಗೆ ಕಳುಹಿಸುತ್ತಿದ್ದ. ಅವರು ನಮ್ಮ ಕುಟುಂಬದ ರಿಕ್ಷಾ ಚಾಲಕರಾಗಿದ್ದರು. ನನ್ನ ಆಸ್ತಿಯನ್ನು ಅವರಿಗೆ ನೀಡುವ ಮೂಲಕ ನಾನು ಅವರಿಗೆ ದೊಡ್ಡ ಸೇವೆಯನ್ನು ಮಾಡುತ್ತಿಲ್ಲ. ಬದಲಾಗಿ ಅವರು ಅದಕ್ಕೆ ಅರ್ಹರಾಗಿದ್ದಾರೆ” ಎಂದು ಹೇಳಿದ್ದಾರೆ.
ಮಿನಾತಿ ಅವರು ಮೂರು ಸಹೋದರಿಯರ ಪೈಕಿ ಇಬ್ಬರು ಆಸ್ತಿಯನ್ನು ರಿಕ್ಷಾ ಚಾಲಕನಿಗೆ ಹಾಗೂ ಅವರ ಕುಟುಂಬಕ್ಕೆ ನೀಡುವ ನಿರ್ಧಾರವನ್ನು ವಿರೋಧಿಸಿದ್ದರು. ಆದರೆ, ಮಿನಾತಿ ಅವರು ದೃಢ ನಿರ್ಧಾರ ಕೈಗೊಂಡು ರಿಕ್ಷಾ ಚಾಲಕ ಹಾಗೂ ಅವರ ಕುಟುಂಬಕ್ಕೆ ತನ್ನೆಲ್ಲಾ ಆಸ್ತಿಯನ್ನು ಕಾನೂನುಬದ್ಧವಾಗಿ ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬುಧಾ ಸಮಲ್‌, “ಮಿನಾತಿ ಅವರು ತನ್ನ ಆಸ್ತಿಯನ್ನು ನೀಡುವ ನಿರ್ಧಾರದ ಬಗ್ಗೆ ಹೇಳಿದಾಗ ನಾನು ದಿಗ್ಭ್ರಮೆಗೊಂಡೆ. ನಾನು ಎರಡು ದಶಕಗಳಿಗೂ ಹೆಚ್ಚು ಕಾಲ ಈ ಕುಟುಂಬಕ್ಕೆ ಸೇವೆ ಸಲ್ಲಿಸುತ್ತಿದ್ದೇನೆ ಹಾಗೂ ಆ ಸೇವೆಯನ್ನು ನಾನು ಮುಂದುವರಿಸುತ್ತೇನೆ” ಎಂದು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು