ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಪಘಾತದ ಬಳಿಕ ಮೊದಲ ಸಂದೇಶ: 'ಚೇತರಿಸುತ್ತಿದ್ದೇನೆ, ಎಲ್ಲಾ ಸವಾಲುಗಳಿಗೆ ಸಿದ್ಧ', ರಿಷಬ್ ಪಂತ್ ಟ್ವೀಟ್

Twitter
Facebook
LinkedIn
WhatsApp
accident 1671448903 2

ಮುಂಬೈ(ಜ.17): ಕಳೆದ ತಿಂಗಳು ರಸ್ತೆ ಅಪಘಾತಕ್ಕೆ ತುತ್ತಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕ್ರಿಕೆಟಿಗ ರಿಷಭ್‌ ಪಂತ್‌ ಅಪಘಾತದ ಬಳಿಕ ಮೊದಲ ಬಾರಿ ಟ್ವೀಟ್‌ ಮಾಡಿದ್ದು, ಚೇತರಿಸಿಕೊಳ್ಳುತ್ತಿದ್ದೇನೆ ಹಾಗೂ ಮುಂದಿನ ಸವಾಲುಗಳಿಗೆ ಸಿದ್ಧನಾಗಿದ್ದೇನೆ ಎಂದಿದ್ದಾರೆ. 

‘ಎಲ್ಲರ ಬೆಂಬಲ, ಶುಭ ಹಾರೈಕೆಗಳಿಂದ ಸಂತುಷ್ಟಗೊಂಡಿದ್ದೇನೆ. ಅಪಘಾತದ ಕ್ಷಣದಿಂದಲೂ ಅಧ್ಬುತ ರೀತಿಯಲ್ಲಿ ಬೆಂಬಲಿಸುತ್ತಿರುವ ಬಿಸಿಸಿಐ, ಸರ್ಕಾರಕ್ಕೆ ವಂದನೆಗಳು. ವೈದ್ಯರು, ಸಹ ಆಟಗಾರರು, ಅಭಿಮಾನಿಗಳಿಗೆ ಧನ್ಯವಾದ ಸಮರ್ಪಿಸಲು ನನ್ನಲ್ಲಿ ಪದಗಳಿಲ್ಲ. ಶೀಘ್ರವೇ ಮೈದಾನದಲ್ಲಿ ನಿಮ್ಮನ್ನು ಭೇಟಿಯಾಗಲು ಹಾತೊರೆಯುತ್ತಿದ್ದೇನೆ ಎಂದಿದ್ದಾರೆ. ಜೊತೆಗೆ, ಅಪಘಾತದ ಬಳಿಕ ಆಸ್ಪತ್ರೆಗೆ ದಾಖಲಿಸಲು ತಮಗೆ ನೆರವಾದ ರಜತ್‌ ಕುಮಾರ್‌, ನಿಶು ಕುಮಾರ್‌ಗೆ ವಿಶೇಷ ಅಭಿನಂದನೆ ಸಲ್ಲಿಸಿದ್ದು, ಅವರ ಫೋಟೋಗಳನ್ನೂ ಹಂಚಿಕೊಂಡಿದ್ದಾರೆ.

ಕಾರು ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾದ ಭಾರತೀಯ ಕ್ರಿಕೆಟಿಗ ರಿಷಭ್‌ ಪಂತ್‌ ಇನ್ನೂ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, 6 ವಾರಗಳ ಬಳಿಕ ಮತ್ತೊಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ. ರಾಷ್ಟ್ರೀಯ ಮಾಧ್ಯಮವೊಂದರ ವರದಿ ಪ್ರಕಾರ ಪಂತ್‌ ಕ್ರಿಕೆಟ್‌ಗೆ ಮರಳಲು ಕನಿಷ್ಠ 18 ತಿಂಗಳು ಅಂದರೆ ಒಂದೂವರೆ ವರ್ಷವಾಗಲಿದೆ ಎನ್ನಲಾಗಿದೆ. ಪಂತ್‌ ಈ ವರ್ಷದ ಐಪಿಎಲ್‌, ಏಕದಿನ ವಿಶ್ವಕಪ್‌ ಮಾತ್ರವಲ್ಲ 2024ರ ಐಪಿಎಲ್‌ ಹಾಗೂ ಟಿ20 ವಿಶ್ವಕಪ್‌ಗೂ ಅಲಭ್ಯರಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ಹೇಳಲಾಗಿದೆ.

 

ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಡಿಸೆಂಬರ್ 29ರ ರಾತ್ರಿ ಗುರುವಾರ ತಮ್ಮ ಮರ್ಸಿಡೀಸ್‌ ಕಾರನ್ನು ತಾವೇ ಚಾಲನೆ ಮಾಡುತ್ತಾ ದೆಹಲಿಯಿಂದ ಉತ್ತರಾಖಂಡದ ರೂರ್ಕೀ ಎಂಬಲ್ಲಿರುವ ತಮ್ಮ ನಿವಾಸಕ್ಕೆ ಹೊರಟಿದ್ದರು. ಹೊಸ ವರ್ಷವನ್ನು ತಾಯಿಯ ಜೊತೆ ಆಚರಿಸಲು, ಅವರಿಗೆ ಅಚ್ಚರಿ ನೀಡಲು ತೆರಳುತ್ತಿದ್ದರು. 

ಈ ವೇಳೆ ಬೆಳಗ್ಗಿನ ಜಾವ 5.30ರ ಸುಮಾರಿಗೆ ಮೊಹಮದ್‌ಪುರ ಎಂಬಲ್ಲಿ ಅಪಘಾತ ಸಂಭವಿಸಿದೆ. ಕ್ಷಣಾರ್ಧದಲ್ಲೇ ಕಾರಿಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದೆ. ಆದರೆ ಬೆಂಕಿ ಹೊತ್ತಿಕೊಳ್ಳುವ ಮುನ್ನ ಕೂದಲೆಳೆ ಅಂತರದಲ್ಲಿ ಪಂತ್‌ ಕಾರಿನ ಗಾಜು ಒಡೆದು ಹೊರಬಂದಿದ್ದು, ಬಲುದೊಡ್ಡ ಅಪಾಯದಿಂದ ಪಾರಾಗಿದ್ದಾರೆ. ಅವರ ದೇಹದ ಹಲವು ಭಾಗಗಳಲ್ಲಿ ಗಾಯಗಳಾಗಿದ್ದರೂ ಯಾವುದೇ ಮೂಳೆ ಮುರಿದಿಲ್ಲ. ಬೆಂಕಿಯಿಂದ ಸುಟ್ಟಗಾಯಗಳೂ ಆಗಿಲ್ಲ ಎಂದು ವೈದ್ಯರು ಸ್ಪಷ್ಟನೆ ನೀಡಿದ್ದರು.

ನೆರವಿಗೆ ಧಾವಿಸಿದ್ದ ಬಸ್‌ ಚಾಲಕ

ಕಾರಿನಿಂದ ಹೊರಬಂದು ರಸ್ತೆಯಲ್ಲಿ ಬಿದ್ದಿದ್ದ ರಿಷಭ್‌ರ ಸಹಾಯಕ್ಕೆ ಅದೇ ರಸ್ತೆಯಲ್ಲಿ ಸಾಗುತ್ತಿದ್ದ ಬಸ್‌ ಚಾಲಕ ಧಾವಿಸಿದ್ದಾರೆ. ರಸ್ತೆಯ ಪಕ್ಕದಲ್ಲೇ ರಿಷಭ್‌ರನ್ನು ಮಲಗಿಸಿ ತಮ್ಮ ಹೊದಿಕೆಯನ್ನು ಅವರ ಮೈ ಮೇಲೆ ಹಾಕಿ, ಬಳಿಕ ಆ್ಯಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ. ಮೊದಲು ರೂರ್ಕೀಯ ಸಕ್ಷಮ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಡೆಹರಾಡೂನ್‌ನ ಆಸ್ಪತ್ರೆಗೆ ಸೇರಿಸಲಾಗಿತ್ತು. ಡೆಹರಾಡೂನ್‌ ಬಳಿಕ ಇದೀಗ ರಿಷಭ್ ಪಂತ್ ಅವರನ್ನು ಮುಂಬೈಗೆ ಶಿಫ್ಟ್‌ ಮಾಡಲಾಗಿದ್ದು, ಅಲ್ಲಿ ಪಂತ್‌ಗೆ ಅಸ್ತಿಬಂಧಕ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಮಾಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist