ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಿಷಬ್ ಶೆಟ್ಟಿ ಹೊಸ ಸಿನಿಮಾಕ್ಕೆ ಮಾಲಿವುಡ್ ನಟ?

Twitter
Facebook
LinkedIn
WhatsApp
ರಿಷಬ್ ಶೆಟ್ಟಿ ಹೊಸ ಸಿನಿಮಾಕ್ಕೆ ಮಾಲಿವುಡ್ ನಟ?
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ’ ಪ್ರೀಕ್ವೆಲ್ ಟೀಮ್‍ ನಿಂದ ಮತ್ತೊಂದು ಹೊಸ ಸುದ್ದಿ ಬಂದಿದೆ. ಸದ್ದಿಲ್ಲದೇ ರಿಷಬ್ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದು, ಈ ಸಿನಿಮಾದ ಮಹತ್ವದ ಪಾತ್ರವೊಂದನ್ನು ಮಾಲಿವುಡ್ ನಟ ಜಯರಾಮ್  (Jayaram) ನಿರ್ವಹಿಸುತ್ತಿದ್ದಾರೆ. ಈ ಹಿಂದೆ ಇವರು ಶಿವರಾಜ್ ಕುಮಾರ್ ನಟನೆಯ ಘೋಸ್ಟ್ ಸಿನಿಮಾದಲ್ಲೂ ನಟಿಸಿದ್ದರು.

ರಿಷಬ್ ಶೆಟ್ಟಿ (Rishab Shetty) ಸದ್ಯ ‘ಕಾಂತಾರ’ (Kantara 1) ಪ್ರೀಕ್ವೆಲ್ ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮೇ.7 ರಂದು ಬೈಂದೂರಿನ ಕೆರಾಡಿಯಲ್ಲಿ ರಿಷಬ್ ಮತದಾನ ಮಾಡಿ, ಈ ವೇಳೆ ಕಾಂತಾರ ಪಾರ್ಟ್ 1 ಬಗ್ಗೆ ರಿಷಬ್ ಮಾಹಿತಿ ನೀಡಿದ್ದರು.

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದ ರಿಷಬ್, ಜನ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದ್ರೆ ಒಳ್ಳೆಯದು. ಕಾಂತಾರ ಚಿತ್ರದ ಕುರಿತು ಅಧಿಕೃತವಾಗಿ ಹೊಂಬಾಳೆ ಸಂಸ್ಥೆ ಎಲ್ಲವನ್ನೂ ಘೋಷಣೆ ಮಾಡುತ್ತದೆ. ಈಗಾಗಲೇ ‘ಕಾಂತಾರ’ ಪ್ರೀಕ್ವೆಲ್ ಚಿತ್ರೀಕರಣ ಆರಂಭವಾಗಿದೆ. ಸಿನಿಮಾದ ಕೆಲಸ ಬಹಳ ಚೆನ್ನಾಗಿ ನಡೆಯುತ್ತಿದೆ ಎಂದು ಮಾಹಿತಿ ಹಂಚಿಕೊಂಡಿದ್ದರು.

‘ಕಾಂತಾರ’ ಸಕ್ಸಸ್ ನಂತರ ಮೊದಲಿಗಿಂತ ಜವಾಬ್ದಾರಿ ಹೆಚ್ಚಾಗಿದೆ. ನಮ್ಮ ಸಿನಿಮಾಗಾಗಿ ದೊಡ್ಡ ತಂಡ ಕೆಲಸ ಮಾಡುತ್ತಿದೆ ಎಂದಿದ್ದರು. ಹೊಂಬಾಳೆ ಸಂಸ್ಥೆ ಸಿಕ್ಕಿರುವುದು ಫಿಲ್ಮ್ ಮೇಕರ್‌ಗೆ ಒಂದು ಪುಣ್ಯ ಎಂದು ರಿಷಬ್‌ ಖುಷಿಯಿಂದ ಮಾತನಾಡಿದ್ದರು.  ಕಾಂತಾರಗಾಗಿ ಅದ್ಭುತವಾದ ಟೆಕ್ನಿಷಿಯನ್ಸ್‌ಗಳು ಕೆಲಸ ಮಾಡುತ್ತಿದ್ದಾರೆ. ನಿರಂತರವಾಗಿ ಪಾರ್ಟ್ ಬೈ ಪಾರ್ಟ್ ಚಿತ್ರೀಕರಣ ನಡೆಯುತ್ತದೆ ಎಂದು ರಿಷಬ್ ಹೇಳಿದ್ದರು.

ನಟ ಜಯರಾಮ್
ನಟ ಜಯರಾಮ್

ಜನ ‘ಕಾಂತಾರ’ ಚಿತ್ರವನ್ನು ಗೆಲ್ಲಿಸಿದ್ದಾರೆ ಬಾಯಲ್ಲಿ ಏನು ಹೇಳಲ್ಲ. ಕೆಲಸದ ಮೂಲಕ ಮಾಡಿ ತೋರಿಸಬೇಕು ಎಂದು ಅಂದುಕೊಂಡಿದ್ದೇನೆ. ನನಗೆ ಯಾವ ಒತ್ತಡವು ಇಲ್ಲ. ಆಗ ನನಗೆ ಬಹಳ ದೊಡ್ಡ ಚಿತ್ರವಾಗಿತ್ತು. ಸಿನಿಮಾ ಯಾವಾಗಲೂ ಕಲಿಯುವ ಪ್ರೊಸೆಸ್ ಅದನ್ನು ಮಾಡುತ್ತಿದ್ದೇನೆ ಎಂದಿದ್ದರು ರಿಷಬ್.‌

ಈ ವೇಳೆ, ಸಿನಿಮಾಗೋಸ್ಕರ ಒಂದು ವರ್ಷದಿಂದ ಗಡ್ಡ ಕೂದಲು ಬಿಟ್ಟಿರೋದಾಗಿ ತಿಳಿಸಿದ್ದರು. ಇನ್ನೂ ‘ಕಾಂತಾರ 1’ ಚಿತ್ರೀಕರಣ ಪೂರ್ತಿ ಮುಗಿದ ಮೇಲೆ ಅಭಿಮಾನಿಗಳಿಗೆ, ಮಾಧ್ಯಮದವರಿಗೆ ಚಿತ್ರೀಕರಣ ಸ್ಥಳಕ್ಕೆ ಕರೆಯುತ್ತೇವೆ ಎಂದು ರಿಷಬ್ ತಿಳಿಸಿದ್ದಾರೆ. ಚಿತ್ರೀಕರಣ ಮುಗಿಯುವವರೆಗೆ ಬಹಳ ಗೌಪ್ಯತೆಯನ್ನು ಕಾಪಾಡಬೇಕಾಗುತ್ತದೆ ಎಂದು ಹೇಳಿದ್ದಾರೆ. ನಮ್ಮ ಸಿನಿಮಾ ಪೂರ್ತಿ ಕರಾವಳಿ ಭಾಗದಲ್ಲಿ ಚಿತ್ರೀಕರಣ ಮಾಡುತ್ತೇವೆ ಎಂದು ರಿಷಬ್ ಮಾತನಾಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist