ಶುಕ್ರವಾರ, ಏಪ್ರಿಲ್ 19, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರೆಡ್ಡಿ ಸ್ನೇಹ, ಪಕ್ಷ ಸರಿದೂಗಿಸಿಕೊಂಡು ಹೋಗುತ್ತೇನೆ: ಸಚಿವ ಶ್ರೀರಾಮುಲು

Twitter
Facebook
LinkedIn
WhatsApp
ರೆಡ್ಡಿ ಸ್ನೇಹ, ಪಕ್ಷ ಸರಿದೂಗಿಸಿಕೊಂಡು ಹೋಗುತ್ತೇನೆ: ಸಚಿವ ಶ್ರೀರಾಮುಲು

ಕಂಪ್ಲಿ (ಡಿ.08): ಜನಾರ್ದನ ರೆಡ್ಡಿ ಅವರು ನನ್ನ ಆತ್ಮೀಯ ಸ್ನೇಹಿತರು, ಬಿಜೆಪಿ ನನ್ನ ತಾಯಿ ಸಮಾನ. ಸ್ನೇಹ ಮತ್ತು ಪಕ್ಷ ಎರಡನ್ನೂ ಸರಿದೂಗಿಸಿಕೊಂಡು ಹೋಗುತ್ತೇನೆ ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಹೇಳಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ನೇಹ ಅಂದ್ರೆ ಜನಾರ್ದನ ರೆಡ್ಡಿ ಹಾಗೂ ರಾಮುಲು ಎನ್ನುವಂತೆ ಎಲ್ಲರು ಮಾತನಾಡುತ್ತಾರೆ. ಸ್ನೇಹಕ್ಕೆ ಪ್ರಾಣ ಕೊಡುವಂತಹ ವ್ಯಕ್ತಿ ನಾನು. ಸ್ನೇಹ ಹಾಗೂ ರಾಜಕೀಯ ಎರಡೂ ಮುಖ್ಯ. ಸ್ನೇಹ ಹಾಗೂ ಪಾರ್ಟಿ ಎರಡನ್ನೂ ಸರಿದೂಗಿಸಿಕೊಂಡು ಹೋಗುತ್ತೇನೆ. ರಾಜಕಾರಣ ಬಂದಾಗ ಜನಾರ್ದನ ರೆಡ್ಡಿ ಅವರ ಬಗ್ಗೆ ಅಲ್ಲಿ ಇಲ್ಲಿ ಸುದ್ದಿಗಳು ಕೇಳುತ್ತಿವೆ. 

ಜನಾರ್ದನ ರೆಡ್ಡಿ ರಾಜಕೀಯದ ಬಗ್ಗೆ ಸದ್ಯ ನನಗೆ ಯಾವುದೇ ಮಾಹಿತಿ ಇಲ್ಲ. ನಾನು ಇನ್ನೂ ಅವರನ್ನು ಭೇಟಿಯಾಗಿಲ್ಲ. ಅವರು ಸಿಕ್ಕ ಬಳಿಕ ಅವರನ್ನು ಕೂರಿಸಿಕೊಂಡು ಮಾತನಾಡಿ ಮನವೊಲಿಸುವ ಕೆಲಸ ಮಾಡುವೆ. ಅಲ್ಲದೇ ಪಕ್ಷಕ್ಕೆ ಮುಜುಗರವಾಗದಂತೆ ಎಲ್ಲವನ್ನು ಸಮಾನಾಗಿ ತೆಗೆದುಕೊಂಡು ಹೋಗುವೆ ಎಂದರು. ಇನ್ನು ಗಂಗಾವತಿಯಲ್ಲಿ ಜನಾರ್ದನ ರೆಡ್ಡಿ ಜತೆ ಬಿಜೆಪಿ ನಾಯಕರು ಕಾಣಿಸಿಕೊಂಡ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರೆಲ್ಲರೂ ಹನುಮ ಜಯಂತಿಗೆ ತೆರಳಿದ್ದರು. ಸಾರ್ವಜನಿಕ ಕಾರ್ಯಕ್ರಮ ಆಗಿರುವುದರಿಂದ ಎಲ್ಲರೂ ಪಕ್ಷಾತೀತವಾಗಿ ಪಾಲ್ಗೊಳ್ಳುವುದು ಸಹಜ. ಈ ಬಗ್ಗೆ ಯಾರು ಅಪಾರ್ಥ ಕಲ್ಪಿಸುವುದು ಬೇಡ ಎಂದರು.

ಜನಾರ್ದನ ರೆಡ್ಡಿ ಎಲ್ಲೇ ಇದ್ರೂ ಒಳ್ಳೆಯದಾಗಲಿ: ‘ನನ್ನ ಗೆಳೆಯ ಜನಾರ್ದನ ರೆಡ್ಡಿ ಎಲ್ಲೇ ಇದ್ರೂ ಅವರಿಗೆ ಒಳ್ಳೆಯದಾಗಲಿ’ಎಂದು ಹಾರೈಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ರೆಡ್ಡಿಯ ಹೊಸ ಪಕ್ಷದ ಸ್ಥಾಪನೆ ಗುಮಾನಿಗೆ ಪುಷ್ಟಿನೀಡಿದ್ದಾರೆ. ಸಚಿವ ಶ್ರೀರಾಮುಲು ಅವರ ಈ ರೀತಿಯ ಹೇಳಿಕೆ ರೆಡ್ಡಿ ನಡುವೆ ಬಿರುಕು ಕಾಣಿಸಿಕೊಂಡಿದೆ ಎಂಬ ಅನುಮಾನ ಸಹ ಮೂಡಿಸಿದ್ದು ಜನಾರ್ದನ ರೆಡ್ಡಿ ಹೊಸ ಪಕ್ಷದ ಸ್ಥಾಪಿಸಲಿದ್ದಾರೆ ಎಂದು ಆಗಾಗ್ಗೆ ಕೇಳಿ ಬರುತ್ತಿದ್ದ ಮಾತುಗಳು ಸಹ ಮುನ್ನೆಲೆಗೆ ಬಂದಂತಾಗಿದೆ. ಸುದ್ದಿಗಾರರ ಜತೆ ಮಾತನಾಡಿದ ಸಚಿವ ಶ್ರೀರಾಮುಲು, ತನ್ನ ಗೆಳೆಯ ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಕುರಿತು ಪ್ರತಿಕ್ರಿಯಿಸಿದರಲ್ಲದೆ,‘ಹೊಸ ಪಕ್ಷ ಸ್ಥಾಪಿಸೋದು ಅವರ ವಿವೇಚನೆಗೆ ಬಿಟ್ಟದ್ದು’ ಎಂದು ತಿಳಿಸಿದರು.

ಚುನಾವಣೆ ಹತ್ತಿರವಾಗುತ್ತಿದ್ದರೂ ಬಿಜೆಪಿ ಜನಾರ್ದನ ರೆಡ್ಡಿಯನ್ನು ಪರಿಗಣಿಸುತ್ತಿಲ್ಲ. ಇದರಿಂದ ರೆಡ್ಡಿ ಮುನಿಸಿಕೊಂಡಿದ್ದಾರೆ ಎಂಬ ಮಾತುಗಳು ಆಗಾಗ್ಗೆ ಕೇಳಿ ಬರುತ್ತಿದ್ದವು. ಇದಕ್ಕೆ ಪೂರಕವಾಗಿ ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸಿದ ಸಚಿವ ಬಿ.ಶ್ರೀರಾಮುಲು, ಕೆಲವು ವಿಚಾರದಲ್ಲಿ ಬಿಜೆಪಿ ಮೇಲೆ ಜನಾರ್ದನ ರೆಡ್ಡಿ ಅವರಿಗೆ ಬೇಸರವಿದೆ. ಎಲ್ಲವನ್ನೂ ಬಹಿರಂಗವಾಗಿ ಹೇಳಲು ಬರುವುದಿಲ್ಲ. ರೆಡ್ಡಿಯ ಬೇಸರಗೊಂಡಿರುವ ಕುರಿತು ಪಕ್ಷದ ಗಮನಕ್ಕೂ ತಂದಿರುವೆ ಎಂದರು. ಜನಾರ್ದನ ರೆಡ್ಡಿಯ ಹೊಸ ಪಕ್ಷ ನೋಂದಣಿಯಾಗಿರುವ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ಈ ಕುರಿತು ರೆಡ್ಡಿ ಎಂದೂ ಚರ್ಚಿಸಿಲ್ಲ. ಆದರೆ, ಜನಾರ್ದನ ರೆಡ್ಡಿ ಅವರು ಈ ಭಾಗದ ಪ್ರಭಾವಿ ನಾಯಕರಾಗಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ