ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರೈತರಿಗೆ ಅನುಕೂಲವಾಗುವಂತೆ ಎನ್‌ಡಿಆರ್‌ಎಫ್ ನಿಯಮಗಳನ್ನು ಕೂಡಲೇ ತಿದ್ದುಪಡಿ ಮಾಡಿ: ಸಿದ್ದರಾಮಯ್ಯ

Twitter
Facebook
LinkedIn
WhatsApp
ರೈತರಿಗೆ ಅನುಕೂಲವಾಗುವಂತೆ ಎನ್‌ಡಿಆರ್‌ಎಫ್ ನಿಯಮಗಳನ್ನು ಕೂಡಲೇ ತಿದ್ದುಪಡಿ ಮಾಡಿ: ಸಿದ್ದರಾಮಯ್ಯ

ಬೆಂಗಳೂರು: ಎನ್‌ಡಿಆರ್‌ಎಫ್ ನಿಯಮಗಳನ್ನು ಕೂಡಲೇ ತಿದ್ದುಪಡಿ ಮಾಡಿ ಪ್ರಕೃತಿ ವಿಕೋಪದಿಂದ ಆಗಿರುವ ಹಾನಿಗೆ ಸಮರ್ಪಕವಾದ ಪರಿಹಾರ ನೀಡುವಂತೆ ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಪರಿಹಾರವನ್ನು ಕೇಂದ್ರ ಸರ್ಕಾರ ರಾಜ್ಯಗಳಿಗೆ ಬಿಡುಗಡೆ ಮಾಡುತ್ತದೆ. ಪ್ರತಿ 5 ವರ್ಷಗಳಿಗೆ ಒಮ್ಮೆ ಎನ್‍ಡಿಆರ್‍ಎಫ್ ನಿಯಮಗಳನ್ನು ತಿದ್ದುಪಡಿ ಮಾಡಿ ರೈತರ ಬೆಳೆಗಳಿಗೆ ಇನ್‍ಪುಟ್ ಸಬ್ಸಿಡಿಯ ಮೊತ್ತ, ಮೀನುಗಾರರ ದೋಣಿಗಳಿಗೆ ಆದ ಹಾನಿ, ಜನ ಜಾನುವಾರುಗಳಿಗೆ ಉಂಟಾದ ತೊಂದರೆ, ಮನೆ ಹಾನಿ, ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಆದ ನಷ್ಟಗಳಿಗೆ ನೀಡುವ ಪರಿಹಾರದ ಮೊತ್ತವನ್ನು ಪರಿಷ್ಕರಿಸಲಾಗುತ್ತದೆ. ಆದರೆ 2015-20ಕ್ಕೆ ಅನ್ವಯವಾಗುವಂತೆ ರೂಪಿಸಿದ ನಿಯಮಗಳನ್ನು 2015 ರಲ್ಲಿ ಪರಿಷ್ಕರಿಸಲಾಗಿತ್ತು. ಸಹಜವಾಗಿ ಇದು 2020 ರಲ್ಲಿ ಮತ್ತೆ ಪರಿಷ್ಕರಿಸಬೇಕಾಗಿತ್ತು. ಇದುವರೆಗೂ ಪರಿಷ್ಕರಣೆ ಮಾಡಿಲ್ಲ.

ಕಳೆದ ಎರಡು ವರ್ಷಗಳಿಂದ ಎಲ್ಲ ಉತ್ಪನ್ನಗಳ ಬೆಲೆ ದುಪ್ಪಟ್ಟಾಗಿವೆ. ಹಣದುಬ್ಬರ ದಾಖಲೆ ಮಟ್ಟಕ್ಕೆ ತಲುಪಿದೆ. ಇಷ್ಟಾದರೂ ಕೇಂದ್ರ ಸರ್ಕಾರ ಎನ್‍ಡಿಆರ್‌ಎಫ್ ನಿಯಮಗಳನ್ನು ಪರಿಷ್ಕರಿಸಿಲ್ಲ. ಪ್ರಸ್ತುತ ಒಂದು ಎಕರೆ ಮಳೆಯಾಶ್ರಿತ ಪ್ರದೇಶದಲ್ಲಿ ರೈತರು ಬೆಳೆದ ಬೆಳೆ ಶೇ.33ಕ್ಕಿಂತ ಹೆಚ್ಚು ಹಾನಿಯಾದರೆ ಸಿಗುವ ಪರಿಹಾರ ಕೇವಲ 2720 ರೂಪಾಯಿ ಮಾತ್ರ. ಅದರಲ್ಲೂ ಗರಿಷ್ಠ 2.5 ಹೆಕ್ಟೇರ್ ಗೆ ಅಂದರೆ 6800 ಮಾತ್ರ. ಪ್ರತಿ ಗುಂಟೆಗೆ ಕೇವಲ 68 ರೂಪಾಯಿ ಸಿಗುತ್ತದೆ. ಆದರೆ ಒಂದು ಎಕರೆ ರಾಗಿ, ಜೋಳ ಬೆಳೆಯಲು ಕನಿಷ್ಠ 25000 ರೂಪಾಯಿ ಖರ್ಚು ತಗಲುತ್ತದೆ. ಈ ಮೊತ್ತ ಪರಿಷ್ಕರಣೆಯಾಗಲೇಬೇಕಾಗಿದೆ. ನಾನು ವಿಧಾನಸಭೆಯ ಅಧಿವೇಶನಗಳಲ್ಲಿ ಕನಿಷ್ಠ 25000 ರೂ ಕೊಡಿ ಎಂದು ಒತ್ತಾಯಿಸಿದ್ದೆ.

ಕೇಂದ್ರ ಸರ್ಕಾರ ಈ ಮೊತ್ತವನ್ನು ಪರಿಷ್ಕರಣೆ ಮಾಡದ ಕಾರಣದಿಂದ ಕಳೆದ 2 ವರ್ಷಗಳಿಂದ ರೈತರಿಗೆ ವಿಪರೀತ ಹಾನಿಯಾಗಿದೆ. ರಾಜ್ಯದಲ್ಲಿ ಕಳೆದ 3 ವರ್ಷಗಳಿಂದ ಸಂಭವಿಸಿರುವ ನಷ್ಟದ ಪ್ರಮಾಣ ಒಂದು ಅಂದಾಜಿನ ಪ್ರಕಾರ 2 ಲಕ್ಷ ಕೋಟಿ ರೂಗಳಷ್ಟಾಗಬಹುದು. ಆದರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಮೊತ್ತ ಕೇವಲ 3965 ಕೋಟಿ ರೂ ಮಾತ್ರ. ರಾಜ್ಯದಲ್ಲಿ ಮೇ ತಿಂಗಳಿಂದ ನವೆಂಬರ್‍ವರೆಗೆ ಸಂಭವಿಸಿದ ಪ್ರವಾಹದ ಹಾನಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಾರ್ಚ್-2022 ರಲ್ಲಿ ಕೇವಲ 492 ಕೋಟಿ ಬಿಡುಗಡೆ ಮಾಡಿದೆ. ಇದು ಮೋದಿ ಸರ್ಕಾರದ ವೇಗ ಮತ್ತು ರೈತ ಪರ ಕಾಳಜಿ ಎಂದು ನಾವು ಅರ್ಥ ಮಾಡಿಕೊಳ್ಳಬೇಕಾಗಿದೆ.

ಜನರು ಮತ್ತು ವಿರೋಧ ಪಕ್ಷಗಳು ಪರಿಹಾರಕ್ಕಾಗಿ ಒತ್ತಡಗಳನ್ನು ತಂದಾಗ ರಾಜ್ಯ ಸರ್ಕಾರ 2391 ಕೋಟಿ ರೂಪಾಯಿಗಳಷ್ಟು ಪರಿಹಾರವನ್ನು ರೈತರಿಗೆ ನೀಡಿತು. ಕೇಂದ್ರ ಸರ್ಕಾರ ನೀಡಬೇಕಾದ ಪರಿಹಾರದ ಮೊತ್ತವನ್ನು ರಾಜ್ಯ ಸರ್ಕಾರ ನೀಡಬೇಕಾಯಿತು. ಆ ಮೂಲಕ ಕೇಂದ್ರವು ರಾಜ್ಯವನ್ನು ಇನ್ನಷ್ಟು ನಶೋಷಣೆ ಮಾಡಿತು. ಕಳೆದ 3 ವರ್ಷಗಳಿಂದ ರಾಜ್ಯ ಸರ್ಕಾರ 3890 ಕೋಟಿ ರೂಗಳನ್ನು ರೈತರಿಗೆ, ವಸತಿ ಹಾನಿಯಾದವರಿಗೆ ನೀಡಿದೆ. ಇದಿಷ್ಟೂ ಸೇರಿದಂತೆ ಹೆಚ್ಚುವರಿ ಹಣವನ್ನು ಕೇಂದ್ರ ಸರ್ಕಾರ ನೀಡಬೇಕಾಗಿತ್ತು. ಯಾಕೆಂದರೆ ಪರಿಹಾರ ನೀಡುವುದಕ್ಕೋಸ್ಕರವೆ ಕೇಂದ್ರದ ಬಜೆಟ್‍ನಲ್ಲಿ ಹಣ ಮೀಸಲಿರಿಸಲಾಗುತ್ತದೆ. ಆದರೆ ಕರ್ನಾಟಕಕ್ಕೆ ಕೊಡಬೇಕಾದಷ್ಟು ಪರಿಹಾರವನ್ನು ನೀಡದೆ ಅನ್ಯಾಯ ಮಾಡಿದೆ.

ಆದ್ದರಿಂದ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದೇನೆಂದರೆ, ಮೊದಲು ಎನ್‍ಡಿಆರ್‌ಎಫ್ ನಿಯಮಗಳಿಗೆ 2020ರಿಂದಲೆ ಪೂರ್ವಾನ್ವಯವಾಗುವಂತೆ ತಿದ್ದುಪಡಿ ಮಾಡಿ ಬಾಕಿ ಪರಿಹಾರವನ್ನು ಬಿಡುಗಡೆ ಮಾಡಬೇಕು. ರೈತರಿಗೆ ನಷ್ಟವಾದ ಅಷ್ಟೂ ಹಣವನ್ನು ನಷ್ಟವಾದ ಅಷ್ಟೂ ಎಕರೆಗೆ ಪರಿಹಾರ ನೀಡುವ ಹಾಗೆ ತಿದ್ದುಪಡಿ ತರಬೇಕು. ಮನೆ ಕಳೆದುಕೊಂಡವರಿಗೆ, ಮೀನುಗಾರರಿಗೆ ಹಾಗೂ ಇತರೆ ಎಲ್ಲ ಬಾಧಿತರಿಗೆ ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಪರಿಹಾರ ನೀಡುವಂತಾಗಬೇಕು.

ಜೊತೆಗೆ ಹವಾಮಾನ ವೈಪರೀತ್ಯವು ರೈತರನ್ನು ತೀವ್ರವಾಗಿ ಬಾಧಿಸುವ ಸಂಗತಿಯಾದ ಕಾರಣ ಮುಂದಿನ ದಿನಗಳಲ್ಲಿ ಈ ಸಮಸ್ಯೆ ಇನ್ನೂ ಹೆಚ್ಚಾಗುತ್ತದೆ. ರೈತರು ಇನ್ನಷ್ಟು ಹೆಚ್ಚು ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದು ವಿಜ್ಞಾನಿಗಳು ತಜ್ಞರು ರಾಜ್ಯ ಸರ್ಕಾರಕ್ಕೆ ಹಿಂದಿನ ವರ್ಷ ವರದಿ ನೀಡಿದ್ದಾರೆ. ಸದರಿ ವರದಿಯನ್ನು ಆಧರಿಸಿ ಸರ್ಕಾರ ಸಮಗ್ರವಾದ ಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸಬೇಕಾಗಿತ್ತು.

ಆದರೆ ಭ್ರಷ್ಟಾಚಾರದ ಕೂಪದಲ್ಲಿ ಮುಳುಗೇಳುತ್ತಿರುವ ಸರ್ಕಾರಕ್ಕೆ ಇದನ್ನೆಲ್ಲ ಮಾಡಲು ಪುರುಸೊತ್ತು ಇಲ್ಲವಾಗಿದೆ. ಪ್ರವಾಹ, ಬರ ಬಂದು ಜನರು ಸಂಕಷ್ಟದಲ್ಲಿದ್ದಾಗಲೂ ಸರ್ಕಾರ ನಿದ್ರೆಯಲ್ಲಿದ್ದಂತೆ ನಟಿಸಿಕೊಂಡು ಕಾಲ ಕಳೆದಿದೆ. ಜಿಲ್ಲಾ ಉಸ್ತುವಾರಿ ಸಚಿವರುಗಳಲ್ಲಿ ಬಹುಪಾಲು ಜನರು ಜಿಲ್ಲೆಗಳಿಗೆ ಭೇಟಿ ಮಾಡದೆ ನಿರ್ಲಕ್ಷ್ಯ ಮಾಡಿದರು. ಹಾಗಾಗಿ ಸರ್ಕಾರ ಜಡತೆಯಿಂದ, ಮನುಷ್ಯರನ್ನು ದ್ವೇಷದಿಂದ ಒಡೆದು ಹಾಕುವ ಕೆಟ್ಟತನದಿಂದ ಹೊರಬಂದು ಬರ ಪ್ರವಾಹಗಳನ್ನು ವೈಜ್ಞಾನಿಕ ರೀತಿಯಲ್ಲಿ ನಿಭಾಯಿಸುವಂತಹ ವ್ಯವಸ್ಥೆ ರೂಪಿಸಬೇಕು.

ಇತ್ತೀಚೆಗೆ ಅಸಾನಿ ಚಂಡಮಾರುತದಿಂದ ತೊಂದರೆಗಳಿಗೆ ಒಳಗಾದವರಿಗೆ ತುರ್ತಾಗಿ ಪರಿಹಾರ ನೀಡಬೇಕು. ಕಳೆದ ಮೂರು ವರ್ಷಗಳಿಂದ ಹಾನಿಯಾಗಿರುವ ಸಾವಿರಾರು ಮನೆಗಳಿಗೆ ಈಗಲೂ ಸಮರ್ಪಕ ಪರಿಹಾರ ನೀಡಿಲ್ಲ. ಶಾಶ್ವತ ನೆಲೆ ಕಲ್ಪಿಸಿಲ್ಲ. ಈ ವ್ಯವಸ್ಥೆಯನ್ನು ತುರ್ತಾಗಿ ಮಾಡಬೇಕಾಗಿದೆಯೆಂದು ಆಗ್ರಹಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist