ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರೈತರ ಹಿತರಕ್ಷಣೆಗೆ ಕಾಯ್ದೆ ರೂಪಿಸಲು ರಾಜ್ಯ ಸರಕಾರಗಳಿಗೆ ಸ್ವಾತಂತ್ರ್ಯವಿದೆ -ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ

Twitter
Facebook
LinkedIn
WhatsApp
ರೈತರ ಹಿತರಕ್ಷಣೆಗೆ ಕಾಯ್ದೆ ರೂಪಿಸಲು ರಾಜ್ಯ ಸರಕಾರಗಳಿಗೆ ಸ್ವಾತಂತ್ರ್ಯವಿದೆ -ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ

ಮಡಿಕೇರಿ: ಕೃಷಿ, ರಾಜ್ಯಗಳಿಗೆ ಸಂಬಂಧಿಸಿದ ವಿಷಯವಾಗಿದ್ದು,‌ ರೈತರ ಹಿತ ಕಾಯಲು ಅಗತ್ಯವಿರುವ ಕಾನೂನುಗಳನ್ನು ರೂಪಿಸಲು ರಾಜ್ಯ ಸರಕಾರಗಳಿಗೆ ಸಂಪೂರ್ಣ ಸ್ವಾತಂತ್ರ್ಯವಿದೆ ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ನುಡಿದರು.
ಮಡಿಕೇರಿಯಲ್ಲಿ ಬಿಜೆಪಿಯ ಜನಸ್ವರಾಜ್ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ‌ ಅವರು, ಮೂರು ಕೃಷಿ ಮಸೂದೆಗಳನ್ನು ಸರಕಾರ ವಾಪಾಸು ಪಡೆದಿದ್ದರೂ, ರೈತರ ಹಿತ ಕಾಯಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೇಂದ್ರ ಸರಕಾರ ಕೈಗೊಳ್ಳಲಿದೆ ಎಂದು ಹೇಳಿದರು.
ಕೃಷಿ ಕಾಯ್ದೆ ರೂಪಿಸುವುದು 30 ವರ್ಷಗಳ ಹಿಂದಿನ‌ ಬೇಡಿಕೆಯಾಗಿದ್ದು, ಬೇರೆಬೇರೆ ಸರಕಾರಗಳು ಅಧಿಕಾರದಲ್ಲಿದ್ದಾಗಲೂ ಈ ಬಗ್ಗೆ ಚರ್ಚೆಯಾಗಿದೆ. ಅಲ್ಲದೆ ಬೇರೆಬೇರೆ ಸಮಿತಿಗಳು ನೀಡಿದ ವರದಿಯ ಆಧಾರಲ್ಲೇ ಕಾಯ್ದೆಯನ್ನು ರೂಪಿಸಲಾಗಿದೆ. ಆದರೆ ಕಾಯ್ದೆಯ ಕುರಿತು ಜನತೆಗೆ ಮನವರಿಕೆ ಮಾಡಿಕೊಡುವಲ್ಲಿ ಕೊರೋನಾ ಕಾರಣದಿಂದಾಗಿ ಸ್ವಲ್ಪ ಹಿನ್ನಡೆಯಾಯಿತು ಎಂದು ಶೋಭಾ ಕರಂದ್ಲಾಜೆ ಒಪ್ಪಿಕೊಂಡರು.
ಕೃಷಿ, ರಾಜ್ಯಗಳಿಗೆ ಸಂಬಂಧಿಸಿದ ವಿಷಯವಾಗಿದ್ದು,ಆಯಾ ರಾಜ್ಯದ ರೈತರ ಹಿತ ಕಾಯಲು ಅಗತ್ಯವಿರುವ ಕಾನೂನುಗಳನ್ನು ರೂಪಿಸಲು ರಾಜ್ಯ ಸರಕಾರಗಳಿಗೆ ಸಂಪೂರ್ಣ ಸ್ವಾತಂತ್ರ್ಯವಿದೆ. ಕರ್ನಾಟಕದಲ್ಲೂ ರೈತ ಪರವಾದ ಬಿಜೆಪಿ ಸರಕಾರವಿದ್ದು, ರೈತರ ಹಿತ ಕಾಪಾಡಲು ಸರಕಾರ ಬದ್ಧವಾಗಿದೆ. ಅಲ್ಲದೆ ಇತರ ಬಿಜೆಪಿ ಆಡಳಿತದ ರಾಜ್ಯಗಳಲ್ಲೂ ರೈತರ ರಕ್ಷಣೆಗೆ ಅಗತ್ಯವಿರುವ ಕಾನೂನುಗಳನ್ನು ರೂಪಿಸಲು ಅವುಗಳು ಬದ್ಧವಾಗಿವೆ. ಅದರಂತೆ ಕೇಂದ್ರ ದರ ಸರಕಾರವೂ ರೈತರ ಹಿತ ರಕ್ಷಣೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಅವರು ನುಡಿದರು.

ಮರು ಸಮೀಕ್ಷೆಗೆ ಆದೇಶ: ಕೊಡಗು ಸೇರಿದಂತೆ ರಾಜ್ಯದ ಕಾಫಿ ಬೆಳೆಯುವ ಜಿಲ್ಲೆಗಳಲ್ಲಿ ಈ ಬಾರಿ ಅಕಾಲಿಕ ಮಳೆ ಹಾಗೂ ಅತಿವೃಷ್ಟಿಯಿಂದಾಗಿ ಕಾಫಿ,ಅಡಿಕೆ ಹಾಗೂ ಭತ್ತದ ಬೆಳೆಗೆ ಭಾರೀ ಹಾನಿಯುಂಟಾಗಿದ್ದು, ಈ ನಿಟ್ಟಿನಲ್ಲಿ ಕಾಫಿ ನಷ್ಟದ ಮರು ಸಮೀಕ್ಷೆ ನಡೆಸಿ ವರದಿ ನೀಡುವಂತೆ ವಾಣಿಜ್ಯ ಸಚಿವಾಲಯದ ಮೂಲಕ ಕಾಫಿ ಮಂಡಳಿಗೆ ಆದೇಶ ಕೊಡಿಸಲಾಗುವುದು ಎಂದು ಶೋಭಾ ಕರಂದ್ಲಾಜೆ ಅವರು ನಂತರ ನಡೆದ ಜನ ಸ್ವರಾಜ್ ಸಮಾವೇಶದಲ್ಲಿ ಭರವಸೆ ನೀಡಿದರು.
ಸಮಾವೇಶದಲ್ಲಿ ವೀರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಅವರು ಈ ಸಂಬಂಧವಾಗಿ ಸಚಿವರ ಗಮನಸೆಳೆದು, ಕಾಫಿ ಮಂಡಳಿ ಅಧಿಕಾರಿಗಳು ಸ್ಥಳ ಸಮೀಕ್ಷೆ ಮಾಡದೆ ಬೆಳೆಗಾರರೊಂದಿಗೆ ಉಡಾಫೆಯಿಂದ ವರ್ತಿಸುತ್ತಿದ್ದು, ಕಾಫಿ ಬೆಳೆ ಹಾನಿಯಾಗಿರುವ ಕೆಲವು ಗ್ರಾಮಗಳನ್ನೇ ಕೈಬಿಟ್ಟಿದ್ದಾರೆ. ಇದರಿಂದಾಗಿ ಕೊಡಗಿನಲ್ಲಿ ಬಹುತೇಕ ಕಾಫಿ ಬೆಳೆಗಾರರು ಪರಿಹಾರದಿಂದ ವಂಚಿತರಾಗುವ ಸಂಭವವಿದೆ ಎಂದು ಕಳವಳ ವ್ಯಕ್ತಪಡಿಸಿದರಲ್ಲದೆ, ಈ‌ ಸಂಬಂಧ ಮರು ಸಮೀಕ್ಷೆಗೆ ಕೇಂದ್ರ ಸರಕಾರದಿಂದಲೇ ಆದೇಶ ಹೊರಡಿಸಬೇಕೆಂದು ಮನವಿ ಮಾಡಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು