ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರೋಚಕ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಅಮೋಘ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದ ಚೆನ್ನೈ ಸೂಪರ್ ಕಿಂಗ್ಸ್

Twitter
Facebook
LinkedIn
WhatsApp
Dhoni 6 1

IPL 2023 GT vs CSK: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್​​ಗೆ ಸೋಲುಣಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಫೈನಲ್​ಗೆ ಪ್ರವೇಶಿಸಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡಕ್ಕೆ ಆರಂಭಿಕರಾದ ಡೆವೊನ್ ಕಾನ್ವೆ ಹಾಗೂ ರುತುರಾಜ್ ಗಾಯಕ್ವಾಡ್ ಉತ್ತಮ ಆರಂಭ ಒದಗಿಸಿದ್ದರು.

ಮೊದಲ ವಿಕೆಟ್​ಗೆ 87 ರನ್ ಪೇರಿಸಿದ ಈ ಜೋಡಿಯನ್ನು ಮೋಹಿತ್ ಶರ್ಮಾ ಬೇರ್ಪಡಿಸಿದರು. ಅದರಂತೆ 60 ರನ್ ಬಾರಿಸಿದ್ದ ರುತುರಾಜ್ ಗಾಯಕ್ವಾಡ್ ಮೊದಲು ನಿರ್ಗಮಿಸಿದರು. ಆ ಬಳಿಕ ಕಾನ್ವೆ (40) ಕೂಡ ವಿಕೆಟ್ ಕೈಚೆಲ್ಲಿದರು.

ಇದಾದ ಬಳಿಕ ಮಧ್ಯಮ ಕ್ರಮಾಂಕದಲ್ಲಿ ಸಿಎಸ್​ಕೆ ತಂಡವು ಕುಸಿತಕ್ಕೊಳಗಾದರೂ ಅಂತಿಮವಾಗಿ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 172 ರನ್​ ಪೇರಿಸುವಲ್ಲಿ ಯಶಸ್ವಿಯಾದರು.

173 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ಗುಜರಾತ್ ಟೈಟಾನ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಪವರ್​ಪ್ಲೇನಲ್ಲೇ ವೃದ್ದಿಮಾನ್ ಸಾಹ ಹಾಗೂ ಹಾರ್ದಿಕ್ ಪಾಂಡ್ಯ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಇದಾಗ್ಯೂ ನಿಧಾನಗತಿಯಲ್ಲಿ ಬ್ಯಾಟ್ ಬೀಸಿದ ಶುಭ್​ಮನ್ ಗಿಲ್ 40 ರನ್ ಬಾರಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಆದರೆ ಗಿಲ್ ನಿರ್ಗಮನದ ಬೆನ್ನಲ್ಲೇ ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ ಕೂಡ ವಿಕೆಟ್ ಒಪ್ಪಿಸಿದರು.

ಕೊನೆಯ 4 ಓವರ್​ಗಳಲ್ಲಿ ಗುಜರಾತ್ ಟೈಟಾನ್ಸ್​ಗೆ ಗೆಲ್ಲಲು 58 ರನ್​ಗಳು ಬೇಕಿತ್ತು. ಈ ಹಂತದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ರಶೀದ್ ಖಾನ್ 30 ರನ್ ಬಾರಿಸಿ ಔಟಾದರು. ಇದಾಗ್ಯೂ ಕೊನೆಯ ಓವರ್​ನಲ್ಲಿ 27 ರನ್​ಗಳ ಗುರಿ ಪಡೆದ ಗುಜರಾತ್ ಟೈಟಾನ್ಸ್ ತಂಡವು 157 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಸಿಎಸ್​ಕೆ 15 ರನ್​ಗಳ ಭರ್ಜರಿ ಜಯ ಸಾಧಿಸಿತು.

ಅಂದಹಾಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಐಪಿಎಲ್​ನಲ್ಲಿ ಫೈನಲ್ ಪ್ರವೇಶಿಸುತ್ತಿರುವುದು ಇದು 10ನೇ ಬಾರಿ. ಅಂದರೆ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಐಪಿಎಲ್ ಫೈನಲ್ ಆಡಿದ ದಾಖಲೆ ಸಿಎಸ್​ಕೆ ತಂಡದ ಹೆಸರಿನಲ್ಲಿದೆ. 2ನೇ ಸ್ಥಾನದಲ್ಲಿ 6 ಫೈನಲ್ ಪಂದ್ಯವಾಡಿದ ಮುಂಬೈ ಇಂಡಿಯನ್ಸ್ ಇದೆ.

ಈ ಸೋಲಿನೊಂದಿಗೆ ಗುಜರಾತ್ ಟೈಟಾನ್ಸ್ ತಂಡವು 2ನೇ ಕ್ವಾಲಿಫೈಯರ್ ಆಡಬೇಕಿದೆ. ಅಂದರೆ ಬುಧವಾರ ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯದಲ್ಲಿ ಗೆಲ್ಲುವ ತಂಡದೊಡನೆ ಗುಜರಾತ್ ಟೈಟಾನ್ಸ್ ತಂಡ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸುವ ತಂಡ ಸಿಎಸ್​ಕೆ ವಿರುದ್ಧ ಫೈನಲ್ ಆಡಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ