ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ವಿಸರ್ಜನೆ

Twitter
Facebook
LinkedIn
WhatsApp
ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ವಿಸರ್ಜನೆ
 

ಬೆಂಗಳೂರು: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯನ್ನು ಸರ್ಕರ ರದ್ದುಗೊಳಿಸಿದೆ. ಪಠ್ಯಪುಸ್ತಕ ಪರಿಷ್ಕರಣೆ ಕಾರ್ಯ ಮುಗಿದಿರುವುದರಿಂದ ಹಾಲಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಿಸರ್ಜಿಸಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಆದರೆ, ಪಿಯು ಪಠ್ಯಪುಸ್ತಕ ಪರಿಷ್ಕರಣೆಯನ್ನು ರೋಹಿತ್ ಚಕ್ರತೀರ್ಥ ಸಮಿತಿಗೆ ವಹಿಸಿ ಕಳೆದ ಫೆಬ್ರವರಿಯಲ್ಲಿ ಆದೇಶ ಹೊರಡಿಸಲಾಗಿತ್ತು. ಇದನ್ನೂ ರದ್ದುಪಡಿಸಿರುವ ಬಗ್ಗೆ ಯಾವುದೇ ಮಾಹಿತಿಯನ್ನು ಸರ್ಕಾರ ನೀಡಿಲ್ಲ.

 

ಪಠ್ಯಪುಸ್ತಕದಲ್ಲಿ ಬಸವಣ್ಣನವರ ಕುರಿತ ಅಂಶವನ್ನು ಸೂಕ್ತ ಪರಿಷ್ಕರಣೆ ಮಾಡುವುದರ ಜತೆಗೆ ನಾಡಗೀತೆ ವಿಕೃತಿಗೊಳಿಸಿದ ವ್ಯಕ್ತಿಗಳ ಬಗ್ಗೆ ಕಾನೂನಾತ್ಮಕ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪಠ್ಯ ಪರಿಷ್ಕರಣೆ ಗೊಂದಲಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಜತೆ ಸಭೆ ನಡೆಸಿದ ಬಳಿಕ ಅವರು ಶುಕ್ರವಾರ ರಾತ್ರಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಪ್ರಸ್ತುತ ಪರಿಷ್ಕರಿಸಿದ ಪಠ್ಯಪುಸ್ತಕದಲ್ಲಿ ಯಾವುದಾದರೂ ಆಕ್ಷೇಪಾರ್ಹ ವಿಷಯಗಳು ಇದ್ದಲ್ಲಿ ಅವುಗಳನ್ನು ಮತ್ತೊಮ್ಮೆ ಪರಿಷ್ಕರಿಸಲು ಸರ್ಕಾರ ಮುಕ್ತ ಮನಸ್ಸು ಹೊಂದಿದೆ ಎಂದೂ ಸಿಎಂ ಹೇಳಿದ್ದಾರೆ.

ಬರಗೂರು ರಾಮಚಂದ್ರಪ್ಪ ಅಧ್ಯಕ್ಷತೆಯ ಸಮಿತಿ ರಚಿಸಿದ ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿ ರಾಷ್ಟ್ರಕವಿ ಕುವೆಂಪು ಕುರಿತಾದ 7 ಗದ್ಯ ಮತ್ತು ಪದ್ಯಗಳು ಸೀಮಿತವಾಗಿದ್ದರೆ, ಪ್ರಸ್ತುತ ಪರಿಷ್ಕರಣಾ ಸಮಿತಿ 10ಕ್ಕೆ ಏರಿಸುವ ಮೂಲಕ ವಿವಾದದಿಂದ ಬಚಾವಾಗಲು ಸರ್ಕಾರ ಯತ್ನಿಸಿದೆ.

ನಾಡಪ್ರಭು ಕೆಂಪೇಗೌಡರ ಕುರಿತಾದ ಪಾಠವನ್ನು ಹೊಸದಾಗಿ ಸೇರಿಸಲಾಗಿದೆ. ಈ ಹಿಂದಿನ ಪಠ್ಯ ಪುಸ್ತಕದಲ್ಲಿ ಪರಿಚಯಿಸಲಾಗಿದ್ದ ಇಸ್ಲಾಂ ಮತ್ತು ಕ್ರೈಸ್ತ ಧರ್ಮದ ಜತೆಗೆ ಹಿಂದೂ ಧರ್ಮದ ವಿಷಯವನ್ನೂ ಸರ್ಕಾರ ಸೇರ್ಪಡೆ ಮಾಡಿದೆ.

ಪಂಡಿತಾರಾಧ್ಯ ಸ್ವಾಮೀಜಿ ಮತ್ತು ಇತರ ಸ್ವಾಮೀಜಿಗಳು ಪಠ್ಯಪುಸ್ತಕದಲ್ಲಿ ಬಸವಣ್ಣನವರ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಆಕ್ಷೇಪಗಳ ಬಗ್ಗೆ ಪ್ರಸ್ತಾಪಿಸಿದ ಸಿಎಂ, ಈಗಿನ ಪುಸ್ತಕದಲ್ಲಿ ಬಸವಣ್ಣ ಅವರ ವಿಷಯದ ಅಂಶವನ್ನು ಯಾರ ಭಾವನೆಗೂ ಧಕ್ಕೆ ಆಗದಂತೆ ಪರಿಷ್ಕರಿಸಲಾಗುವುದು ಎಂದೂ ಹೇಳಿದ್ದಾರೆ. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶಯದಂತೆ ಕುವೆಂಪು ಬರೆದ ನಾಡಗೀತೆಯನ್ನು

ವಿಕೃತಗೊಳಿಸಿದವರ ವಿರುದ್ಧ ಸೈಬರ್ ಕ್ರೈಮ್ ಘಟಕದ ಮೂಲಕ ತನಿಖೆ ನಡೆಸಲಾಗುವುದು ಎಂದೂ ಸಿಎಂ ಹೇಳಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ