ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಲೋಕಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆ ಮುಕ್ತಾಯ; ಒಟ್ಟು 358 ಅಭ್ಯರ್ಥಿಗಳು ಕಣಕ್ಕೆ.!

Twitter
Facebook
LinkedIn
WhatsApp
ಲೋಕಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆ ಮುಕ್ತಾಯ; ಒಟ್ಟು 358 ಅಭ್ಯರ್ಥಿಗಳು ಕಣಕ್ಕೆ.!

ಬೆಂಗಳೂರು: ರಾಜ್ಯದಲ್ಲಿನ ಮೊದಲ‌ ಹಂತದ ಲೋಕಸಮರದ ಚುನಾವಣೆಗೆ ನಾಮಪತ್ರ(Nomination) ಸಲ್ಲಿಕೆ ಪ್ರಕ್ರಿಯೆ ಇಂದು ಅಂತ್ಯವಾಗಿದ್ದು, ರಾಜ್ಯದಲ್ಲಿ ಒಟ್ಟು 358 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಮೊದಲ ಹಂತದ 14 ಕ್ಷೇತ್ರಗಳಲ್ಲಿ ಚುನಾವಣೆಯ ನಡೆಯಲಿದೆ. ಮಾ.28ರಿಂದ ಇಂದಿನವರೆಗೆ ನಡೆದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಒಟ್ಟು 358 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ಈ ಪೈಕಿ 333 ಪುರುಷರು ಹಾಗೂ 25 ಮಹಿಳೆಯರು ನಾಮಪತ್ರ ಸಲ್ಲಿಸಿದ್ದಾರೆ. ಇದರಲ್ಲಿ ಒಟ್ಟು 211 ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನೋಂದಾಯಿತ ಮಾನ್ಯತೆ ಪಡೆಯದ ವಿವಿಧ ಪಕ್ಷಗಳ ಒಟ್ಟು 161 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಇಂದು ಒಂದೇ ಕೊನೆ ದಿನ ಉಮೇದುವಾರಿಗೆ ಸಲ್ಲಿಸುವ ಭರಾಟೆ ಜೋರಾಗಿತ್ತು. ಒಂದೇ ದಿನ 183 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಈ ಪೈಕಿ 171 ಪುರುಷರು ಹಾಗೂ 12 ಮಹಿಳೆಯರಿದ್ದಾರೆ. ಒಟ್ಟು 102 ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನೋಂದಾಯಿತ ಮಾನ್ಯತೆ ಪಡೆಯದ ವಿವಿಧ ಪಕ್ಷಗಳ 71 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆಯಲಿರುವ 14 ಲೋಕಸಭೆ ಕ್ಷೇತ್ರಗಳ ಚುನಾವಣೆಗೆ ಮಾ.28ರಂದು ಅಧಿಸೂಚನೆ ಹೊರಡಿಸಲಾಗಿತ್ತು. ನಾಮಪತ್ರ ಸಲ್ಲಿಸಲು ಏ.4 ಕೊನೆ ದಿನ ಮತ್ತು ಹಿಂಪಡೆಯುವ ಏ.8 ಕೊನೆ ದಿನವಾಗಿದೆ.

ಎಲ್ಲಿಲ್ಲಿ ಎಷ್ಟು ಅಭ್ಯರ್ಥಿಗಳು ನಾಮಪತ್ರ?:

ಉಡುಪಿ ಚಿಕ್ಕಮಗಳೂರು – 13
ಹಾಸನ – 21
ದಕ್ಷಿಣ ಕನ್ನಡ – 11
ಚಿತ್ರದುರ್ಗ (ಎಸ್‌ಸಿ) – 28
ತುಮಕೂರು – 22
ಮಂಡ್ಯ – 27
ಮೈಸೂರು – 28
ಚಾಮರಾಜನಗರ (ಎಸ್‌ಸಿ) – 25
ಬೆಂಗಳೂರು ಗ್ರಾಮಾಂತರ – 31
ಬೆಂಗಳೂರು ಉತ್ತರ – 25
ಬೆಂಗಳೂರು ಕೇಂದ್ರ – 32
ಬೆಂಗಳೂರು ದಕ್ಷಿಣ – 34
ಚಿಕ್ಕಬಳ್ಳಾಪುರ – 36
ಕೋಲಾರ (ಎಸ್‌ಸಿ) – 2

ನಾಮಪತ್ರ ಸಲ್ಲಿಸಿರುವ ಪ್ರಮುಖರು: ಮೊದಲ ಹಂತದ ಚುನಾವಣೆಗೆ ಘಟಾನುಘಟಿ ನಾಯಕರು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್​.ಡಿ. ಕುಮಾರಸ್ವಾಮಿ, ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕಾಂಗ್ರೆಸ್​ನಿಂದ ಲಕ್ಷ್ಮಣ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಡಾ. ಸಿ.ಎನ್.ಮಂಜುನಾಥ್, ಕಾಂಗ್ರೆಸ್​ನಿಂದ ಡಿ.ಕೆ.ಸುರೇಶ್, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯಿಂದ ಮಾಜಿ ಸಚಿವ ಡಾ. ಕೆ.ಸುಧಾಕರ್, ಬೆಂಗಳೂರು ದಕ್ಷಿಣದಿಂದ ಬಿಜೆಪಿಯ ತೇಜಸ್ವಿ ಸೂರ್ಯ, ಚಿತ್ರದುರ್ಗದಲ್ಲಿ ಬಿಜೆಪಿಯಿಂದ ಗೋವಿಂದ ಜಾರಕಿಹೊಳಿ, ಹಾಸನದಲ್ಲಿ ಜೆಡಿಎಸ್​ನಿಂದ ಪ್ರಜ್ವಲ್ ರೇವಣ್ಣ, ತುಮಕೂರಲ್ಲಿ ಕಾಂಗ್ರೆಸ್​​ನಿಂದ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ, ಕೋಲಾರದಲ್ಲಿ ಕಾಂಗ್ರೆಸ್​ನಿಂದ ಕೆ.ವಿ. ಗೌತಮ್ ಮತ್ತು ಜೆಡಿಎಸ್​ನಿಂದ ಮಲ್ಲೇಶ್ ಬಾಬು, ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಇಂದು ಉಮೇದುವಾರಿಕೆ ಸಲ್ಲಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist