ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಮಹಿಳೆ ಶವವಾಗಿ ಪತ್ತೆ

Twitter
Facebook
LinkedIn
WhatsApp
227145 relationshiptips

ನವದೆಹಲಿ: ಲಿವ್ ಇನ್ ರಿಲೇಶನ್‍ಶಿಪ್‍ನಲ್ಲಿದ್ದ (Live-In Partner) ಮಹಿಳೆಯೊಬ್ಬಳು (Woman) ಶವವಾಗಿ ಪತ್ತೆಯಾದ ಘಟನೆ ದೆಹಲಿಯ (Newdelhi) ಮಂಗೋಲ್‍ಪುರ ಕಲನ್ ಗ್ರಾಮದಲ್ಲಿ ನಡೆದಿದೆ.

ಮಂಗೋಲ್‍ಪುರ ಕಲನ್ ಗ್ರಾಮದ ಮನೆಯೊಂದರ 2ನೇ ಮಹಡಿಯಲ್ಲಿ 36 ವರ್ಷದ ಮಹಿಳೆಯ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮಹಿಳೆ ಉತ್ತರ ಪ್ರದೇಶದ ಆಗ್ರಾ ನಿವಾಸಿಯಾಗಿದ್ದು, ಆಕೆ ಆಗ್ರಾ ಮೂಲದ ವ್ಯಕ್ತಿಯೊಂದಿಗೆ ಲಿವ್ ಇನ್ ರಿಲೇಶನ್‍ಶಿಪ್‍ನಲ್ಲಿದ್ದಳು.

ಈ ಇಬ್ಬರು ಒಟ್ಟಾಗಿ ಇರುವುದನ್ನು ಮನೆ ಮಾಲೀಕರು ಅನೇಕ ಬಾರಿ ನೋಡಿದ್ದರು. ಆದರೆ ನಿನ್ನೆ ಮನೆಯ ಬಾಗಿಲು ಅರ್ಧ ತೆಗೆದಿರುವುದನ್ನು ಗಮನಿಸಿದ ಮನೆ ಮಾಲೀಕ ಒಳಗೆ ಹೋಗಿ ನೋಡಿದ್ದಾರೆ. ಅಲ್ಲಿ ಮಹಿಳೆ ಶವವಾಗಿ ಬಿದ್ದಿದ್ದಳು. ಅಷ್ಟೇ ಅಲ್ಲದೇ ಲಿವ್ ಇನ್ ರಿಲೇಶನ್‍ನಲ್ಲಿದ್ದ ವ್ಯಕ್ತಿ ನಾಪತ್ತೆ ಆಗಿದ್ದ.

ಘಟನೆಗೆ ಸಂಬಂಧಿಸಿ ಕೂಡಲೇ ರೋಹಿಣಿ ದಕ್ಷಿಣ ಪೊಲೀಸ್ ಠಾಣೆಗೆ ಮನೆ ಮಾಲೀಕ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಶವವನ್ನು ವಶಕ್ಕೆ ಪಡೆದು, ಪೋಸ್ಟ್ ಮಾರ್ಟಂಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಷ್ಟೇ ಅಲ್ಲದೇ ಮಹಿಳೆಯ ಶವದ ಮೇಲೆ ಯಾವುದೇ ಗಾಯದ ಗುರುತುಗಳಿರಲಿಲ್ಲ.

crime

ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಲಿವ್ ಇನ್ ರಿಲೇಶನ್‍ನಲ್ಲಿದ್ದ ವ್ಯಕ್ತಿಗೆ ಕರೆ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ಆತನ ಫೋನ್ ಸ್ವಿಚ್ ಆಫ್ ಆಗಿದ್ದು, ಮನೆಯಿಂದ ನಾಪತ್ತೆ ಆಗಿದ್ದಾನೆ.

ಈ ಹಿನ್ನೆಲೆಯಲ್ಲಿ ಆಕೆಯ ಪತಿ ಶಹದಾರ ನಿವಾಸಿಗೆ ಸಂಪರ್ಕಿಸಿದ್ದಾರೆ. ಈ ವೇಳೆ ಆಕೆಗೆ 2011 ರಲ್ಲಿ ವಿವಾಹವಾಗಿದ್ದು, ಒಬ್ಬ ಮಗ ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ ಎಂಬ ವಿಷಯ ಬೆಳಕಿಗೆ ಬಂದಿದೆ. 

ಮಹಿಳೆಯ ಪತಿ (Husband) ಪಂಜಾಬ್‍ನ ಜಿರಾಕ್‍ಪುರದಲ್ಲಿ ಕೆಲಸ ಮಾಡುತ್ತಿದ್ದು, ಆದರೆ ಆಕೆ ಚಿಕಿತ್ಸೆಗಾಗಿ ದೆಹಲಿಗೆ ತೆರಳಿದ್ದಳು. ಅಲ್ಲಿ ಓರ್ವ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇನ್ನೂ ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ