ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲೂಧಿಯಾನ ಕೋರ್ಟ್​ನಲ್ಲಿ ಬ್ಲಾಸ್ಟ್​: ಇಬ್ಬರು ಸಾವು, ನಾಲ್ವರಿಗೆ ಗಾಯ

Twitter
Facebook
LinkedIn
WhatsApp
ಲೂಧಿಯಾನ ಕೋರ್ಟ್​ನಲ್ಲಿ ಬ್ಲಾಸ್ಟ್​: ಇಬ್ಬರು ಸಾವು, ನಾಲ್ವರಿಗೆ ಗಾಯ

ಪಂಜಾಬ್​​ನ ಲೂಧಿಯಾನ ನ್ಯಾಯಾಲಯದಲ್ಲಿ ಮಧ್ಯಾಹ್ನ ಸ್ಫೋಟ ಸಂಭವಿಸಿದೆ. ಈ ಸ್ಫೋಟದಿಂದಾಗಿ ಇಬ್ಬರು ಸಾವನ್ನಪ್ಪಿದ್ದರೆ ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಮಧ್ಯಾಹ್ನ 12:22ರ ಸುಮಾರಿಗೆ ಲುಧಿಯಾನದ ಜಿಲ್ಲಾ ಮತ್ತು ಸೆಷನ್ಸ್​ ನ್ಯಾಯಾಲಯದ ಸಂಕೀರ್ಣದ ಎರಡನೇ ಮಹಡಿಯಲ್ಲಿರುವ ವಾಶ್​ ರೂಮಿನಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸಂಪೂರ್ಣ ನ್ಯಾಯಾಲಯವನ್ನು ಸುತ್ತುವರಿದಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣಾ ಕಾರ್ಯವನ್ನು ನಡೆಸುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆಯ ನಡುವೆಯೇ ಸ್ಫೋಟದ ಸಂಬಂಧ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿ ಮಾಹಿತಿ ನೀಡಿದರು.

ಈ ನಡುವೆ ಪಂಜಾಬ್​ನಾದ್ಯಂತ ಹೈ ಅಲರ್ಟ್ ಘೋಷಣೆಯಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪಂಜಾಬ್​ ಹಾಗೂ ಹರಿಯಾಣ ಹೈಕೋರ್ಟ್, ಪಂಜಾಬ್​ ನ್ಯಾಯಾಲಯ ಸಂಕೀರ್ಣದಲ್ಲಿ ಭದ್ರತೆ ಹೆಚ್ಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನ್ಯಾಯಾಲಯದಲ್ಲಿ ಸ್ಫೋಟದ ಸದ್ದು ಕೇಳುತ್ತಿದ್ದಂತೆಯೇ ನ್ಯಾಯಾಲಯದ ಹೊದರೆ ಜನಸಮೂಹವೇ ಜಮಾಯಿಸಿದೆ. ಆರು ಅಂತಸ್ತಿನ ಕಟ್ಟಡದಿಂದ ಹೊಗೆಯಾಡುತ್ತಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.
ಇಂದು ವಕೀಲರ ಮುಷ್ಕರ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಸ್ಫೋಟದ ವೇಳೆಯಲ್ಲಿ ನ್ಯಾಯಾಲಯದಲ್ಲಿ ಬೆರಳೆಣಿಕೆಯಷ್ಟು ಜನರು ಇದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಾಂಬ್​ ಸ್ಫೋಟದಿಂದಾಗಿ ವಾಶ್​ರೂಮ್​ನ ಗೋಡೆಗಳು ನೆಲಸಮವಾಗಿವೆ. ಕಿಟಕಿಯ ಗಾಜುಗಳು ಒಡೆದು ಹೋಗಿವೆ. ಈ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದು ಸ್ಫೋಟಕ್ಕೆ ನಿಖರ ಕಾರಣ ಏನೆಂಬುದು ಇನ್ನಷ್ಟೇ ತಿಳಿಯಬೇಕಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು