ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲೇಖಕಿ ಬಿ.ಟಿ. ಲಲಿತಾ ನಾಯಕ್ ಗೆ ಮತ್ತೊಂದು ಜೀವ ಬೆದರಿಕೆ ಪತ್ರ, ಕೇಸ್ ದಾಖಲು

Twitter
Facebook
LinkedIn
WhatsApp
ಲೇಖಕಿ ಬಿ.ಟಿ. ಲಲಿತಾ ನಾಯಕ್ ಗೆ ಮತ್ತೊಂದು ಜೀವ ಬೆದರಿಕೆ ಪತ್ರ, ಕೇಸ್ ದಾಖಲು

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಮಾಜಿ ಸಚಿವೆ ಮತ್ತು ಲೇಖಕಿ ಬಿ.ಟಿ. ಲಲಿತಾ ನಾಯಕ್ ಅವರಿಗೆ ಮತ್ತೊಂದು ಬೆದರಿಕೆ ಪತ್ರ  ಫೋಸ್ಟ್ ಮೂಲಕ ಅವರ ಮನೆ ವಿಳಾಸಕ್ಕೆ ಶನಿವಾರ ಬಂದಿದೆ.

ಎಡಪಂಥೀಯ ಸಿದ್ದಾಂತಗಳಿಗೆ ಬೆಂಬಲ ನೀಡುತ್ತಿದ್ದು, ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಮಧ್ಯ ಪ್ರವೇಶಿಸುತ್ತಿದ್ದು,  ವಿಪಕ್ಷ ನಾಯಕ ಸಿದ್ದರಾಮಯ್ಯ, ಹೆಚ್ ಡಿ ಕುಮಾರಸ್ವಾಮಿ ಅವರೊಂದಿಗೆ ನಿಮ್ಮೊಂದಿಗೂ ಕೊಲೆ ಮಾಡಲಾಗುವುದು ಎಂದು ದುಷ್ಕರ್ಮಿಗಳು ಕಪ್ಪು ಇಂಕ್  ಬಳಸಿ ಕನ್ನಡದಲ್ಲಿ ಬರೆದಿದ್ದಾರೆ.

ಈ ಸಂಬಂಧ ಸಂಜಯ ನಗರ ಪೊಲೀಸರು ಕೇಸ್ ದಾಖಲಿಸಿದ್ದು, ಬಿಟಿ ಲಲಿತಾ ನಾಯಕ್ ಅವರ ನಿವಾಸಕ್ಕೆ ಭದ್ರತೆ ಒದಗಿಸಲಾಗಿದೆ. ರಾಜಾಜಿನಗರದಿಂದ ಫೋಸ್ಟ್ ಬಂದಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಬಿ.ಟಿ. ಲಲಿತಾ ನಾಯಕ್, ನಾಲ್ಕು ಪುಟದ ಬೆದರಿಕೆ ಪತ್ರವನ್ನು ಸಂಜಯ ನಗರ ಪೊಲೀಸರಿಗೆ ನೀಡಿದ್ದೇನೆ. ಪತ್ರದಲ್ಲಿ ಸಿದ್ದರಾಮಯ್ಯ, ಕುಮಾರಸ್ವಾಮಿ, ಬಿಕೆ ಹರಿಪ್ರಸಾದ್, ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವರ ಹೆಸರುಗಳಿವೆ. ಎಡಪಂಥೀಯ ವಿಚಾರೆಧಾರೆಗಳು ಮತ್ತು ಮುಸ್ಲಿಂ ಸಂಘಟನೆಗಳಿಗೆ ಬೆಂಬಲ ನೀಡುತ್ತಿರುವುದರ ವಿರುದ್ಧ ಎಚ್ಚರಿಕೆ ನೀಡಲಾಗಿದೆ. ಇಂತಹ ಬೆದರಿಗೆ ನಾನು ಕೇರ್ ಮಾಡಲ್ಲ, ನನ್ನ ಅಭಿಪ್ರಾಯ ನೀಡುವುದನ್ನು ಮುಂದುವರೆಸುತ್ತೇನೆ, ಸತ್ಯವನ್ನು ಮಾತನಾಡುತ್ತೇನೆ ಎಂದರು.

ನನ್ನ ಭದ್ರತೆಗಾಗಿ ಸರ್ಕಾರ ಖರ್ಚು ಮಾಡುವುದನ್ನು ನಾನು ಬಯಸುವುದಿಲ್ಲವಾದ್ದರಿಂದ ಗನ್‌ಮೆನ್ ಮತ್ತು ವಿಶೇಷ ಭದ್ರತೆಯನ್ನು ಒದಗಿಸುವ ಅಗತ್ಯವಿಲ್ಲ ಎಂದು ನಾನು ಗೃಹ ಇಲಾಖೆಗೆ ಹೇಳಿದ್ದೇನೆ ಎಂದು ಅವರು ಹೇಳಿದರು. ಕಳೆದ ವರ್ಷ ಮಾರ್ಚ್ ನಲ್ಲಿ ತಮಿಳುನಾಡು ಮತ್ತು ಕೇರಳ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಸಂದರ್ಭದಲ್ಲೂ ಬಿಟಿ ಲಲಿತಾ ನಾಯಕ್ ಅವರಿಗೆ ಬೆದರಿಕೆ ಪತ್ರ ಬಂದಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ