ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ.!

Twitter
Facebook
LinkedIn
WhatsApp
ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ.!

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ (Lok Sabha Leader of Opposition) ಕಾಂಗ್ರೆಸ್ ನಾಯಕ ಹಾಗೂ ರಾಯ್​ಬರೇಲಿ ಸಂಸದ ರಾಹುಲ್ ಗಾಂಧಿ (Rahul Gandhi) ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರು ದೆಹಲಿಯ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ನಿವಾಸದಿಂದ ಇಂಡಿಯಾ ಬ್ಲಾಕ್‌ನ ಫ್ಲೋರ್‌ ಲೀಡರ್‌ಗಳ ಸಭೆಯಲ್ಲಿ ಪಾಲ್ಗೊಂಡ ಬಳಿಕ ಇದೀಗ ನಿರ್ಗಮಿಸಿದ್ದಾರೆ. ಬುಧವಾರ ಲೋಕಸಭೆ ಸ್ಪೀಕರ್ ಚುನಾವಣೆ ನಡೆಯಲಿದೆ. ಇದರ ಬೆನ್ನಲ್ಲೇ ವಿರೋಧ ಪಕ್ಷದ ನಾಯಕನ್ನಾಗಿ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.

ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಇಂಡಿಯಾ ಬ್ಲಾಕ್‌ನ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ಬಗ್ಗೆ ಚರ್ಚೆ ನಡೆಸಲಾಯಿತು. ಇಂಡಿಯಾ ಬ್ಲಾಕ್ ಸಭೆಯ ನಂತರ ಮಾಹಿತಿ ನೀಡಿದ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಸಂಸದ ಕೆ.ಸಿ. ವೇಣುಗೋಪಾಲ್, ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಸದನದ ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಇತ್ತೀಚೆಗಷ್ಟೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಮಾಡಬೇಕೆಂದು ಒಮ್ಮತದ ಆಗ್ರಹ ಕೇಳಿಬಂದಿತ್ತು. ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ನೇಮಿಸಬೇಕು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು ನಿರ್ಣಯ ಅಂಗೀಕರಿಸಿದ್ದರು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಅವರ ಹೆಸರಿನ ಪ್ರಸ್ತಾವನೆ ಅಂಗೀಕಾರವಾದಾಗ, ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರಿಗೆ ಈ ಬಗ್ಗೆ ಯೋಚಿಸಲು ಸ್ವಲ್ಪ ಸಮಯ ಕೇಳಿದ್ದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಆರಂಭಿಕ ಭಾಷಣದಲ್ಲಿ, ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಹೋದಲ್ಲೆಲ್ಲಾ ನಾವು ಕಾಂಗ್ರೆಸ್ ಪಕ್ಷದ ಮತ ಶೇಕಡಾವಾರು ಮತ್ತು ಸ್ಥಾನಗಳ ಸಂಖ್ಯೆಯಲ್ಲಿ ಹೆಚ್ಚಳವನ್ನು ಕಂಡಿದ್ದೇವೆ ಎಂದಿದ್ದರು.

ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ನೇಮಿಸುವ ನಿರ್ಧಾರವನ್ನು ತಿಳಿಸುವ ಮೂಲಕ ಸಿಪಿಪಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವರಿಗೆ ಪತ್ರ ಬರೆದಿದ್ದಾರೆ ಎಂದು ವೇಣುಗೋಪಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಂಪ್ರದಾಯದಂತೆ ಪ್ರತಿಪಕ್ಷದ ಸದಸ್ಯರಿಗೆ ಉಪಸಭಾಪತಿ ಸ್ಥಾನ ನೀಡಲಾಗುವುದು ಎಂಬ ಭರವಸೆಯನ್ನು ನಿರಾಕರಿಸಿದ ಕಾಂಗ್ರೆಸ್ ಮತ್ತು ಇಂಡಿಯಾತ ಬಣವು ಕೊನೆ ಗಳಿಗೆಯಲ್ಲಿ ಕೆ. ಸುರೇಶ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಮೂಲಕ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಸಲು ನಿರ್ಧರಿಸಿದೆ. ಬಿಜೆಪಿಯಿಂದ ಆಯ್ಕೆಯಾದ ಓಂ ಬಿರ್ಲಾ ಕಳೆದ ಲೋಕಸಭೆಯಲ್ಲಿ ಸ್ಪೀಕರ್ ಆಗಿದ್ದರು. ಬುಧವಾರ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ರಾಹುಲ್ ಗಾಂಧಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ ಸಂಚರಿಸಿ ಕಾಂಗ್ರೆಸ್ ಹಾಗೂ ಇಂಡಿಯಾ ಬ್ಲಾಕ್ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನಡೆಸಿದ್ದರು. ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಯ್​ಬರೇಲಿ ಮತ್ತು ಕೇರಳದ ವಯನಾಡು ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಎರಡೂ ಕಡೆ ಭಾರೀ ಅಂತರದಿಂದ ಜಯ ಸಾಧಿಸಿದ್ದರು. ಆದರೆ, ಎರಡು ಕ್ಷೇತ್ರಗಳಲ್ಲಿ ಒಂದು ಕ್ಷೇತ್ರವನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕಾದ್ದರಿಂದ ವಯನಾಡನ್ನು ತ್ಯಜಿಸಿ ರಾಯ್​ಬರೇಲಿಯನ್ನು ಆಯ್ಕೆ ಮಾಡಿಕೊಂಡಿದ್ದರು. ಅವರಿಂದ ತೆರವಾಗಿರುವ ವಯನಾಡು ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist