ಶನಿವಾರ, ಏಪ್ರಿಲ್ 20, 2024
ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಂಚಿಸಿದ ಪ್ರಿಯಕರನ ಮೇಲೆ ಕುದಿಯುವ ಎಣ್ಣೆ ಸುರಿದ ಯುವತಿ

Twitter
Facebook
LinkedIn
WhatsApp
rksingh 4

ಚೆನ್ನೈ: ವಂಚಿಸಿದ (Cheat) ಪ್ರಿಯಕರನ (Boy Friend) ಮೇಲೆ ಯುವತಿಯೊಬ್ಬಳು ಕುದಿಯುವ ಎಣ್ಣೆ ಸುರಿದ ಘಟನೆ ತಮಿಳುನಾಡಿನ (Tamil Nadu) ಈರೋಡ್‍ನಲ್ಲಿ ನಡೆದಿದೆ.

ಕಾರ್ತಿ (27) ತಮಿಳುನಾಡಿನ ಭವಾನಿಯ ವರ್ಣಪುರಂ ನಿವಾಸಿಯಾಗಿದ್ದು, ಪೆರುಂದುರೈನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ. ಈತ ತನ್ನ ಸಂಬಂಧಿ ಮೀನಾ ದೇವಿಯೊಂದಿಗೆ ಸಂಬಂಧ ಹೊಂದಿದ್ದ. ಜೊತೆಗೆ ಮದುವೆಯಾಗುವುದಾಗಿಯೂ ಭರವಸೆ ನೀಡಿದ್ದ.

ಆದರೆ ಕಾರ್ತಿ ಬೇರೊಬ್ಬ ಮಹಿಳೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ವಿಷಯವನ್ನು ಮೀನಾದೇವಿ ತಿಳಿದಿದ್ದಾಳೆ. ಅದಾದ ಬಳಿಕ ಈ ವಿಚಾರವಾಗಿ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಅದಾದ ಬಳಿಕ ಮೀನಾದೇವಿಯನ್ನು ಕಾರ್ತಿ ಭೇಟಿಯಾಗಲು ಹೋದಾಗ ಮತ್ತೆ ಜಗಳ ನಡೆದಿದೆ. ಇದರಿಂದ ಕೋಪಗೊಂಡ ಮೀನಾ ದೇವಿ ಆತನ ಮೇಲೆ ಕುದಿಯುವ ಎಣ್ಣೆಯನ್ನು ಸುರಿದಿದ್ದಾಳೆ. 

ಇದರಿಂದಾಗಿ ಕೈ ಮತ್ತು ಮುಖ ಉರಿಯಲಾರಂಭಿಸಿದ್ದರಿಂದ ಕಾರ್ತಿ ನೆಲಕ್ಕೆ ಬಿದ್ದಿದ್ದಾನೆ. ಸಹಾಯಕ್ಕಾಗಿ ಆತನ ಕೂಗು ಕೇಳಿದ ನೆರೆಹೊರೆಯವರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದರು. ಘಟನೆಗೆ ಸಂಬಂಧಿಸಿ ಪೊಲೀಸರು ಮೀನಾದೇವಿಯನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ