ಬೆಳ್ತಂಗಡಿ (ದಕ್ಷಿಣ ಕನ್ನಡ): ಇನ್ನೇನು ವಧುವಿಗೆ ವರ ತಾಳಿ ಕಟ್ಟಬೇಕು… ಅಷ್ಟರಲ್ಲಿ ಜಗಳ ಶುರು ಮಾಡಿದ ವಧು, ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾಳೆ.
ಇಂತಹ ಘಟನೆ ನಾರಾವಿಯಲ್ಲಿ ಶುಕ್ರವಾರ ನಡೆದಿದೆ. ಮದುವೆ ಮಂಟಪದಲ್ಲಿ ಪರಸ್ಪರ ಹಾರ ಬದಲಾಯಿಸುವಾಗ ವಧುವಿನ ಕೊರಳು ಮತ್ತು ಕಿವಿಗೆ ವರನ ಕೈ ತಾಗಿದ್ದನ್ನೇ ನೆಪ ಮಾಡಿಕೊಂಡು ವಧು ಸಿಟ್ಟಾದಳು.
ಹಿರಿಯರ ಮಾತುಕತೆ ಬಳಿಕ ಮದ್ವೆ ನಡೆಸಲು ಕುಟುಂಬಸ್ಥರು ಸಜ್ಜಾದರು. ವರ ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಮತ್ತೆ ಸಿಟ್ಟಿಗೆದ್ದ ವಧು, ತಾಳಿ ಸಹಿತ ಹೂವಿನ ಹಾರವನ್ನು ಎಸೆದು ಈ ಮದುವೆಯೇ ಬೇಡ ಎಂದಳು. ಇದರ ಬೆನ್ನಲ್ಲೇ ಈ ಪ್ರಕರಣ ಮತ್ತೊಂದು ತಿರುವು ಪಡೆದಿದೆ.
ಈ ಘಟನೆ ಬೆನ್ನಲ್ಲೇ ಎರಡು ಕುಟುಂಬಗಳ ನಡುವೆಯೂ ಸಣ್ಣಮಟ್ಟಿನ ಜಗಳ ಏರ್ಪಟ್ಟಿತ್ತು. ಸ್ಥಳಕ್ಕಾಗಮಿಸಿದ ವೇಣೂರು ಪೊಲೀಸರ ಸಮ್ಮುಖ ಮಾತುಕತೆ ನಡೆದರೂ, ಪ್ರಯೋಜನವಾಗದೆ ಮದುವೆ ನಡೆಯಲಿಲ್ಲ. ನಿಶ್ಚಿತಾರ್ಥ ಸಂದರ್ಭ ಬಂದಿದ್ದ ವರನೇ ಬೇರೆ, ಹೆಣ್ಣು ನೋಡಲು ಬಂದವನೇ ಬೇರೆ, ಈಗ ಮದುವೆ ಆಗುತ್ತಿರುವವನೇ ಬೇರೆ. ಮೂರು ಬಾರಿಯೂ ಬಂದದ್ದು ಬೇರೆ ಬೇರೆ. ಇದೇ ಕಾರಣಕ್ಕೆ ವಧು ಮದುವೆಯನ್ನ ತಿರಸ್ಕರಿಸಲು ಮುಖ್ಯ ಕಾರಣ ಎಂದು ಆರೋಪಿಸುವ ಮೂಲಕ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist