ಮಂಗಳವಾರ, ಏಪ್ರಿಲ್ 30, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವರಾಹ ರೂಪಂ ವಿವಾದ : ನಿರೀಕ್ಷಣಾ ಜಾಮೀನು ಪಡೆದ ರಿಷಬ್, ವಿಜಯ್ ಕಿರಗಂದೂರು

Twitter
Facebook
LinkedIn
WhatsApp
ವರಾಹ ರೂಪಂ ವಿವಾದ : ನಿರೀಕ್ಷಣಾ ಜಾಮೀನು ಪಡೆದ ರಿಷಬ್, ವಿಜಯ್ ಕಿರಗಂದೂರು

ಕೆಲವು ಷರತ್ತುಗಳನ್ನು ಹಾಕುವ ಮೂಲಕ ‘ಕಾಂತಾರ’ (Kantara) ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty) ಹಾಗೂ ನಿರ್ಮಾಪಕ ವಿಜಯ್ ಕಿರಗಂದೂರು (Vijay Kirgandur) ಅವರಿಗೆ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ‘ವರಾಹ ರೂಪಂ’ (Varaha Rupam) ಹಾಡಿಗೆ (Song) ಸಂಬಂಧಿಸಿದಂತೆ ಕೇರಳದ ಹೈಕೋರ್ಟ್ ನ್ಯಾಯಮೂರ್ತಿ ಎ.ಬದ್ರುದೀನ್ ಅವರು ‘ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್ ನಿಂದ ಆದೇಶ ಬರೋವರೆಗೂ ವರಾಹ ರೂಪಂ ಹಾಡನ್ನು ಬಳಕೆ ಮಾಡುವಂತಿಲ್ಲ’ ಎಂದು ಷರತ್ತು ಹಾಕಿದ್ದಾರೆ.  ಅಲ್ಲದೇ, ಮರುವಿಚಾರಣೆಗೆ ಕೋರಲು ಅರ್ಜಿದಾರರಿಗೆ ಅವಕಾಶವಿದೆ ಎಂದು ಹೇಳಿದ್ದಾರೆ.

Kantara On OTT: Rishab Shettys Kannada Film On Prime Video

‘ಕಾಂತಾರ’ ಸಿನಿಮಾದ ಸೂಪರ್ ಹಿಟ್ ‘ವರಾಹ ರೂಪಂ’ ಹಾಡಿನ ಟ್ಯೂನ್ ಅನ್ನು ಕದಿಯಲಾಗಿದೆ ಎಂದು ಮಲಯಾಳಂನ ತೈಕ್ಕುಡಂ ಬ್ರಿಡ್ಜ್ ಆರೋಪಿಸಿ ದೂರು ನೀಡಿತ್ತು.  ಅದು ತಮ್ಮ ‘ನವರಸಂ’ ಹಾಡಿನದ್ದು ಎನ್ನುವುದನ್ನು ಸಾಕ್ಷ್ಯ ಸಮೇತ ಕೋಯಿಕ್ಕೋಡ್ ನ ಠಾಣೆಯಲ್ಲಿ ದೂರು ದಾಖಲಿಸಿತ್ತು.  ಈ ದೂರಿಗೆ ಸಂಬಂಧಿಸಿದಂತೆ ನಿನ್ನೆ ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು ಮತ್ತು ರಿಷಬ್ ಶೆಟ್ಟಿ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. 

Another court bars Kantara makers from playing Varaha Roopam in theatres,  OTT, streaming apps | The News Minute

ರವಿವಾರವಷ್ಟೇ ‘ಕಾಂತಾರ’ ಸಿನಿಮಾದ ಶತದಿನೋತ್ಸವ ಆಚರಿಸಿದೆ ಚಿತ್ರತಂಡ. ಈ ವೇಳೆಯಲ್ಲಿ ‘ಕಾಂತಾರ 1’ ಸಿನಿಮಾದ ವಿಷಯವನ್ನೂ ಹಂಚಿಕೊಂಡಿದೆ. ಏಪ್ರಿಲ್ ಹೊತ್ತಿಗೆ ‘ಕಾಂತಾರ 1’ ಸಿನಿಮಾದ ಕೆಲವು ವಿಷಯಗಳನ್ನೂ ನಿರ್ದೇಶಕರು ಹಂಚಿಕೊಳ್ಳಲಿದ್ದಾರೆ. ಈಗಾಗಲೇ ಸ್ಕ್ರಿಪ್ಟ್ ಕೆಲಸದಲ್ಲಿ ಚಿತ್ರತಂಡ ತೊಡಗಿಕೊಂಡಿದೆ. ಆದರೂ, ವರಾಹ ರೂಪಂ ಹಾಡಿನ ಸಮಸ್ಯೆ ಬಗೆಹರಿದಿಲ್ಲ. ಮುಂದಿನ ದಿನಗಳಲ್ಲಿ ಯಾರ ಪರ ತೀರ್ಪು ಬರಬಹುದು ಎನ್ನುವುದು ಸದ್ಯಕ್ಕಿರುವ ಕುತೂಹಲವಷ್ಟೇ.

ನ್ಯಾಯಾಲಯ ಹಾಕಿದ ಷರತ್ತುಗಳು :

  1. ಎರಡು ದಿನಗಳ ಕಾಲ ಅಂದರೆ ಫೆ.12 ಮತ್ತು 13 ರಂದು ವಿಚಾರಣೆಗಾಗಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ತನಿಖಾಧಿಕಾರಿಯು ಅವರನ್ನು ವಿಚಾರಣೆಗೆ ಒಳಪಡಿಸಿ, ಒಂದು ವೇಳೆ ಬಂಧಿಸಿದರೆ ನ್ಯಾಯವ್ಯಾಪ್ತಿಯ ನ್ಯಾಯಾಲಯಕ್ಕೆ ಹಾಜರು ಪಡಿಸಬೇಕು. ನಂತರ 50 ಸಾವಿರ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಕೋರ್ಟ್ ಜಾಮೀನು ನೀಡಬೇಕು.
  2. ಆರೋಪಿಗಳು ಅರ್ಜಿದಾರರನ್ನು ಹಾಗೂ ಸಾಕ್ಷಿಗಳನ್ನು ಬೆದರಿಸಬಾರದು ಮತ್ತು ಸಾಕ್ಷ್ಯ ನಾಶ ಮಾಡುವಂತಹ ಕೆಲಸಕ್ಕೆ ಕೈ ಹಾಕಬಾರದು. ಹಾಗೂ ತನಿಖೆಗೆ ಸಹಕರಿಸಬೇಕು.
  3. ನ್ಯಾಯಾಲಯದ ಪೂರ್ವಾನುಮತಿಯಿಲ್ಲದೇ ಆರೋಪಿಗಳು ಭಾರತವನ್ನು ತೊರೆಯುವಂತಿಲ್ಲ.
  4. ಜಾಮೀನು ಪಡೆದ ಸಮಯದಲ್ಲಿ ಆರೋಪಿಗಳು ಯಾವುದೇ ಅಪರಾಧದ ಕೃತ್ಯದಲ್ಲಿ ಭಾಗಿಯಾಗುವಂತಿಲ್ಲ. ಅಂತಹ ಘಟನೆಗಳು ನಡೆದಿರುವುದು ಕೋರ್ಟ್ ಗಮನಕ್ಕೆ ಬಂದರೆ, ಜಾಮೀನನ್ನು ರದ್ದುಗೊಳಿಸಲಾಗುವುದು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ