ಶುಕ್ರವಾರ, ಮಾರ್ಚ್ 29, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಾಟ್ಸ್​ಆ್ಯಪ್​ನಿಂದ ಹೊಸ ಅಪ್ಡೇಟ್: ಇನ್ಮುಂದೆ ಸ್ಕ್ರೀನ್‌ ಶೇರ್ ಮಾಡಬಹುದು

Twitter
Facebook
LinkedIn
WhatsApp
Its difficult to look away from MalaikaArora in Hanas green sheer dress in Aap Jesa Koi song from film Action Hero 5 9

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್​ಗೆ ಈಗ ಎಲ್ಲಿಲ್ಲದ ಬೇಡಿಕೆ ಸೃಷ್ಟಿಯಾಗಿದೆ. ಯಾರ ಬಳಿ ಸ್ಮಾರ್ಟ್​ಫೋನ್ ಇದೆಯೋ ಅವರ ಬಳಿಯೆಲ್ಲ ವಾಟ್ಸ್​ಆ್ಯಪ್ (WhatsApp) ಇದ್ದೇ ಇದೆ. ತನ್ನ ಬಳಕೆದಾರರ ಪ್ರೈವಸಿ ವಿಚಾರವಾಗಿ ಹೆಚ್ಚು ಗಮನ ಹರಿಸುತ್ತಿರುವುದರಿಂದ ಇದು ಸೇಫ್ ಕೂಡ ಆಗಿದೆ. ಕೇವಲ ಭಾರತದಲ್ಲೇ ಸುಮಾರು 550 ಮಿಲಿಯನ್ ಯೂಸರ್ಸ್ ಅನ್ನು ಈ ಆ್ಯಪ್ ಹೊಂದಿದೆ. ಕ್ಷಣಾರ್ಧದಲ್ಲಿ ಸಂದೇಶಗಳ ಮೂಲಕ ಮಾತುಕತೆ ನಡೆಸಲು ಉಪಯೋಗಿಸುವ ವಾಟ್ಸ್​ಆ್ಯಪ್​ ಸಾಲು ಸಾಲು ಫೀಚರ್​ಗಳನ್ನು ಪರಿಚಯಿಸುತ್ತದೆ. ಇದೀಗ ಹೊಸ ಅಪ್ಡೇಟ್ ಕುರಿತು ವಾಟ್ಸ್​ಆ್ಯಪ್ ಒಂದು ಸುದ್ದಿ ಪ್ರಕಟಿಸಿದೆ. ಇದರ ಮೂಲಕ ಬಳಕೆದಾರರು ವಿಡಿಯೋ ಕರೆಯಲ್ಲಿ (Video Call) ಹೊಸ ಅನುಭವವನ್ನು ಪಡೆಯಬಹುದು.

ಕೆಲವೇ ದಿನಗಳಲ್ಲಿ ವಾಟ್ಸ್​ಆ್ಯಪ್ ತನ್ನ ಆಂಡ್ರಾಯ್ಡ್ ಬಳಕೆದಾರರಿಗೆ ವಿಡಿಯೋ ಕರೆ ಸಮಯದಲ್ಲಿ ತಮ್ಮ ಸ್ಕ್ರೀನ್‌ ಅನ್ನು ಸುಲಭವಾಗಿ ಶೇರ್ ಮಾಡಬಹುದಾದ ಆಯ್ಕೆಯನ್ನು ನೀಡುತ್ತಿದೆ. ಬಳಕೆದಾರರು ಕರೆ ನಿಯಂತ್ರಣ ವೀಕ್ಷಣೆಯಲ್ಲಿ ಹೊಸ ಐಕಾನ್ ಅನ್ನು ಕಾಣುತ್ತಾರೆ. ಅದನ್ನು ಬಳಸಿಕೊಂಡು ಅವರ ಸ್ಕ್ರೀನ್‌ ಅನ್ನು ಶೇರ್‌ ಮಾಡಲು ಪ್ರೇರೇಪಿಸಲಾಗುತ್ತದೆ. ಸ್ಕ್ರೀನ್‌ ಅನ್ನು ಶೇರ್ ಮಾಡಿದಾಗ ರೆಕಾರ್ಡ್ ಮಾಡಲಾಗುತ್ತದೆ ಮತ್ತು ಸ್ವೀಕರಿಸುವವರೊಂದಿಗೆ ಹಂಚಿಕೊಳ್ಳಲಾಗುತ್ತದೆ. ಈ ಆಯ್ಕೆಯು ಆಂಡ್ರಾಯ್ಡ್‌ ಆವೃತ್ತಿ ಸಂಖ್ಯೆ 2.23.11.19 ಗಾಗಿ ವಾಟ್ಸ್​ಆ್ಯಪ್ ಬೀಟಾದೊಂದಿಗೆ ಬರುತ್ತದೆ. ಹೀಗಾಗಿ ಪ್ರಸ್ತುತ ಆಂಡ್ರಾಯ್ಡ್‌ ಬೀಟಾ ಪರೀಕ್ಷಕರಿಗೆ ಲಭ್ಯವಿದೆ. ಸದ್ಯದಲ್ಲೇ ಎಲ್ಲ ಆಂಡ್ರಾಯ್ಡ್ ಬಳಕೆದಾರರಿಗೆ ಸಿಗಲಿದೆ.

ಎಡಿಟ್ ಸೆಂಟ್ ಮೆಸೇಜ್ ಆಯ್ಕೆ:

ವಾಟ್ಸ್​ಆ್ಯಪ್ ಎಡಿಟ್ ಸೆಂಟ್ ಮೆಸೇಜ್ ಎಂಬ ನೂತನ ಅಪ್ಡೇಟ್ ಪರಿಚಯಿಸುತ್ತಿದೆ. ಎಡಿಟ್ ಸೆಂಟ್ ಮೆಸೇಜ್ ಆಯ್ಕೆಯ ಮೂಲಕ ಕಳುಹಿಸದ ಮೆಸೇಜ್ ಅನ್ನು ಎಡಿಟ್ ಮಾಡಬಹುದಾಗಿದೆ. ಇದರ ಮೂಲಕ ಬಳಕೆದಾರರು ಯಾರಿಗಾದರೂ ಸಂದೇಶ ಕಳುಹಿಸಿದಾಗ ಅಕ್ಷರಗಳು ತಪ್ಪಾಗಿದ್ದಲ್ಲಿ, ಅದನ್ನು ಎಡಿಟ್ ಮಾಡಲು ಸಾಧ್ಯವಿದೆ. ಆದರೆ, ಇದಕ್ಕೆ 15 ನಿಮಿಷಗಳ ಕಾಲವಕಾಶ ಮಾತ್ರ ಇರುತ್ತದೆ. ಪ್ರಸ್ತುತ, ವಾಟ್ಸ್​ಆ್ಯಪ್​​ನಲ್ಲಿ ಮೀಸಲಾದ ಎಡಿಟ್ ಆಯ್ಕೆ ಇಲ್ಲ. ಒಮ್ಮೆ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾತ್ರ ಮಾಡಬಹುದು, ಆದರೆ ಎಡಿಟ್‌ ಮಾಡಲು ಸಾಧ್ಯವಿಲ್ಲ. ಈ ವೈಶಿಷ್ಟ್ಯವನ್ನು ಬಳಸಿ ಮೆಸೇಜ್ ಕಳುಹಿಸಿದ ನಂತರ ಅವುಗಳನ್ನು ಎಡಿಟ್‌ ಮಾಡಲು ಸಾಧ್ಯವಾಗಿಸುತ್ತದೆ.

ಇಲ್ಲಿ ಗಮನಿಸ ಬೇಕಾದ ಸಂಗತಿ ಎಂದರೆ, ವಾಟ್ಸ್​ಆ್ಯಪ್​ನಲ್ಲಿ ನೀವು ಮೆಸೇಜ್ ಅನ್ನು ಡಿಲೀಟ್ ಮಾಡಿದರೆ ಹೇಗೆ ಚಾಟ್​ನಲ್ಲಿ ಮಾಹಿತಿ ನೀಡುತ್ತದೆಯೊ ಅದೇರೀತಿ ಎಡಿಟ್ ಮಾಡಿದರೆ ಕೂಡ ಕಳುಹಿಸಿದವರಿಗೆ ತಿಳಿಯುತ್ತದೆ. ಈ ಎಡಿಟ್ ಬಟನ್ ವೈಶಿಷ್ಟ್ಯದ ಮೇಲೆ ವಾಟ್ಸ್​ಆ್ಯಪ್​​ ಐದು ವರ್ಷಗಳ ಹಿಂದೆಯೇ ಗಮನಹರಿಸಲು ಆರಂಭಿಸಿದ್ದರೂ ಟ್ವಿಟರ್​ನಲ್ಲಿ ಈ ಕುರಿತು ವರದಿ ಬಂದ ಬೆನ್ನಿಗೆ ಅದನ್ನು ಕೈಬಿಟ್ಟಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ