ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಾಯುಭಾರ ಕುಸಿತ – ನಾಳೆಯಿಂದ ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಶುರು

Twitter
Facebook
LinkedIn
WhatsApp
ವಾಯುಭಾರ ಕುಸಿತ – ನಾಳೆಯಿಂದ ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಶುರು

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ಮಳೆ (Rain) ಮತ್ತೆ ಆರಂಭವಾಗಲಿದೆ. ಬೆಂಗಳೂರು (Bengaluru) ಸೇರಿ 4 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ದಕ್ಷಿಣ ಅಂಡಮಾನ್ ಸಮುದ್ರದಲ್ಲಿ 5.8 ಕಿಲೋ ಮೀಟರ್ ಎತ್ತರದಷ್ಟು ಮೇಲ್ಮೈ ಸುಳಿಗಾಳಿ ಎದ್ದಿದೆ. ಇದರ ಪ್ರಭಾವದಿಂದಾಗಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಳೆ ಎಚ್ಚರಿಕೆ ನೀಡಿದೆ. ಇಂದಿನಿಂದ ಡಿಸೆಂಬರ್ 8 ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಯ ಕೆಲವೆಡೆಗಳಲ್ಲಿ ಭಾರೀ ಮಳೆ ಸಾಧ್ಯತೆ ಗೋಚರಿಸಿದ್ದು, ಡಿಸೆಂಬರ್ 8, 9 ಮತ್ತು 10 ರಂದು ಗುಡುಗು ಸಹಿತ ವ್ಯಾಪಕ ಮಳೆ ಬರುವ ಸಾಧ್ಯತೆ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ. 

weather

ರಾಜಧಾನಿ ಬೆಂಗಳೂರಿನಲ್ಲಿ (Bengaluru) ವಾತಾವರಣ ಸಹಜ ಸ್ಥಿತಿಯಲ್ಲಿದ್ದು, ಡಿಸೆಂಬರ್ 8 ರವರೆಗೆ ಚಳಿ, ಸಾಧಾರಣ ಮಳೆಯಾಗಲಿದೆ. ಬೆಳಗಿನ ಜಾವ ದಟ್ಟ ಮಂಜು ಇರಲಿದೆ. ಡಿಸೆಂಬರ್ 7 ರಿಂದ 10 ರವರೆಗೆ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆ ಸುರಿಯುವ ಸಾಧ್ಯತೆ ಕಂಡುಬಂದಿದೆ. ಹಿಂಗಾರು ಮಳೆ ಮತ್ತೆ ಚುರುಕು ಪಡೆಯಲಿದ್ದು, ಡಿಸೆಂಬರ್ 8 ರಿಂದ ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆ ಅಬ್ಬರ ಶುರುವಾಗಲಿದೆ. 

ಚಿಕ್ಕಬಳ್ಳಾಪುರ, ಕೋಲಾರ, ಕೊಡಗು ಮತ್ತು ರಾಮನಗರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬೀಳಲಿದ್ದು, ಗುಡುಗು ಸಹಿತ ಸುಮಾರು 11 ಸೆಂಟಿಮೀಟರ್ ನಷ್ಟು ಮಳೆ ದಾಖಲಾಗಬಹುದು ಎಂದು ಎಚ್ಚರಿಕೆ ನೀಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಹ ಜೋರು ಮಳೆ ಆಗಲಿದೆ. ಮಳೆ ನಿಗದಿತ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಂಡು ಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ