ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಾಲ್ಮೀಕಿ ನಿಗಮ, ಮುಡಾ ಹಗರಣ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು: ಸಂಸದ ಯದುವೀರ್ ಒಡೆಯರ್

Twitter
Facebook
LinkedIn
WhatsApp
ವಾಲ್ಮೀಕಿ ನಿಗಮ, ಮುಡಾ ಹಗರಣ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು: ಸಂಸದ ಯದುವೀರ್ ಒಡೆಯರ್

ಮಡಿಕೇರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಹಗರಣ ಕುರಿತು ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು ಎಂದು ಮೈಸೂರು-ಕೊಡಗು ಲೋಕಸಭೆ ಎಂಪಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಿಯಾಗಿ ಆಡಳಿತ ನಡೆಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು. ಹಗರಣದಲ್ಲಿ ಭಾಗಿಯಾಗದಿದ್ದರೆ ಸಿಬಿಐ ತನಿಖೆ ಎದುರಿಸಲು ಕಾಂಗ್ರೆಸ್ ನಾಯಕರು ಹಿಂಜರಿಯಬಾರದು. ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಆರೋಪ ಎದುರಿಸುತ್ತಿರುವವರು ಸಿಬಿಐ ತನಿಖೆ ನಂತರ ಆರೋಪ ಮುಕ್ತರಾಗಿ ಬರಲಿ ಎಂದರು.

ಮುಡಾವನ್ನು ಹಿಂದಿನ ಮೈಸೂರು ಸಂಸ್ಥಾನದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ನಿವೇಶನ ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾಗಿತ್ತು. ಆದರೆ, ಇಂದು ಪ್ರಾಧಿಕಾರ ಶ್ರೀಮಂತರಿಗೆ ನಿವೇಶನ ನೀಡುತ್ತಿದೆ ಎಂದು ಸಂಸದ ಯದುವೀರ್ ಒಡೆಯರ್ ಆಕ್ರೋಶ ವ್ಯಕ್ತಪಡಿಸಿದರು.

ಮುಡಾವನ್ನು ಹಿಂದಿನ ಮೈಸೂರು ಸಂಸ್ಥಾನದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ನಿವೇಶನ ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾಗಿತ್ತು. ಆದರೆ, ಇಂದು ಪ್ರಾಧಿಕಾರ ಶ್ರೀಮಂತರಿಗೆ ನಿವೇಶನ ನೀಡುತ್ತಿದೆ ಎಂದು ಸಂಸದ ಯದುವೀರ್ ಒಡೆಯರ್ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ಸಂಸದ ಯದುವೀರ್ ಭಾಗಿ

ಮೈಸೂರು: ಆಷಾಢ ಮಾಸದ (Ashad Masa) ಮೊದಲ ಶುಕ್ರವಾರ (Friday) ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಚಾಮುಂಡಿಬೆಟ್ಟದಲ್ಲಿನ (Chamundi Hill) ತಾಯಿ ಚಾಮುಂಡೇಶ್ವರಿಗೆ (Chamundeshwari) ವಿಶೇಷ ಪೂಜೆ ನೆರವೇರಿತು. ಆಷಾಢ ಮಾಸದ ಮೊದಲ ಶುಕ್ರವಾರದ ವಿಶೇಷ ಪೂಜೆಯಲ್ಲಿ ರಾಜವಂಶಸ್ಥ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗಿಯಾಗಿದ್ದರು. ಸಂಸದರಾದ ಬಳಿಕ ಮೊದಲ ಸಲ ಪೂಜೆಯಲ್ಲಿ ಪಾಲ್ಗೊಂಡರು. ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಭಕ್ತರಿಗೆ ಯಾವುದೆ ತೊಂದರೆಯಾಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಬೆಟ್ಟಕ್ಕೆ ಆಗಮಿಸುವ ಭಕ್ತರಿಗಾಗಿ ಲಲಿತಮಹಲ್ ಪ್ಯಾಲೇಸ್ ಬಳಿಯಿರುವ ಮೈದಾನದಿಂದ ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ಕೇವಲ ಶುಕ್ರವಾರ ಮಾತ್ರ ಉಚಿತ ಬಸ್​ ವ್ಯವಸ್ಥೆ ಇರುತ್ತದೆ. ಶನಿವಾರ, ಭಾನುವಾರ ಉಚಿತ ಬಸ್​ ವ್ಯವಸ್ಥೆ ಇರುವುದಿಲ್ಲ. ಆಷಾಢ ಮಾಸದ ನಾಲ್ಕು ಶುಕ್ರವಾರ ಶನಿವಾರ ಭಾನುವಾರದಂದು‌ ವಾಹನಗಳಿಗೆ ನಿಷೇಧವಿರುತ್ತದೆ. ಇಂದಿನಿಂದ ಜುಲೈ 14, 19, 21, 26, 28ರವರೆಗೆ ಮತ್ತು ಆಗಷ್ಟ 2ರಿಂದ 4ರವರೆಗೆ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಕ್ಕೆ ನಿರ್ಬಂಧಿಸಲಾಗಿದೆ.

ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಪಾಸ್ ವ್ಯವಸ್ಥೆ ರದ್ದು ಮಾಡಲಾಗಿದೆ. ಬೆಟ್ಟದಲ್ಲಿ ಕುಡಿಯುವ ನೀರು, ಶೌಚಾಲಯ, ವೈದ್ಯಕೀಯ ಸೇವೆ, ತುರ್ತು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗೆ ಪ್ರಸಾದ ವಿತರಿಸುವುದಕ್ಕೆ ಕಡ್ಡಾಯವಾಗಿ ಜಿಲ್ಲಾಡಳಿತದಿಂದ ಅನುಮತಿ ಪತ್ರ ಪಡೆಯಬೇಕು. ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧಿಸಲಾಗಿದೆ. ಜನರು ಸರತಿ ಸಾಲಿನಲ್ಲಿ ದೇಗುಲ ಪ್ರವೇಶಿಸಲು ಬ್ಯಾರಿಕೇಡ್​ ಅಳವಡಿಸಲಾಗಿದೆ. ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಹಾಕಲಾಗಿದೆ.

ಪಾರ್ಕಿಂಗ್​ ಎಲ್ಲಿ?

ಲಲಿತಾ ಮಹಲ್ ಹೆಲಿಪ್ಯಾಡ್ ಬಳಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಪಾರ್ಕಿಂಗ್ ಮೈದಾನವು 2,000 ದ್ವಿಚಕ್ರ ವಾಹನಗಳು ಮತ್ತು ಸುಮಾರು 1,000 ನಾಲ್ಕು ಚಕ್ರದ ವಾಹನಗಳು ಮತ್ತು ಇತರ ಪ್ರಯಾಣಿಕ ವಾಹನಗಳಿಗೆ ಅವಕಾಶ ಕಲ್ಪಿಸುತ್ತದೆ. ಇಷ್ಟೇ ಅಲ್ಲದೆ ಫ್ಲೆಕ್ಸ್ ಬ್ಯಾನರ್‌ಗಳು, ಬೋರ್ಡ್‌ಗಳು ಮತ್ತು ಇತರ ಪ್ರಚಾರ ಸಾಮಗ್ರಿಗಳ ಪ್ರದರ್ಶನ ನಿಷೇಧಿಸಲಾಗಿದೆ. ಯಾವುದೇ ವಿಶೇಷ ಪಾಸ್‌ಗಳನ್ನು ನೀಡಲಾಗುವುದಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ