ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಂಡೀಸ್‌ ಎದುರು 2ನೇ ಒಡಿಐ ಗೆದ್ದರೆ ವಿಶ್ವ ದಾಖಲೆ ನಿರ್ಮಿಸಲಿರುವ ಭಾರತ!

Twitter
Facebook
LinkedIn
WhatsApp
ವಿಂಡೀಸ್‌ ಎದುರು 2ನೇ ಒಡಿಐ ಗೆದ್ದರೆ ವಿಶ್ವ ದಾಖಲೆ ನಿರ್ಮಿಸಲಿರುವ ಭಾರತ! 
ಟ್ರಿನಿಡಾಡ್‌ (ಪೋರ್ಟ್‌ ಆಫ್‌ ಸ್ಪೇನ್‌): ಟೀಮ್ ಇಂಡಿಯಾ ಮತ್ತೊಂದು ವಿಶ್ವ ದಾಖಲೆಯ ಹೊಸ್ತಿಲಲ್ಲಿದೆ. ವೆಸ್ಟ್‌ ಇಂಡೀಸ್‌ ಪ್ರವಾಸದಲ್ಲಿರುವ ಭಾರತ ತಂಡ ಆತಿಥೇಯರ ಎದುರು ಮೂರು ಪಂದ್ಯಗಳ ಸರಣಿಯನ್ನಾಡುತ್ತಿದ್ದು, ಈಗಾಗಲೇ 1-0 ಅಂತರದ ಮುನ್ನಡೆಯಲ್ಲಿದೆ. ಭಾನುವಾರ (ಜುಲೈ 24) ಕ್ವೀನ್ಸ್‌ ಪಾರ್ಕ್‌ ಓವಲ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಸರಣಿಯ ಎರಡನೇ ಪಂದ್ಯದಲ್ಲಿ ಶಿಖರ್‌ ಧವನ್‌ ಸಾರಥ್ಯದ ಭಾರತ ತಂಡಕ್ಕೆ ಜಯ ಸಿಕ್ಕಿದ್ದೇ ಆದರೆ, ವೆಸ್ಟ್‌ ಇಂಡೀಸ್‌ ವಿರುದ್ಧ ಸತತ 12ನೇ ದ್ವಿಪಕ್ಷೀಯ ಏಕದಿನ ಕ್ರಿಕೆಟ್‌ ಸರಣಿ ಗೆದ್ದ ಐತಿಹಾಸಿಕ ಸಾಧನೆ ಮೆರೆಯಲಿದೆ. ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ ಸರಣಿಗಳಲ್ಲಿ ಒಂದೇ ತಂಡದ ಎದುರು ಸತತ ಸರಣಿಗಳನ್ನು ಗೆದ್ದ ವಿಶ್ವ ದಾಖಲೆ ಇದಾಗಲಿದೆ.
2007ರಿಂದ ಇಲ್ಲಿಯವರೆಗೆ ಭಾರತ ತಂಡ ವೆಸ್ಟ್‌ ಇಂಡೀಸ್‌ ಎದುರು ಸತತ 11 ಏಕದಿನ ಕ್ರಿಕೆಟ್‌ ಸರಣಿಗಳನ್ನು ಗೆದ್ದ ಸಾಧನೆ ಮಾಡಿದೆ. ಇನ್ನೊಂದು ಸರಣಿ ಗೆದ್ದರೆ ಸತತ 12ನೇ ಸರಣಿ ಜಯದೊಂದಿಗೆ ನೂತನ ವಿಶ್ವ ದಾಖಲೆ ನಿರ್ಮಿಸಲಿದೆ. ಸದ್ಯ 11 ಜಯದೊಂದಿಗೆ ಟೀಮ್ ಇಂಡಿಯಾ ಈ ದಾಖಲೆಯನ್ನು ಪಾಕಿಸ್ತಾನದ ಜೊತೆಗೆ ಹಂಚಿಕೊಂಡಿದೆ. ಪಾಕಿಸ್ತಾನ ತಂಡ ಜಿಂಬಾಬ್ವೆ ಎದುರು ಸತತ 11 ಒಡಿಐ ಸರಣಿಗಳನ್ನು ಗೆದ್ದ ದಾಖಲೆ ಹೊಂದಿದೆ.

ಇದೇ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಸೋಲಿನ ಆಘಾತದಿಂದ ಪಾರಾಗಿ ಕೇವಲ 3 ರನ್‌ಗಳ ಜಯ ದಾಖಲಿಸಿತ್ತು. ಪಂದ್ಯದಲ್ಲಿ ಶಿಖರ್‌ ಧವನ್‌ ಕೇವಲ 3 ರನ್‌ಗಳಿಂದ ಶತಕ ವಂಚಿತರಾದರೆ, ಯುವ ಬ್ಯಾಟರ್‌ಗಳಾದ ಶ್ರೇಯಸ್‌ ಅಯ್ಯರ್‌ ಮತ್ತು ಶುಭಮನ್‌ ಗಿಲ್‌ ಭರ್ಜರಿ ಅರ್ಧಶತಕ ಬಾರಿಸಿದ್ದರು. ಆದರೂ ಬೌಲಿಂಗ್‌ ವಿಭಾಗದಲ್ಲಿ ಆದ ಕೆಲ ಎಡವಟ್ಟುಗಳಿಂದ ಸೋಲಿನ ದವಡೆಗೆ ಸಿಲುಕಿತ್ತು. ಹೀಗಾಗಿ ದ್ವಿತೀಯ ಪಂದ್ಯದಲ್ಲಿ ಸುಧಾರಿತ ಪ್ರದರ್ಶನ ನೀಡುವತ್ತ ಟೀಮ್ ಇಂಡಿಯಾ ಎದುರು ನೋಡುತ್ತಿದೆ.


ನಿಕೋಲಸ್‌ ಪೂರನ್‌ ಸಾರಥ್ಯದ ವೆಸ್ಟ್ ಇಂಡೀಸ್‌ ತಂಡ ಇತ್ತೀಚೆಗೆ ಬಾಂಗ್ಲಾದೇಶ ಎದುರು 0-3 ಅಂತರದಲ್ಲಿ ವೈಟ್‌ವಾಶ್‌ ಸೋಲನುಭವಿಸಿದೆ. ಹೀಗಾಗಿ ಭಾರತ ತಂಡಕ್ಕೆ ಆಘಾತ ನೀಡಿ ತನ್ನ ಏಕದಿನ ಕ್ರಿಕೆಟ್‌ ಪ್ರದರ್ಶನವನ್ನು ಸುಧಾರಿಸಿಕೊಳ್ಳುವ ರಣತಂತ್ರ ಮಾಡಿದೆ. ವಿಂಡೀಸ್‌ನ ಬ್ಯಾಟಿಂಗ್‌ ವಿಭಾಗದ ಅತ್ಯಂತ ಅಪಾಯಕಾರಿ ಆಗಿದ್ದು, ಭಾರತ ತಂಡಕ್ಕೆ ಆಘಾತ ನೀಡಬೇಕಾದರೆ ಬೌಲರ್‌ಗಳ ಪ್ರದರ್ಶನ ಸುಧಾರಿಸಬೇಕಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ