ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಂಡೀಸ್ ವಿರುದ್ಧ ಮತ್ತೊಂದು ಸರಣಿ ಜಯ; ಕ್ರಿಕೆಟ್ ಇತಿಹಾಸದ ಅಪರೂಪದ ದಾಖಲೆ ಬರೆದ ಭಾರತ

Twitter
Facebook
LinkedIn
WhatsApp
ವಿಂಡೀಸ್ ವಿರುದ್ಧ ಮತ್ತೊಂದು ಸರಣಿ ಜಯ; ಕ್ರಿಕೆಟ್ ಇತಿಹಾಸದ ಅಪರೂಪದ ದಾಖಲೆ ಬರೆದ ಭಾರತ

ಕ್ವೀನ್ಸ್ ಪಾರ್ಕ್ ಓವಲ್: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಂಡಿರುವ ಭಾರತ ತಂಡ ಐತಿಹಾಸಿಕ ಸಾಧನೆ ಮಾಡಿದ್ದು, ತಂಡವೊಂದರ ವಿರುದ್ಧ ಅತೀ ಹೆಚ್ಚು ಸತತ ಸರಣಿ ಜಯ ಗಳಿಸಿದ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

ವೆಸ್ಟ್ ಇಂಡೀಸ್ ವಿರುದ್ಧ ಭಾರತ ಸತತ ಜೈತ್ರಯಾತ್ರೆ 2007ರಲ್ಲಿ ಪ್ರಾರಂಭವಾಗಿತ್ತು. ಅಂದು ಇಂದಿಗೂ ಅಜೇಯವಾಗಿ ಮುಂದುವರೆದಿದೆ. 

ಈ ಹಿಂದೆ ಈ ಸ್ಥಾನದಲ್ಲಿ ಪಾಕಿಸ್ತಾನವಿತ್ತು. ಪಾಕಿಸ್ತಾನ ಜಿಂಬಾಬ್ವೆ ವಿರುದ್ಧ ಸತತ 11 ಸರಣಿಗಳಲ್ಲಿ ಜಯಗಳಿಸಿದೆ. 1996ರಿಂದ 2021ರವರೆಗೆ ಪಾಕ್ ಜಿಂಬಾಬ್ವೆ ವಿರುದ್ದ 11 ಸರಣಿಗಳನ್ನು ಗೆದ್ದು ಈ ಸಾಧನೆ ಮಾಡಿತ್ತು. ಇದೀಗ ಭಾರತ ತನ್ನ 12ನೇ ಸರಣಿ ಜಯದ ಮೂಲಕ ಈ ದಾಖಲೆಯನ್ನು ಹಿಂದಿಕ್ಕೆ ಅಗ್ರಸ್ಥಾನಕ್ಕೇರಿದೆ.

ವೆಸ್ಟ್‌ಇಂಡೀಸ್‌ ತಂಡ ನೀಡಿದ ಬೃಹತ್‌ ಗುರಿಯನ್ನ ಬೆನ್ನತ್ತಿ ಎರಡನೇ ಪಂದ್ಯದಲ್ಲಿ ಗೆಲ್ಲುವ ಮೂಲಕ ಭಾರತ ತಂಡ ಸರಣಿಯನ್ನ ಕೈವಶ ಮಾಡಿಕೊಂಡಿದೆ. ಇದರೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 2-0 ಮುನ್ನಡೆಯನ್ನ ಸಾಧಿಸಿದೆ. ಆತಿಥೇಯರ ವಿರುದ್ಧ ಮೊದಲನೇ ಪಂದ್ಯದಲ್ಲಿ ಗೆದ್ದು ಆತ್ಮವಿಶ್ವಾಸದಲ್ಲಿದ್ದ ಟೀಂ ಇಂಡಿಯಾಗೆ ಕೆರಿಬಿಯನ್ನರು 311 ರನ್‌ಗಳ ಬೃಹತ್‌ ಟಾರ್ಗೆಟ್‌ ನೀಡಿದ್ದರು. ಆದರೆ, ಮೊದಲನೇ ಪಂದ್ಯದಲ್ಲಿ 97 ರನ್‌ ಗಳಿಸಿದ್ದ ನಾಯಕ ಶಿಖರ್‌ ಧವನ್‌ ಇಂದಿನ ಪಂದ್ಯದಲ್ಲಿ ಕೇವಲ 13 ರನ್‌ ಗಳಿಸಿ ಔಟಾಗಿದ್ದರು. ನಂತರ ಬಂದ ಶ್ರೇಯಸ್‌ ಅಯ್ಯರ್‌(63), ಶುಭಮನ್‌ ಗಿಲ್‌(43)  ಸಂಜು ಸ್ಯಾಮನ್ಸನ್‌(54), ದೀಪಕ್‌ ಹೂಡಾ(33) ಹಾಗೂ ಅಕ್ಸರ್‌ ಪಟೇಲ್‌(64) ಅವರ ಜವಾಬ್ದಾರಿ ಆಟದಿಂದ ಟೀಂ ಇಂಡಿಯಾ ಗೆಲುವಿನ ನಗೆ ಬೀರಿದೆ. 

ಇದಕ್ಕೂ ಮುನ್ನ ಮೊದಲು ಬ್ಯಾಟಿಂಗ್‌ ಮಾಡಿದ್ದ ವಿಂಡೀಸ್‌ ತಂಡದ ಪರ ಶಾಯ್ ಹೋಪ್‌ ಆಕರ್ಷಕ 115 ರನ್‌ ಗಳಿಸಿ ಶತಕದ ಸಂಭ್ರಮಪಟ್ಟಿದ್ದರು. ನಂತರ ಬಂದ ಶಮರ್ ಬ್ರೂಕ್ಸ್(35), ಕೆ ಮೇಯರ್ಸ್(39) ಹಾಗೂ ಪೂರನ್‌ 75 ರನ್‌ ಸೇರಿದಂತೆ ಉಳಿದ ಆಟಗಾರರು ತಂಡಕ್ಕೆ ನೀಡಿದ ರನ್‌ ಕೊಡುಗೆಯಿಂದ ವಿಂಡೀಸ್‌ ತಂಡ ಅಂತಿಮವಾಗಿ 6 ವಿಕೆಟ್‌ ಕಳೆದುಕೊಂಡು 311 ರನ್‌ಗಳ ಗುರಿಯನ್ನ ಭಾರತಕ್ಕೆ ನೀಡಿತ್ತು.

ಭಾರತದ ಪರ ಶಾರ್ದೂಲ್ ಠಾಕೂರ್‌ 3, ದೀಪಕ್‌ ಹೂಡಾ, ಅಕ್ಸರ್‌ ಪಟೇಲ್‌ ಹಾಗೂ ಯಜುವೇಂದ್ರ ಚಹಾಲ್‌ ತಲಾ ಒಂದು ವಿಕೆಟ್‌ ಕಬಳಿಸಿದ್ದರು. ಇನ್ನು ವಿಂಡೀಸ್‌ ತಂಡದ ಪರ ಅಲ್ಜಾರಿ ಜೋಸೆಫ್(2), ಕೈಲ್ ಮೇಯರ್ಸ್(2) ರೊಮಾರಿಯೋ ಶೆಫರ್ಡ್ ಹಾಗೂ ಕೈಲ್ ಮೇಯರ್ಸ್ ತಲಾ 1 ವಿಕೆಟ್‌ ಪಡೆದು ಸಂಭ್ರಮಿಸಿದರು. ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯ ಜು.27 ರಂದು ಟ್ರಿನಿಡ್ಯಾಡ್‌ನಲ್ಲಿ ನಡೆಯಲಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ