ವಿಜಯ್ ವರ್ಮಾ ಜೊತೆಗಿನ ಡೇಟಿಂಗ್ ಸುದ್ದಿಗೆ ತಮನ್ನಾ ಸ್ಪಷ್ಟನೆ
ಸೌತ್ ಮತ್ತು ಬಾಲಿವುಡ್‌ನಲ್ಲಿ (Bollywood) ಸದ್ಯ ಸೌಂಡ್ ಮಾಡ್ತಿರುವ ವಿಚಾರ ಅಂದರೆ ತಮನ್ನಾ ಭಾಟಿಯಾ (Tamanna Bhatia) ಮತ್ತು ವಿಜಯ್ ವರ್ಮಾ (Vijay Varma) ಡೇಟಿಂಗ್ ವದಂತಿ. ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಈ ವಿಚಾರಕ್ಕೆ ಇದೀಗ ನಟಿ ತಮನ್ನಾ ಸಂದರ್ಶನವೊಂದರಲ್ಲಿ ಮೌನ ಮುರಿದಿದ್ದಾರೆ.
ಮಿಲ್ಕಿ ಬ್ಯೂಟಿ ತಮನ್ನಾ ಈಗೀಗ ಸಿನಿಮಾಗಿಂತ ಬಾಲಿವುಡ್ ನಟ ವಿಜಯ್ ವರ್ಮಾ ಜೊತೆಗಿನ ಲವ್ವಿ- ಡವ್ವಿ ವಿಷ್ಯವಾಗಿಯೇ ಸಖತ್ ಸುದ್ದಿಯಲ್ಲಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ನಟಿಯ ಲಿಪ್ ಲಾಕ್ ವೀಡಿಯೋ ವೈರಲ್ ಆದ ಮೇಲೆ ಇದೀಗ ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ.
ತಮನ್ನಾ ಅವರು ವಿಜಯ್ ವರ್ಮಾ ಜೊತೆಗಿನ ಡೇಟಿಂಗ್ ವಿಚಾರವನ್ನು ತಳ್ಳಿ ಹಾಕಿದ್ದಾರೆ. ನಾವಿಬ್ಬರೂ ಒಟ್ಟಿಗೆ ಸಿನಿಮಾ ಮಾಡುತ್ತಿದ್ದೇವೆ. ಇಂಥ ವದಂತಿಗಳು ಎಲ್ಲಾ ಕಡೆ ಹರಿದಾಡುತ್ತಲೇ ಇರುತ್ತದೆ. ಇಂಥ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡುವುದು ಮತ್ತು ಸ್ಪಷ್ಟೀಕರಣ ಕೊಡುವ ಅನಿವಾರ್ಯತೆ ಇಲ್ಲ. ಅದರ ಬಗ್ಗೆ ನಾನು ಹೆಚ್ಚು ಏನು ಹೇಳಲ್ಲ ಎಂದು ಹೇಳಿದ್ದಾರೆ.
ತಮನ್ನಾ ಮತ್ತು ವಿಜಯ್ ವರ್ಮಾ ಇಬ್ಬರೂ ʻಲಸ್ಟ್ ಸ್ಟೋರಿ -2′ ಸಿನಿಮಾ ಸೆಟ್‌ನಲ್ಲಿ ಮೊದಲು ಭೇಟಿಯಾಗಿದರು. ಅಲ್ಲಿಂದ ಪ್ರಾರಂಭವಾದ ಇವರ ಸ್ನೇಹ ಬಳಿಕ ಪ್ರೀತಿಯಾಗಿ ಬದಲಾಗಿದೆ ಎನ್ನಲಾಗುತ್ತಿದೆ. ಇಬ್ಬರೂ ಕದ್ದು ಮುಚ್ಚಿ ಪ್ರೀತಿ ಮಾಡುತ್ತಿದ್ದರು. ಆದರೆ ಹೊಸ ವರ್ಷಾಚರಣೆ ವೇಳೆ ಇಬ್ಬರೂ ತಬ್ಬಿಕೊಂಡು, ಕಿಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಇಬ್ಬರ ಪ್ರೀತಿ ಬಹಿರಂಗವಾಗಿದೆ.