ವಿಟ್ಲ: ಜಾತ್ರೆಯ ಸಂತೆಯಲ್ಲಿದ್ದ ವ್ಯಾಪಾರಿಗೆ ಹಲ್ಲೆ-ಆರು ಮಂದಿ ಆರೋಪಿಗಳು ಅಂದರ್
Twitter
Facebook
LinkedIn
WhatsApp
ವಿಟ್ಲ, ಜ 19 : ಜಾತ್ರೆ ಸಂತೆಯಲ್ಲಿ ವ್ಯಾಪಾರ ನಡೆಸುವ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಗಣೇಶ್ ಕಡಂಬು, ಮಂಜುನಾಥ ಮತ್ತು ಇತರ ನಾಲ್ಕು ಮಂದಿ ಎಂದು ಗುರುತಿಸಲಾಗಿದೆ.
ಶ್ರೀ ಪಂಚಲಿಗೇಶ್ವರ ದೇವಸ್ಥಾನದ ಪಕ್ಕದಲ್ಲಿ ಜಾತ್ರೆಯ ಸಂದರ್ಭ ದೇವಸ್ಥಾನದ ಅನುಮತಿಯಂತೆ ಫ್ಯಾನ್ಸಿ ಮಳಿಗೆ ಇಟ್ಟು ವ್ಯಾಪಾರ ಮಾಡಿಕೊಂಡಿದ್ದ ಸುರೇಶ್ ದಾಸ್ ಎಂಬವರಿಗೆ ಆರು ಮಂದಿ ಆರೋಪಿಗಳು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ನಡೆದಿದೆ.
ಸುರೇಶ್ ದಾಸ್ ಎಂಬವರು ದೇವಸ್ಥಾನದ ಅನುಮತಿಯಂತೆ ಫ್ಯಾನ್ಸಿ ಮಳಿಗೆ ಇಟ್ಟು ವ್ಯಾಪಾರ ಮಾಡಿಕೊಂಡಿದ್ದರು. ರಾತ್ರಿ 12.30ಕ್ಕೆ ವ್ಯಾಪಾರ ಮುಗಿಸಿ ಮಳಿಗೆಯನ್ನು ಮುಚ್ಚುವ ಸಮಯದಲ್ಲಿ ಗಣೇಶ್ ಕಡಂಬು, ಮಂಜುನಾಥ ಮತ್ತು ಇತರ ನಾಲ್ಕು ಯುವಕರು ಬಂದು ಅಂಗಡಿ ಏಕೆ ಬಂದ್ ಮಾಡುತ್ತಿಯಾ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವುದಾಗಿ ದೂರು ನೀಡಲಾಗಿದೆ.