ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಟ್ಲ: ಜಾತ್ರೆಯ ಸಂತೆಯಲ್ಲಿದ್ದ ವ್ಯಾಪಾರಿಗೆ ಹಲ್ಲೆ-ಆರು ಮಂದಿ ಆರೋಪಿಗಳು ಅಂದರ್

Twitter
Facebook
LinkedIn
WhatsApp
santhu 3.1.23 vtlarst

ವಿಟ್ಲ, ಜ 19 : ಜಾತ್ರೆ ಸಂತೆಯಲ್ಲಿ ವ್ಯಾಪಾರ ನಡೆಸುವ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಗಣೇಶ್‌ ಕಡಂಬು, ಮಂಜುನಾಥ ಮತ್ತು ಇತರ ನಾಲ್ಕು ಮಂದಿ ಎಂದು ಗುರುತಿಸಲಾಗಿದೆ.

ಶ್ರೀ ಪಂಚಲಿಗೇಶ್ವರ ದೇವಸ್ಥಾನದ ಪಕ್ಕದಲ್ಲಿ ಜಾತ್ರೆಯ ಸಂದರ್ಭ ದೇವಸ್ಥಾನದ ಅನುಮತಿಯಂತೆ ಫ್ಯಾನ್ಸಿ ಮಳಿಗೆ ಇಟ್ಟು ವ್ಯಾಪಾರ ಮಾಡಿಕೊಂಡಿದ್ದ ಸುರೇಶ್‌ ದಾಸ್‌ ಎಂಬವರಿಗೆ ಆರು ಮಂದಿ ಆರೋಪಿಗಳು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ನಡೆದಿದೆ.

ಸುರೇಶ್‌ ದಾಸ್‌ ಎಂಬವರು ದೇವಸ್ಥಾನದ ಅನುಮತಿಯಂತೆ ಫ್ಯಾನ್ಸಿ ಮಳಿಗೆ ಇಟ್ಟು ವ್ಯಾಪಾರ ಮಾಡಿಕೊಂಡಿದ್ದರು. ರಾತ್ರಿ 12.30ಕ್ಕೆ ವ್ಯಾಪಾರ ಮುಗಿಸಿ ಮಳಿಗೆಯನ್ನು ಮುಚ್ಚುವ ಸಮಯದಲ್ಲಿ ಗಣೇಶ್‌ ಕಡಂಬು, ಮಂಜುನಾಥ ಮತ್ತು ಇತರ ನಾಲ್ಕು ಯುವಕರು ಬಂದು ಅಂಗಡಿ ಏಕೆ ಬಂದ್‌ ಮಾಡುತ್ತಿಯಾ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವುದಾಗಿ ದೂರು ನೀಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ