ವಿಟ್ಲ: ತೆಂಗಿನ ಮರದಿಂದ ಬಿದ್ದ ವ್ಯಕ್ತಿ ಮೃತ್ಯು
Twitter
Facebook
LinkedIn
WhatsApp
ಬಂಟ್ವಾಳ, ಮಾ 28 : ತೆಂಗಿನ ಮರವೇರಿ ಕಾಯಿ ತೆಗೆಯುತ್ತಿದ್ದ ವ್ಯಕ್ತಿಯೋರ್ವರು ಆಯತಪ್ಪಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ನಡೆದಿದೆ.
ಮಂಜೇಶ್ವರ ತಾಲೂಕು ಎಣ್ಮಕಜೆ ಗ್ರಾಮದ ರೆಂಜಮೂಲೆ ನಿವಾಸಿ ಪ್ರಕಾಶ್ ನಾಯ್ಕ್ ಕೆ.(54) ಮೃತ ದುರ್ದೈವಿ.
ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿನ ಖಾಸಗಿ ವ್ಯಕ್ರಿಯೋರ್ವರ ಮನೆಯಲ್ಲಿ ಕಾಯಿ ಕೀಳುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದು, ಕೂಡಲೇ ಅವರನ್ನು ಬಳಿಕ ವಿಟ್ಲದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಾಗ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಮೃತರ ಪುತ್ರ ಅಜೀತ್ ಕುಮಾರ್ ರವರು ವಿಟ್ಲ ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.