ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಟ್ಲ: ನಾನು ಶಾಸಕನಾದರೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ನಿರ್ಮಾಣ - ರಮಾನಾಥ ರೈ

Twitter
Facebook
LinkedIn
WhatsApp
1 15

ವಿಟ್ಲ, ಮಾ 21 : ನಾನು ಶಾಸಕನಾಗಿ ಬಂದರೆ ಕನ್ಯಾನ ಪದವಿ ಕಾಲೇಜಿಗೆ ನೂತನ ಕಟ್ಟಡ, ಬೆಂಬನಪದವಿನಲ್ಲಿ ಜಿಲ್ಲಾ ಮಟ್ಟದ ಕ್ರೀಡಾಂಗಣವನ್ನು 100 ಕೋಟಿಯಲ್ಲಿ ನಿರ್ಮಾಣ, ಬಂಟ್ವಾಳ ಕ್ಷೇತ್ರಕ್ಕೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಅಂಡರ್ ಆರ್ಮ್ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡುವುದು ನಿಶ್ಚಿತ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಬಿಜೆಪಿಯ ಭರವಸೆಗಳ ಹಿಂದೆ ಹೋದ ಜನರಿಗೆ ಸರಿಯಾದ ವಿಚಾರ ತಿಳಿಯುತ್ತಿದೆ. ಸಿದ್ಧರಾಮಯ್ಯ ಸರ್ಕಾರ ಇದ್ದ ಸಂದರ್ಭದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಅದ್ಭುತ ಕೆಲಸಗಳಾಗಿದೆ. ಕಾಂಗ್ರೆಸ್ ಪಕ್ಷ ನೀಡಿದ ಭರವಸೆ ಶೇ.97ರಷ್ಟನ್ನು ಅಧಿಕಾರಕ್ಕೆ ಬಂದಾಗ ಪೂರೈಸುವ ಕಾರ್ಯವನ್ನು ಮಾಡಿದೆ. ಯಾವುದೇ ತಪ್ಪು ಕೆಲಸವನ್ನು ಮಾಡದ ನನಗೆ ಜನರು ಇನ್ನೊಂದು ಅವಕಾಶವನ್ನು ನೀಡಬೇಕು ಎಂದರು.

ಇನ್ನು 2017ರಲ್ಲಿ ಬಂಟ್ವಾಳದಲ್ಲಿ ಒಳಚರಂಡಿ ವ್ಯವಸ್ಥೆಗಾಗಿ 56 ಕೋಟಿ ರೂ. ಅನುದಾನ ತಂದಿದ್ದು, ಆ ಕಾಮಗಾರಿಯನ್ನು ಬಿಜೆಪಿ ಸರ್ಕಾರ ಇದುವರೆಗೆ ಮಾಡಿಸಿಲ್ಲ. ಬೆಂಜನಪದವು ಕ್ರೀಡಾಂಗಣ, ಪಂಜೆ ಮಂಗೇಶರಾಯ ಭವನ, ಪಡೀಲು ಜಿಲ್ಲಾಧಿಕಾರಿ ಕಚೇರಿ ಕಾಮಗಾರಿಗಳನ್ನು ಬಿಜೆಪಿ ಪೂರ್ತಿ ಮಾಡಿಲ್ಲ. ಶವ ಸಂಸ್ಕಾರಕ್ಕೆ ಬರುತ್ತಿದ್ದ 5 ಸಾವಿರ ಸಹಾಯ ಧನವನ್ನು ನಿಲ್ಲಿಸಿದ ಧರಿದ್ರ ಸರ್ಕಾರ ಈಗ ಆಡಳಿತ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮಾಣಿ ಗ್ರಾ.ಪಂ.ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ರಮಾನಾಥ ರೈ ಅವಧಿಯಲ್ಲಿ ಕ್ಷೇತ್ರಕ್ಕೆ ತಂದ 5000 ಕೋಟಿ ರೂ.ಗಳ ಅನುದಾನಗಳ ವಿವರ ನೀಡಿದರು. ಸಾಲೆತ್ತೂರು ಶಾಲೆಯ ಬಳಿ ಯಾತ್ರೆಗೆ ಚಾಲನೆ ನೀಡಲಾಗಿದ್ದು, ಬಳಿಕ ತಲೆಕ್ಕಿ, ಬೊಳ್ಮಾರು, ಆನೆಕಲ್ಲು, ಮಿತ್ತನಡ್ಕ ಮತ್ತು ಕನ್ಯಾನದಲ್ಲಿ ಪಾದಯಾತ್ರೆ ಸಾಗಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ