ಮಂಗಳವಾರ, ಏಪ್ರಿಲ್ 23, 2024
ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ..!-ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ.!-ಅಂಪೈರ್ ತೀರ್ಪಿಗೆ ಗರಂ ಆಗಿ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐಯಿಂದ ಬಿತ್ತು ದಂಡ.!-ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಆಗ್ರಹ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದೇಶಿ ಪ್ರಯಾಣಿಕರನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರಕ್ಕೆ ಸಿಎಂ ಮನವಿ.

Twitter
Facebook
LinkedIn
WhatsApp
ವರ್ಗಾವಣೆಗೆ ಸರ್ಕಾರದಿಂದ ಹೊಸ ಆದೇಶ ಪ್ರಕಟ.

ಬೆಂಗಳೂರು: ಕೊರೊನಾ ವೈರಾಣುವಿನ ರೂಪಾಂತರ ತಳಿ ಓಮಿಕ್ರಾನ್‌ ಪತ್ತೆಯಾಗಿರುವ ದೇಶಗಳಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ದಕ್ಷಿಣ ಆಫ್ರಿಕಾ, ಬೋಟ್ಸ್‌ವಾನ, ಜಿಂಬಾಬ್ವೆ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ಹೊಸ ತಳಿಯ ಕೊರೊನಾ ವೈರಾಣು ಪತ್ತೆಯಾಗಿದೆ. ಹೊಸ ತಳಿಯ ವೈರಸ್‌ ಪತ್ತೆಯಾಗಿರುವ ದೇಶಗಳಿಂದ ವಿಮಾನಗಳ ಮೂಲಕ ಬರುವ ಪ್ರಯಾಣಿಕರಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗುವುದು. ನೆಗೆಟಿವ್‌ ವರದಿ ಬಂದರಷ್ಟೇ ನಗರ ಪ್ರವೇಶಕ್ಕೆ ಅನುಮತಿ ನೀಡಲಾಗುವುದು. ಕೋವಿಡ್‌ ಸೋಂಕು ದೃಢಪಟ್ಟವರನ್ನು ಪ್ರತ್ಯೇಕ ವಾಸದಲ್ಲಿ ಇರಿಸಿ, ಚಿಕಿತ್ಸೆ ನೀಡಲಾಗುವುದು ಎಂದರು.

ರಾಜ್ಯದ ಯಾವುದೇ ಭಾಗದಲ್ಲೂ ಹೊಸ ತಳಿಯ ಕೊರೊನಾ ವೈರಾಣು ಪತ್ತೆಯಾಗಿಲ್ಲ. ಆದರೂ, ಮುನ್ನೆಚ್ಚರಿಕೆ ಕ್ರಮವಾಗಿ ವಿದೇಶಗಳಿಂದ ಬರುವವರನ್ನು ಪರೀಕ್ಷೆಗೆ ಒಳಪಡಿಸಿ, ನಿಗಾ ಇಡಲಾಗುತ್ತಿದೆ ಎಂದು ತಿಳಿಸಿದರು.
ಕೇರಳದಿಂದ ರಾಜ್ಯಕ್ಕೆ ಬಂದಿರುವ ಅರೆ ವೈದ್ಯಕೀಯ ಸಿಬ್ಬಂದಿಯಲ್ಲಿ ಕೋವಿಡ್‌ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಂಡಿದೆ. ಈ ಕಾರಣದಿಂದ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಗಡಿ ಭಾಗಗಳಲ್ಲಿ ಕಟ್ಟೆಚ್ಚರಕ್ಕೆ ಆದೇಶಿಸಲಾಗಿದೆ. ಕೇರಳದಿಂದ ಬರುವವರಲ್ಲಿ ಎರಡು ಡೋಸ್‌ ಲಸಿಕೆ ಪಡೆದಿದ್ದು, ಆರ್‌ಟಿ– ಪಿಸಿಆರ್‌ ವಿಧಾನದಲ್ಲಿ ಪಡೆದ ಕೋವಿಡ್‌ ನೆಗೆಟಿವ್‌ ಇದ್ದವರಿಗೆ ಮಾತ್ರ ರಾಜ್ಯಕ್ಕೆ ಪ್ರವೇಶ ನೀಡಲಾಗುವುದು ಎಂದು ಹೇಳಿದರು.

ವಿದೇಶಿ ಪ್ರಯಾಣಿಕರನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರಕ್ಕೆ ಸಿಎಂ ಮನವಿ .

ಧಾರವಾಡ, ಬೆಂಗಳೂರು ಮತ್ತು ಮೈಸೂರು ನಗರಗಳಲ್ಲಿ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್‌ ದೃಢಪಟ್ಟಿದೆ. ಅಂತಹ ಸ್ಥಳಗಳನ್ನೂ ನಿರ್ಬಂಧಿತ ವಲಯ ಎಂದು ಘೋಷಿಸಲಾಗುತ್ತಿದೆ. ಧಾರವಾಡದ ಎಸ್‌.ಡಿ.ಎಂ. ಕಾಲೇಜಿನ ವೈದ್ಯರು, ನರ್ಸ್‌ಗಳಿಗೆ ಕೋವಿಡ್‌ ಪತ್ತೆ ಪರೀಕ್ಷೆ ಮಾಡಿಸಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಈವರೆಗೆ 91 ಲಕ್ಷ ಜನರಿಗೆ ಮೊದಲನೇ ಡೋಸ್‌ ಕೋವಿಡ್‌ ಲಸಿಕೆ ನೀಡಲಾಗಿದೆ. ಡಿಸೆಂಬರ್‌ ಅಂತ್ಯದೊಳಗೆ ಶೇಕಡ 70ರಷ್ಟು ಮಂದಿಗೆ ಎರಡನೇ ಡೋಸ್‌ ಲಸಿಕೆ ನೀಡುವ ಗುರಿ ಇದೆ. ಈಗ ರಾಜ್ಯದಲ್ಲಿ 80 ಲಕ್ಷ ಡೋಸ್‌ ಲಸಿಕೆ ದಾಸ್ತಾನಿದೆ ಎಂದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು