ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ ಸರ್ಕಾರ

Twitter
Facebook
LinkedIn
WhatsApp
ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ ಸರ್ಕಾರ

ನವದೆಹಲಿ: ಓಮಿಕ್ರಾನ್ ಕೋವಿಡ್ ರೂಪಾಂತರವು ಭಾರತದಲ್ಲಿ ಕಾಣಿಸಿಕೊಂಡಾಗ ಪರಿಚಯಿಸಲಾದ ಅಂತರಾಷ್ಟ್ರೀಯ ಪ್ರಯಾಣ ಮಾರ್ಗಸೂಚಿಯನ್ನು ಸರ್ಕಾರವು ಪರಿಷ್ಕರಣೆ ಮಾಡಿದೆ. ಸರ್ಕಾರವು ಓಮಿಕ್ರಾನ್‌ ಸಂದರ್ಭದಲ್ಲಿ ‘ಅಪಾಯದಲ್ಲಿರುವ’ ದೇಶಗಳ ವರ್ಗವನ್ನು ಮಾಡಿತ್ತು. ಆ ಪಟ್ಟಿಯನ್ನು ಈಗ ತೆಗೆದು ಹಾಕಲಾಗಿದೆ. ಹಾಗೆಯೇ ಏಳು ದಿನಗಳ ಹೋಮ್ ಕ್ವಾರಂಟೈನ್ ಬದಲಾಗಿ ರೋಗಲಕ್ಷಣಗಳು ಹೊಂದಿರುವವರು 14 ದಿನಗಳ ಕಾಲ ಸ್ವಯಂ ನಿರ್ಬಂಧಕ್ಕೆ ಒಳಗಾಗಬೇಕಾಗಿದೆ. ಹೊಸ ಮಾರ್ಗಸೂಚಿಗಳು ಸೋಮವಾರ, ಫೆಬ್ರವರಿ 14 ರಿಂದ ಜಾರಿಗೆ ಬರಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಸಚಿವಾಲಯವು “ನಿರಂತರವಾಗಿ ಬದಲಾಗುತ್ತಿರುವ” ಕೋವಿಡ್‌ ವೈರಸ್‌ ಬಗ್ಗೆ ಜನರು ಜಾಗರೂಕರಾಗಿರುವ ಅಗತ್ಯವನ್ನು ಒತ್ತಿಹೇಳಿದೆ. ಆದರೆ “ಆರ್ಥಿಕ ಚಟುವಟಿಕೆಗಳನ್ನು ಅಡೆತಡೆಯಿಲ್ಲದೆ ನಡೆಸಬಹುದು ಎಂದು ಕೂಡಾ ಸರ್ಕಾರವು ಹೇಳಿದೆ. ಹೊಸ ಮಾರ್ಗಸೂಚಿಗಳ ಪ್ರಕಾರ, ಎಲ್ಲಾ ವಿದೇಶಿ ಪ್ರಯಾಣಿಕರು ಕಳೆದ 14 ದಿನಗಳ ಪ್ರಯಾಣದ ಇತಿಹಾಸವನ್ನು ಒಳಗೊಂಡಂತೆ ಆನ್‌ಲೈನ್‌ನಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಬೇಕು.
ಪ್ರಯಾಣದ ದಿನಾಂಕದ 72 ಗಂಟೆಗಳ ಒಳಗೆ ನಡೆಸಿದ ಕೋವಿಡ್‌ ಆರ್‌ಟಿ-ಪಿಸಿಆರ್‌ ಪರೀಕ್ಷೆಯ ನೆಗೆಟಿವ್‌ ವರದಿಯನ್ನು ಪ್ರಯಾಣಿಕರು ಅಪ್‌ಲೋಡ್ ಮಾಡಬೇಕು. ಇದರ ಬದಲಾಗಿ ರಡೂ ಲಸಿಕೆ ಡೋಸ್‌ಗಳನ್ನು ಸ್ವೀಕರಿಸಿದ್ದಾರೆ ಎಂದು ದೃಢೀಕರಿಸುವ ಪ್ರಮಾಣಪತ್ರವನ್ನು ಅಪ್‌ಲೋಡ್ ಮಾಡಬಹುದು. ಆದರೆ ಈ ಆಯ್ಕೆ 72 ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಮಾತ್ರ ಲಭ್ಯವಿರುತ್ತದೆ.

ಈ ದೇಶಗಳಲ್ಲಿ ಕೆನಡಾ, ಹಾಂಗ್ ಕಾಂಗ್, ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್‌ಡಮ್, ಬಹ್ರೇನ್, ಕತಾರ್, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ ಮತ್ತು ಕೆಲವು ಯುರೋಪಿಯನ್ ರಾಷ್ಟ್ರಗಳು ಸೇರಿವೆ. “ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿದ ಪ್ರಯಾಣಿಕರಿಗೆ ಮಾತ್ರ ವಿಮಾನಯಾನ ಸಂಸ್ಥೆಗಳು ಬೋರ್ಡಿಂಗ್‌ಗೆ ಅವಕಾಶ ನೀಡುತ್ತದೆ. ಹಾಗೆಯೇ ಕೋವಿಡ್‌ ನೆಗೆಟಿವ್‌ ಪರೀಕ್ಷಾ ವರದಿ ಅಥವಾ ಕೋವಿಡ್‌ ಲಸಿಕೆ ಪ್ರಮಾಣಪತ್ರವನ್ನು ಅಪ್‌ಲೋಡ್ ಮಾಡಿದರೆ ಮಾತ್ರ ಬೋರ್ಡಿಂಗ್‌ಗೆ ಅವಕಾಶ ನೀಡುತ್ತದೆ,” ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಲಕ್ಷಣರಹಿತ ಪ್ರಯಾಣಿಕರನ್ನು ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು. ಪ್ರಯಾಣದ ಸಂದರ್ಭದಲ್ಲಿ ಮಾಸ್ಕ್‌ಗಳ ಬಳಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಕೂಡಾ ಮಾರ್ಗಸೂಚಿಯಲ್ಲಿ ಸೇರ್ಪಡೆ ಮಾಡಲಾಗಿದೆ. ಆಗಮನದ ನಂತರ, ಥರ್ಮಲ್ ಸ್ಕ್ರೀನಿಂಗ್ ಜೊತೆಗೆ, ಆರ್‌ಟಿ-ಪಿಸಿಆರ್‌ ಪರೀಕ್ಷೆಗೆ ಒಳಗಾಗಲು ಹೇಳಲಾಗಿದೆ. ಪ್ರಯಾಣಿಕರನ್ನು ವಿಮಾನಯಾನ ಸಂಸ್ಥೆಯು ಆಯ್ಕೆ ಮಾಡುತ್ತದೆ. ರೋಗಲಕ್ಷಣಗಳು ಕಂಡುಬರುವ ಪ್ರಯಾಣಿಕರನ್ನು ತಕ್ಷಣವೇ ನಿರ್ಬಂಧಿಸಲಾಗುತ್ತದೆ ಮತ್ತು ಪರೀಕ್ಷಿಸಲಾಗುತ್ತದೆ. ಕೋವಿಡ್‌ ಪಾಸಿಟಿವ್‌ ಬಂದರೆ ಸಂಪರ್ಕವನ್ನು ಪತ್ತೆ ಹಚ್ಚಲಾಗುತ್ತದೆ. ಎಲ್ಲಾ ಇತರ ಪ್ರಯಾಣಿಕರು ಯಾವುದೇ ಕೋವಿಡ್ ರೋಗಲಕ್ಷಣಗಳು ಇದ್ದರೆ 14 ದಿನಗಳವರೆಗೆ ಸ್ವಯಂ ನಿರ್ಬಂಧಕ್ಕೆ ಒಳಗಾಗಬೇಕು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು