ದೆಹಲಿ: ವಿದೇಶಕ್ಕೆ ಪ್ರಯಾಣಿಸುವವರಿಗೆ 2ನೇ ಡೋಸ್ (2nd dose )ಮತ್ತು ಬೂಸ್ಟರ್ ನಡುವಿನ ಅವಧಿಯನ್ನ 90 ದಿನಕ್ಕೆ ಇಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಬೂಸ್ಟರ್ ಡೋಸ್ (BoosterDose) ತೆಗೆದುಕೊಳ್ಳಲು 2ನೇ ಡೋಸ್ ಪಡೆದ ಬಳಿಕ ಸುಮಾರು 9 ತಿಂಗಳು ಕಾಯಬೇಕು. 3ನೇ ಡೋಸ್ ಕೊರೊನಾ (Coronavirus) ವಿರುದ್ಧ ಪರಿಣಾಮಕಾರಿಯಾಗಿರುವುದರಿಂದ 90 ದಿನಗಳ ಒಳಗೆ ಬೂಸ್ಟರ್ ಡೋಸ್ ಪಡೆಯುವುದರಿಂದ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದು ತಜ್ಞರು ಹೇಳಿದ್ದಾರೆ. ಆದರೆ ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಅಧಿಕೃತ ಪ್ರಕಟಣೆ ಈವರೆಗೆ ಆಗಿಲ್ಲ. ವಿದೇಶ ಪ್ರಯಾಣಿಕರಿಗೆ ಮುನ್ನೆಚ್ಚರಿಕೆ ಡೋಸ್ ಬಗ್ಗೆ ನಿಯಮಾವಳಿಗಳನ್ನು ಸಡಿಲಿಸುವ ನಿರ್ಧಾರವು ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿಯ (NTAGI) ಶಿಫಾರಸುಗಳನ್ನು ಆಧರಿಸಿದೆ ಎಂದು ಮೂಲಗಳು ತಿಳಿಸಿವೆ. ವಿದೇಶಕ್ಕೆ ಪ್ರಯಾಣಿಸಬೇಕಾದವರು ಕಡ್ಡಾಯವಾಗಿ ಒಂಬತ್ತು ತಿಂಗಳ ಅಂತರಕ್ಕೆ ಕಾಯುವ ಮೊದಲು ಅವರು ಪ್ರಯಾಣಿಸುವ ದೇಶಕ್ಕೆ ಅಗತ್ಯವಿರುವ ಕೊವಿಡ್ ಲಸಿಕೆಯನ್ನು ಮುನ್ನೆಚ್ಚರಿಕೆಯಾಗಿ ತೆಗೆದುಕೊಳ್ಳಬಹುದು ಎಂದು ಸಲಹಾ ಸಮಿತಿಯು ಶಿಫಾರಸು ಮಾಡಿದೆ. ಈಗಿನಂತೆ ಎರಡನೇ ಡೋಸ್‌ನ ನಂತರ ಒಂಬತ್ತು ತಿಂಗಳುಗಳನ್ನು ಪೂರೈಸಿದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರೂ ಮುನ್ನೆಚ್ಚರಿಕೆ ಲಸಿಕೆಗೆ ಅರ್ಹರಾಗಿದ್ದಾರೆ. ಭಾರತದ ಅಧಿಕೃತ ನಿಯೋಗದ ಭಾಗವಾಗಿ ಉದ್ಯೋಗ, ವ್ಯಾಪಾರ, ವಿದೇಶಿ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ, ಕ್ರೀಡಾಕೂಟಗಳಲ್ಲಿ ಭಾಗವಹಿಸುವುದು ಮತ್ತು ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಸಭೆಗಳಿಗೆ ವಿದೇಶಕ್ಕೆ ಪ್ರಯಾಣಿಸಬೇಕಾದವರಿಗೆ ಕೊವಿಡ್ ಲಸಿಕೆಯ ಮುನ್ನೆಚ್ಚರಿಕೆ ಪ್ರಮಾಣವನ್ನು ಕೋರಿ ಕೇಂದ್ರ ಆರೋಗ್ಯ ಸಚಿವಾಲಯವು ಹಲವಾರು ಮನವಿ ಸ್ವೀಕರಿಸಿದೆ.
ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ
ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?