ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದ್ಯಾರ್ಥಿಗಳ ಮೇಲೆ ಹರಿದ ಕಾರು: ಮೂವರು ಸ್ಥಳದಲ್ಲೇ ಸಾವು

Twitter
Facebook
LinkedIn
WhatsApp
elon musk twitter 2

ಚೆನ್ನೈ: ಶಾಲೆಗೆ ತೆರಳುತಿದ್ದ ವಿದ್ಯಾರ್ಥಿಗಳಿಗೆ ಕಾರು ಢಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಿರುಪತ್ತೂರ್ ನ ವಾಣಿಯಂಪಾಡಿನಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.

ಮಂಗಳವಾರ ಮುಂಜಾನೆ ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಸೈಕಲ್‌ ನಲ್ಲಿ ವಿದ್ಯಾರ್ಥಿಗಳು ಗುಂಪೊಂದು ಗಿರಿಸಮುಥಿರಂನಲ್ಲಿರುವ ಸರ್ಕಾರಿ ಶಾಲೆಗೆ ಹೋಗುತ್ತಿದ್ದರು. ಈ ವೇಳೆ ವೆಲ್ಲೂರಿನಿಂದ ಬೆಂಗಳೂರಿಗೆ ಕಡೆ ಹೋಗುತ್ತಿದ್ದ ಕಾರು ವೇಗವಾಗಿ ಬಂದು ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದು, ಮರಕ್ಕೆ ಗುದ್ದಿದೆ. ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಕಾರಣ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದ ವಿಜಯ್(13), ರಫೀಕ್(13) ಮತ್ತು ಸೂರ್ಯ(13) ಎನ್ನುವ ವಿದ್ಯಾರ್ಥಿಗಳು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ