ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ಮಂಗಳೂರು ವಿವಿ ಸಹಾಯಕ ಪ್ರಾಧ್ಯಾಪಕ ಖುಲಾಸೆ

Twitter
Facebook
LinkedIn
WhatsApp
8943 1593234660 8087

ವಿದ್ಯಾರ್ಥಿನಿಯೊಬ್ಬಳ ಮನೆಗೆ ಆಗಾಗ ಹೋಗುತ್ತಿದ್ದು, ಒಂದು ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ (Student Harrassment) ಎಂಬ ಆರೋಪ ಎದುರಿಸುತ್ತಿದ್ದ ಮಂಗಳೂರು ವಿವಿಯ ಪ್ರಾಧ್ಯಾಪಕರೊಬ್ಬರನ್ನು ಕರ್ನಾಟಕ ಹೈಕೋರ್ಟ್‌ ದೋಷಮುಕ್ತಗೊಳಿಸಿ ಆದೇಶ ನೀಡಿದೆ.

ಮಂಗಳೂರು ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ವೇದವ ಅವರು ವಿದ್ಯಾರ್ಥಿನಿಯೊಬ್ಬಳ ಜತೆ ಆತ್ಮೀಯ ಸಂಬಂಧ ಹೊಂದಿದ್ದು, ಆಗಾಗ ಆಕೆಯ ಮನೆಗೆ ಹೋಗುತ್ತಿದ್ದರು ಎನ್ನಲಾಗಿದೆ. 2013ರ ಆಗಸ್ಟ್‌ 2ರಂದು ವಿದ್ಯಾರ್ಥಿನಿ ಒಬ್ಬಳೇ ಇದ್ದಾಗ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎನ್ನುವುದು ಆರೋಪ.ಘಟನೆಯನ್ನು ಯಾರಿಗೂ ಹೇಳದಂತೆ, ಒಂದೊಮ್ಮೆ ಹೇಳಿದರೆ ರೌಡಿಗಳಿಂದ ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದರು. ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಬಲವಂತದಿಂದ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎನ್ನುವುದು ಅವರ ಮೇಲಿನ ಆರೋಪವಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ್ದ ಮಂಗಳೂರಿನ ವಿಚಾರಣಾಧೀನ ನ್ಯಾಯಾಲಯವು ವೇದವ ಅವರನ್ನು ತಪ್ಪಿತಸ್ಥರೆಂದು ಹೇಳಿತ್ತು. ಮತ್ತು ಮೇಲ್ಮನವಿಯನ್ನು ತಿರಸ್ಕರಿಸಿತ್ತು. ಬಳಿಕ ಈ ಆದೇಶವನ್ನು ಬದಿಗೆ ಸರಿಸುವಂತೆ ಕೋರಿ ಡಾ. ವೇದವ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ವೇದವ ಅವರ ಕ್ರಿಮಿನಲ್‌ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಹೇಮಂತ್‌ ಚಂದನಗೌಡರ್‌ ಅವರ ನೇತೃತ್ವದ ಏಕಸದಸ್ಯ ಪೀಠವು, ವೇದವ ಅವರ ಅರ್ಜಿ ವಜಾ ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ 2017ರ ಜೂನ್‌ 9ರ ಆದೇಶವನ್ನು ಬದಿಗೆ ಸರಿಸಲಾಗಿದೆ. ಅಂತೆಯೇ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 376 ಮತ್ತು 506ರ ಅಡಿ ದಾಖಲಾಗಿರುವ ಪ್ರಕರಣದಿಂದ ಅರ್ಜಿದಾರರನ್ನು ಆರೋಪ ಮುಕ್ತಗೊಳಿಸಲಾಗಿದೆ ಎಂದು ಹೇಳಿದೆ.

ದೋಷಮುಕ್ತಗೊಳಿಸಲು ಕಾರಣಗಳೇನು?

1. ವೇದವ ಅವರು ವಿದ್ಯಾರ್ಥಿನಿಯ ಜೊತೆ 2013ರ ಜೂನ್‌ 2ರಂದು ಬಲವಂತವಾಗಿ ದೈಹಿಕ ಸಂಬಂಧ ಬೆಳೆಸಿದ್ದು, 2014ರ ಅಕ್ಟೋಬರ್‌ 16ರಂದು ಎಫ್‌ಐಆರ್‌ ದಾಖಲಿಸಲಾಗಿದೆ. ಇದರರ್ಥ ದೂರುದಾರೆ ಮತ್ತು ಅರ್ಜಿದಾರರು ಸಂಬಂಧದಲ್ಲಿದ್ದರು ಎಂಬುದಾಗಿದೆ.
2. ಇಬ್ಬರ ನಡುವಿನ ಸಂಬಂಧ ಹದಗೆಟ್ಟಾಗ ದೂರುದಾರೆಯು ಪ್ರತೀಕಾರ ತೀರಿಸಿಕೊಳ್ಳುವ ದುರುದ್ದೇಶದಿಂದ ಪ್ರಕರಣ ದಾಖಲಿಸಿದ್ದಾರೆ. ಹೀಗಾಗಿ, ವೇದವ ಅವರ ವಿರುದ್ಧ ಕಾನೂನು ಪ್ರಕ್ರಿಯೆ ಮುಂದುವರಿಸುವುದು ಕಾನೂನಿನ ದುರ್ಬಳಕೆಯಾಗಲಿದೆ ಎಂದು ಪೀಠವು ಆದೇಶದಲ್ಲಿ ವಿವರಿಸಿದೆ.
3. ದೂರುದಾರೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಕೊತೆ ಲೈಂಗಿಕ ಸಂಪರ್ಕ ಬೆಳೆಸಿರುವುದಕ್ಕೆ ಸಂಬಂಧಿಸಿದಂತೆ ಆರೋಪ ಪಟ್ಟಿಯಲ್ಲಿ ವಿವರಣೆ ಇಲ್ಲ. ಆದರೆ, ಅರ್ಜಿದಾರರು ಬಲವಂತವಾಗಿ ಆಕೆಯ ಜೊತೆ ಸಂಭೋಗಿಸಿದ್ದರು ಎಂಬುದು ಆರೋಪವಾಗಿದೆ. ಇದಕ್ಕೆ ಐಪಿಸಿ ಸೆಕ್ಷನ್‌ 376, 506 ಅನ್ವಯಿಸುವುದಿಲ್ಲ ಎಂದು ಹೇಳಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ