ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಧಾನಸಭಾ ಚುನಾವಣೆಗೆ ಕಾರ್ಕಳದಿಂದ ಸ್ಪರ್ಧೆ ಖಚಿತ – ಹುಟ್ಟುಹಬ್ಬದಂದೇ ಮುತಾಲಿಕ್ ಅಧಿಕೃತ ಘೋಷಣೆ

Twitter
Facebook
LinkedIn
WhatsApp
Pramod Muthalik

ಉಡುಪಿ: ಮುಂದಿನ ವಿಧಾನಸಭಾ ಚುನಾವಣೆಗೆ (Karnataka Assembly Election) ಕಾರ್ಕಳದಿಂದಲೇ (Karkala) ಸ್ಪರ್ಧಿಸುತ್ತೇನೆ ಎಂದು ಶ್ರೀರಾಮ ಸೇನೆಯ (Sri Ram Sene) ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಘೋಷಣೆ ಮಾಡಿದ್ದಾರೆ.

ಕಾರ್ಕಳದಲ್ಲಿ 68ನೇ ಹುಟ್ಟುಹಬ್ಬದ ಆಚರಿಸಿಕೊಂಡ ಮುತಾಲಿಕ್, 2023ರ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ಘೋಷಿಸಿದರು. ನಾನು ಕಾರ್ಕಳದಿಂದಲೇ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ. ಸಾವಿರಾರು ಕಾರ್ಯಕರ್ತರ ಒತ್ತಡದಿಂದ ನೋವಿನ ಧನಿಯಾಗಿ ಈ ಘೋಷಣೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ.

ಏಳೆಂಟು ಬಾರಿ ಕ್ಷೇತ್ರವನ್ನು ಸುತ್ತಾಡಿದ್ದೇನೆ ಜನ ಬೆಂಬಲಿಸಿದ್ದಾರೆ. ಕ್ಷೇತ್ರದಲ್ಲಿ ಹಿಂದೂಗಳಿಗೆ ನೋವಾಗಿದೆ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಹಿಂದುತ್ವ-ಭ್ರಷ್ಟಾಚಾರ ವಿರುದ್ಧ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಮುತಾಲಿಕ್ ಶಪಥಗೈದಿದ್ದಾರೆ.

ನಾನು ಬಿಜೆಪಿ (BJP) ಸಿದ್ಧಾಂತದ ವಿರೋಧಿ ಅಲ್ಲ. ಬಿಜೆಪಿಯೊಳಗಿನ ಕೆಲ ವ್ಯಕ್ತಿಗಳು, ಅವರ ತತ್ವ ಸಿದ್ಧಾಂತ ವಿರುದ್ಧ ನನ್ನ ಹೋರಾಟ. ಬಿಜೆಪಿ ಅಂದು ಮಾಡಿದ ಅವಮಾನ ಎಂದಿಗೂ ಮರೆಯೋದಿಲ್ಲ. ಹಿಂದುತ್ವ ಪ್ರಾಮಾಣಿಕತೆ ಇದ್ದರೆ ನನಗೆ ಬಿಜೆಪಿ ಕಾರ್ಕಳದಲ್ಲಿ ಬೆಂಬಲ ಕೊಡಬೇಕು ಮನವಿ ಮಾಡಿಕೊಂಡಿದ್ದಾರೆ. ಕಾರ್ಕಳ ಇಂಧನ ಸಚಿವ ಸುನಿಲ್‌ ಕುಮಾರ್‌ ಅವರು ಸ್ಪರ್ಧಿಸಿ ಗೆಲುವು ಕಂಡ ವಿಧಾನಸಭಾ ಕ್ಷೇತ್ರ. ಇದೀಗ ಪ್ರಮೋದ್‌ ಮುತಾಲಿಕ್‌  ಕಾರ್ಕಳದಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿ ಕುತೂಹಲ ಮೂಡಿಸಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ