ಬೆಂಗಳೂರು: ತಮಗೆ ಪ್ರತಿಪಕ್ಷ ನಾಯಕ ಸ್ಥಾನ ಕೈತಪ್ಪಿರುವುದರಿಂದ ಬೇಸರಗೊಂಡು ಕಾಂಗ್ರೆಸ್ನಿಂದ ದೂರ ಸರಿಯುವುದಾಗಿ ಹೇಳುತ್ತಿದ್ದ ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಬೆಳಿಗ್ಗೆ 11 ಗಂಟೆಗೆ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾದ ಇಬ್ರಾಹಿಂ, ರಾಜೀನಾಮೆ ಸಲ್ಲಿಸಿದರು. ಪರಿಷತ್ ಸ್ಥಾನಕ್ಕೆ ಇಬ್ರಾಹಿಂ ಸಲ್ಲಿಸಿದ ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದರು.ಕಳೆದ ಹಲವು ತಿಂಗಳಿಂದ ಕಾಂಗ್ರೆಸ್ ಪಕ್ಷದ ಮೇಲೆ ಮುನಿಸಿಕೊಂಡಿದ್ದ ಅವರು ಜೆಡಿಎಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದರು. ಈ ಸಂಬಂಧ ಜೆಡಿಎಸ್ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಮತ್ತು ದೇವೇಗೌಡರನ್ನೂ ಸಂಪರ್ಕಿಸಿದ್ದರು ಎಂದು ಮೂಲಗಳು ತಿಳಿಸಿದ್ದವು. ಜೆಡಿಎಸ್ನಲ್ಲಿ ಸಿಗಲಿರುವ ಸ್ಥಾನಮಾನಗಳ ಬಗ್ಗೆ ಈವರೆಗೆ ಇಬ್ರಾಹಿಂ ಅವರಿಗೆ ಯಾವುದೇ ಸ್ಪಷ್ಟ ಭರವಸೆ ಸಿಕ್ಕಿಲ್ಲ. ಮತ್ತೊಂದೆಡೆ ಇಬ್ರಾಹಿಂ ಮನವೊಲಿಸಲು ಕಾಂಗ್ರೆಸ್ನ ಹಿರಿಯ ನಾಯಕರು ಯತ್ನಿಸಿದ್ದರು.
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?