ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ

Twitter
Facebook
LinkedIn
WhatsApp
ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ

ದೆಹಲಿ: ದೇಶದ ಕೆಲವು ಭಾಗಗಳಲ್ಲಿ ಕೊವಿಡ್ ( Covid 19 ) ಪ್ರಕರಣಗಳು ಏರಿಕೆಯಾಗುತ್ತಿದ್ದಂತೆ ವಿಮಾನ ನಿಲ್ದಾಣಗಳಲ್ಲಿ ಮತ್ತು ವಿಮಾನಗಳಲ್ಲಿ ಮಾಸ್ಕ್‌ ಧರಿಸುವುದು ( Mask ) ಕಡ್ಡಾಯ ಮಾಡಲಾಗಿದೆ.

ಮಾಸ್ಕ್ ಧರಿಸಲು ನಿರಾಕರಿಸುವ ಪ್ರಯಾಣಿಕರನ್ನು ಟೇಕ್-ಆಫ್‌ಗೆ ಮುಂಚಿತವಾಗಿ ಡಿ-ಬೋರ್ಡಿಂಗ್ ಮಾಡಬಹುದು ಅಥವಾ ಅಶಿಸ್ತಿನ ಪ್ರಯಾಣಿಕರಂತೆ ಪರಿಗಣಿಸಬಹುದು ಎಂದು ನಾಗರಿಕ ವಿಮಾನಯಾನ ನಿಯಂತ್ರಕ (DGCA) ಬುಧವಾರ ಹೇಳಿದೆ. ಸಿಐಎಸ್‌ಎಫ್‌ನ ಸಿಬ್ಬಂದಿ ಮಾಸ್ಕ್‌ ನಿಯಮ ಪಾಲನೆಯ ಉಸ್ತುವಾರಿಯನ್ನು ಹೊಂದಿರುತ್ತಾರೆ ಎಂದು ಡಿಜಿಸಿಎ ಹೇಳಿದೆ. ಕೊವಿಡ್ ಸುರಕ್ಷಾ ಕ್ರಮಗಳನ್ನು ಪಾಲಿಸಲು ನಿರಾಕರಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ದೆಹಲಿ ಹೈಕೋರ್ಟ್ ಆದೇಶಿಸಿದ ನಂತರ ಡಿಜಿಸಿಎ ಈ ಹೊಸ ಮಾರ್ಗಸೂಚಿ ಹೊರಡಿಸಿದೆ. ಯಾವುದೇ ಪ್ರಯಾಣಿಕರು ಪುನರಾವರ್ತಿತ ಎಚ್ಚರಿಕೆಗಳ ನಂತರವೂ ಸೂಚನೆಗಳನ್ನು ಅನುಸರಿಸದಿದ್ದಲ್ಲಿ, ನಿರ್ಗಮನದ ಮೊದಲು, ಅಗತ್ಯವಿದ್ದರೆ, ಅವನನ್ನು/ಅವಳನ್ನು ಡಿ-ಬೋರ್ಡಿಂಗ್ ಮಾಡಬೇಕು. ವಿಮಾನದಲ್ಲಿ ಯಾವುದೇ ಪ್ರಯಾಣಿಕರು ಮಾಸ್ಕ್ ಧರಿಸಲು ನಿರಾಕರಿಸಿದರೆ ಅಥವಾ ಪುನರಾವರ್ತಿತ ಎಚ್ಚರಿಕೆಗಳ ನಂತರವೂ ಪ್ರಯಾಣಿಕರು ಕೊವಿಡ್-19 ಪ್ರೊಟೊಕಾಲ್ ಉಲ್ಲಂಘಿಸಿದರೆ, ಹಾರಾಟದ ಸಮಯದಲ್ಲಿ, ಅಂತಹ ಪ್ರಯಾಣಿಕರನ್ನು “ಅಶಿಸ್ತಿನ ಪ್ರಯಾಣಿಕರು” ಎಂದು ಪರಿಗಣಿಸಬಹುದು ಎಂದು ಡಿಜಿಸಿಎ ಬುಧವಾರ ಹೊರಡಿಸಿದ ಆದೇಶದಲ್ಲಿ ಹೇಳಿದೆ.

ನಿಗಾ ಮತ್ತು ಎಚ್ಚರಿಕೆಗಳನ್ನು ಹೆಚ್ಚಿಸುವಂತೆ ವಿಮಾನ ನಿಲ್ದಾಣ ಆಪರೇಟರ್ ಗಳಿಗೆ ಹೇಳಲಾಗಿದೆ. ಮಾಸ್ಕ್ ಧರಿಸಲು ನಿರಾಕರಿಸುವ ಪ್ರಯಾಣಿಕರಿಗೆ ದಂಡ ಅಥವಾ ಅಂಥಾ ವ್ಯಕ್ತಿಗಳನ್ನು ಭದ್ರತಾ ಏಜೆನ್ಸಿಗಳಿಗೆ ಒಪ್ಪಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಸಿಎ ಆದೇಶದಲ್ಲಿ ಹೇಳಿದೆ.

ಕೊವಿಡ್ ಸಾಂಕ್ರಾಮಿಕ ಇನ್ನೂ ಹೋಗಿಲ್ಲ, ಹಾಗಾಗಿ ಕೊವಿಡ್ ಪ್ರೋಟೊಕಾಲ್ ಗಳನ್ನು ತಪ್ಪದೇ ಪಾಲಿಸಬೇಕು. ಇದನ್ನು ಪಾಲಿಸದೇ ಇದ್ದವರ ವಿರುದ್ಧ ಆರೋಗ್ಯ ಸಚಿವಾಲಯ ಅಥವಾ ಡಿಜಿಸಿಎ ಮಾರ್ಗಸೂಚಿ ಪ್ರಕಾರ ಕ್ರಮ ಕೈಗೊಳ್ಳಬಹುದು ಎಂದು ಜೂನ್ 3ರಂದು ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿತ್ತು.

ನಿಯಮ ಪಾಲಿಸದೇ ಇರುವ ಪ್ರಯಾಣಿಕರನ್ನು ಹೊರದಬ್ಬಬಹುದು, “ನೊ-ಫ್ಲೈ” ಪಟ್ಟಿಗೆ ಸೇರಿಸಬಹುದು ಅಥವಾ ಮುಂದಿನ ಕ್ರಮಕ್ಕಾಗಿ ಭದ್ರತಾ ಏಜೆನ್ಸಿಗಳಿಗೆ ಹಸ್ತಾಂತರಿಸಬಹುದು ಎಂದು ನ್ಯಾಯಾಲಯವು ಹೇಳಿದೆ. “ನಮ್ಮ ದೃಷ್ಟಿಯಲ್ಲಿ ಈ ರೀತಿ ಆದೇಶವನ್ನು ನೀಡುವುದು ಸರಿಯಾದ ಹೆಜ್ಜೆಯಾಗಿದೆ, ಏಕೆಂದರೆ ಸಾಂಕ್ರಾಮಿಕ ರೋಗವು ಕಡಿಮೆಯಾಗಿಲ್ಲ ಮತ್ತು ಅದು ಮತ್ತೆ ಮತ್ತೆ ಬರುತ್ತಿದೆ ಎಂದು ನ್ಯಾಯಾಲಯ ಹೇಳಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ