ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಮಾನ ನಿಲ್ದಾಣದಲ್ಲಿ ಕದ್ದು ಮುಚ್ಚಿ ಮಹಿಳೆಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಯ ಬಂಧನ

Twitter
Facebook
LinkedIn
WhatsApp
ವಿಮಾನ ನಿಲ್ದಾಣದಲ್ಲಿ ಕದ್ದು ಮುಚ್ಚಿ ಮಹಿಳೆಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಯ ಬಂಧನ

ದೇವನಹಳ್ಳಿ: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಅನುಮತಿಯಿಲ್ಲದೆ ಫೋಟೋ (photo) ತೆಗೆಯುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಆರೋಪಿಯನ್ನು ಆಂಧ್ರಪ್ರದೇಶದ ಶ್ರೀಕಾಕುಳಂ ನಿವಾಸಿ ರವಡಾ ಲಕ್ಷ್ಮೀ ನಾರಾಯಣ ಎಂದು ಪೊಲೀಸರು ಗುರುತಿಸಿದ್ದಾರೆ. 

ಅಂದಹಾಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಡೆಹ್ರಾಡೂನ್​ಗೆ ತೆರಳಲು ಮಹಿಳೆಯೊಬ್ಬರು ಆಗಮಿಸಿದ್ದರು. ಟರ್ಮಿನಲ್ ಮುಂಬಾಗ ಕಾಫಿ ಕುಡಿಯಲು ಮಹಿಳೆ ನಿಂತಿದ್ದರು. ಈ‌ ವೇಳೆ ಖದ್ದು ಮುಚ್ಚಿ ಪಕ್ಕದ ಟೇಬಲ್​ನಲ್ಲಿ ಕುಳಿತುಕೊಂಡಿದ್ದ ಆಂಧ್ರ ಮೂಲದ ವ್ಯಕ್ತಿ ಮಹಿಳೆಯ ಫೋಟೋ ತೆಗೆದಿದ್ದಾನೆ. ಈ ವೇಳೆ ಅಲರ್ಟ್ ಆದ ಮಹಿಳೆ ಮೊಬೈಲ್​ನಲ್ಲಿದ್ದ ಫೋಟೋ ಸಮೇತ ಆರೋಪಿಯನ್ನ ಪೊಲೀಸರ ವಶಕ್ಕೆ ನೀಡಿದ್ದಾಳೆ. ಜೊತೆಗೆ ಮಹಿಳೆಯ ಅನುಮತಿಯಿಲ್ಲದೆ ಅಸಭ್ಯ ರೀತಿಯಲ್ಲಿ ಫೋಟೋ ಕ್ಲಿಕ್ಕಿಸಿದ ಕಾರಣಕ್ಕೆ ವ್ಯಕ್ತಿಯನ್ನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದಾರೆ.

ಚನ್ನಗಿರಿಯಲ್ಲಿ ಕಾಡಾನೆ ಆತಂಕ: ಗ್ರಾಮಸ್ಥರು ಎಚ್ಚರಿಕೆ ಇರುವಂತೆ ಅರಣ್ಯ ಇಲಾಖೆ ಸೂಚನೆ:

ದಾವಣಗೆರೆ (ಏ.9): ಜಿಲ್ಲೆಯ ಚನ್ನಗಿರಿ ತಾಲೂಕಿನ ಸೋಮಲಾಪುರ ಕಾಶಿಪುರ ಹಾಗೂ ಜಕಲಿ ಗ್ರಾಮಗಳಿಗೆ ನುಗ್ಗಿದ  2 ಕಾಡಾನೆಗಳು ಗ್ರಾಮದ ನಾಲ್ವರ ಮೇಲೆ ದಾಳಿ ಮಾಡಿದ್ದು, 16 ವರ್ಷದ ಬಾಲಕಿ ಸಾವನ್ನಪ್ಪಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಚನ್ನಗಿರಿ ತಾಲೂಕು ಅರಿಶಿನ ಘಟ್ಟ ಬಳಿಯ ಸೂಳೆಕೇರೆಯಲ್ಲಿ ಕಾಡಾನೆಗಳು ಬೀಡುಬಿಟ್ಟಿರುವ ಹಿನ್ನೆಲೆ ಹೊನ್ನಾಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚರಿಸುವ ಸಾಧ್ಯತೆ ಹೀಗಾಗಿ ಹೊಲ ಗದ್ದೆಗಳಲ್ಲಿ ಕೆಲಸ ಮಾಡುವ ರೈತರು ಸಾರ್ವಜನಿಕರು ಎಚ್ಚರದಿಂದರಲು ಅರಣ್ಯ ಇಲಾಖೆ ಸೂಚನೆ ನೀಡಿದೆ.

ಹಾಲೇಶಪುರ ಬೈರನಹಳ್ಳಿ ಚನ್ನೇನಹಳ್ಳಿ ಕ್ಯಾಸಿನ ಕೆರೆ, ಕುಳಗಟ್ಟೆ ಮಲ್ಲಿಕಟ್ಟೆ ರಾಂಪುರ ಉಜ್ಜಯಿನಿಪುರ  ಹೊಳೆ ಬೆನಕನಹಳ್ಳಿ ಕಮ್ಮರಘಟ್ಟ ತರಗನಹಳ್ಳಿ ತಕ್ಕನಹಳ್ಳಿ ಮಾರ್ಗದಲ್ಲಿ ಕಾಡಾನೆಗಳು ಸಂಚರಿಸುವ ಸಾಧ್ಯತೆಗಳಿದ್ದು ರೈತರೆಲ್ಲರೂ ಎಚ್ಚರಿಕೆಯಿಂದರಲು ಸೂಚನೆ ನೀಡಿದೆ. ಅಲ್ಲದೆ ಅರಣ್ಯ ಇಲಾಖೆ ಹಾಗು ಪೊಲೀಸರಿಂದಲೂ ಆನೆ ಸಾಗುವ ಮಾರ್ಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ