ಶುಕ್ರವಾರ, ಮೇ 3, 2024
4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿರಾಟ್ ಕೊಹ್ಲಿಗೆ ಮುತ್ತಿಟ್ಟ ಮಹಿಳಾ ಅಭಿಮಾನಿ! ವಿಡಿಯೋ ವೈರಲ್

Twitter
Facebook
LinkedIn
WhatsApp
ವಿರಾಟ್ ಕೊಹ್ಲಿಗೆ ಮುತ್ತಿಟ್ಟ ಮಹಿಳಾ ಅಭಿಮಾನಿ! ವಿಡಿಯೋ ವೈರಲ್

ನವದೆಹಲಿ(ಫೆ.22): ಆಧುನಿಕ ಕ್ರಿಕೆಟ್‌ನ ಸೂಪರ್‌ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಸದಾ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ವಿರಾಟ್ ಕೊಹ್ಲಿಗೆ ಕೇವಲ ಭಾರತ ಮಾತ್ರವಲ್ಲ, ಜಗತ್ತಿನಾದ್ಯಂತ ಎಲ್ಲಾ ವಯೋಮಾನದ ಅಭಿಮಾನಿಗಳು ಇದ್ದಾರೆ. ವಿರಾಟ್‌ ಕೊಹ್ಲಿಗೆ ಪುರುಷರಷ್ಟೇ ಮಹಿಳಾ ಅಭಿಮಾನಿಗಳು ಇದ್ದಾರೆ

ವಿರಾಟ್ ಕೊಹ್ಲಿ ತಮ್ಮ ಬಹುಕಾಲದ ಗೆಳತಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದು, ಈ ಜೋಡಿಗೆ ವಮಿಕಾ ಎನ್ನುವ ಮುದ್ದಾದ ಮಗಳೂ ಇದ್ದಾಳೆ. ಕ್ರಿಕೆಟ್ ಜಗತ್ತಿನ ಚಿರಪರಿಚಿತ ಹೆಸರಾಗಿರುವ ವಿರಾಟ್ ಕೊಹ್ಲಿಯ ಮೇಣದ ಪ್ರತಿಮೆಯನ್ನು ಮೇಡಮ್ ಟುಸ್ಸಾಡ್ಸ್‌ನಲ್ಲಿ ಸ್ಥಾಪಿಸಲಾಗಿದೆ. ವಿರಾಟ್ ಕೊಹ್ಲಿಯ ಅಪ್ಪಟ ಅಭಿಮಾನಿಯೊಬ್ಬರು ವಿರಾಟ್ ಕೊಹ್ಲಿಯ ಮೇಣದ ಪ್ರತಿಮೆಗೆ ಲಿಪ್‌ಲಾಕ್‌ ಮಾಡಿದ್ದಾಳೆ. ಈ ವಿಡಿಯೋ ಸಾಕಷ್ಟು ವೈರಲ್‌ ಆಗಿದೆ

ವಿರಾಟ್ ಕೊಹ್ಲಿಯ ಮೇಣದ ಪ್ರತಿಮೆಗೆ ಯುವತಿ ಮುತ್ತಿಟ್ಟಿರುವ ಸುಂದರ ವಿಡಿಯೋ ಸಾಕಷ್ಟು ವೈರಲ್ ಆಗಿದ್ದರೂ ಸಹಾ, ನೆಟ್ಟಿಗರು ಇದನ್ನು ಸಹಿಸಿಕೊಂಡಿಲ್ಲ. ಹಲವರು ಅನುಷ್ಕಾ ಶರ್ಮಾಗೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ ಮಾಡಿದ್ದಾರೆ. ಈ ಪ್ರೀತಿಗೆ ಏನೆಂದು ಕರೆಯಬೇಕು ಎಂದು ಯುವತಿ, ಮೇಣದ ಪ್ರತಿಮೆ ಕಿಸ್‌ ಮಾಡುತ್ತಿರುವ ವಿಡಿಯೋವೊಂದನ್ನು ನೆಟ್ಟಿಗರು ಶೇರ್ ಮಾಡಿದ್ದಾರೆ. ಓರ್ವ ನೆಟ್ಟಿಗ ಇದು ಅನುಷ್ಕಾ ಶರ್ಮಾ ಮೇಲಾಗುತ್ತಿರುವ ಶೋಷಣೆ. ಈ ಮಹಿಳೆಯ ಮೇಲೆ ಅನುಷ್ಕಾ ಶರ್ಮಾ, ದೂರು ದಾಖಲಿಸಬೇಕು. ಈ ರೀತಿಯ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಟ್ವೀಟ್‌ ಮಾಡಿದ್ದಾರೆ. 

ಇನ್ನು ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಬಗ್ಗೆ ಹೇಳುವುದಾದರೇ, ಈ ತಾರಾ ಜೋಡಿ ಸಾಕಷ್ಟು ವರ್ಷಗಳ ಡೇಟಿಂಗ್ ಬಳಿಕ 2017ರಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಅವರು ಹೊರಗಡೆ ಸುತ್ತಾಡುತ್ತಿರುವ ಕೆಲವು ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ.

ಇಂದೋರ್ ಟೆಸ್ಟ್‌ಗೆ ರೆಡಿಯಾಗುತ್ತಿರುವ ವಿರಾಟ್ ಕೊಹ್ಲಿ: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ 4 ಪಂದ್ಯಗಳ ಟೆಸ್ಟ್‌ ಸರಣಿಯ ಮೊದಲೆರಡು ಪಂದ್ಯಗಳು ಮುಕ್ತಾಯವಾಗಿದ್ದು, ಇದೀಗ ಮೂರನೇ ಟೆಸ್ಟ್‌ ಪಂದ್ಯಕ್ಕೆ ದಿನಗಣನೆ ಆರಂಭವಾಗಿದೆ. ಮೂರನೇ ಏಕದಿನ ಪಂದ್ಯವು ಮಾರ್ಚ್‌ 01ರಂದು ಆರಂಭವಾಗಲಿದ್ದು, ಇಂದೋರ್‌ನ ಹೋಲ್ಕರ್ ಮೈದಾನ ಆತಿಥ್ಯವನ್ನು ವಹಿಸಿದೆ. ಮೊದಲೆರಡು ಟೆಸ್ಟ್‌ ಪಂದ್ಯಗಳಲ್ಲಿ ದೊಡ್ಡ ಮೊತ್ತ ಗಳಿಸಲು ವಿಫಲವಾಗಿರುವ ವಿರಾಟ್ ಕೊಹ್ಲಿ, ಮೂರನೇ ಟೆಸ್ಟ್‌ ಪಂದ್ಯದಲ್ಲಿ ಶತಕ ಸಿಡಿಸುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ