ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿರೋಧ ಪಕ್ಷದ ನಾಯಕ ಸ್ಥಾನ ಜೆಡಿಎಸ್ ಪಾಲಿಗೆ ಬರುತ್ತದೆ. ನಿರೀಕ್ಷಿಸಿ: ಲಕ್ಷ್ಮಣ ಸವದಿ

Twitter
Facebook
LinkedIn
WhatsApp
WhatsApp Image 2023 07 12 at 1.33.19 PM

ಬೆಂಗಳೂರು: ವೈಟ್ ಆಂಡ್ ಸಿ, ವಿರೋಧ ಪಕ್ಷದ ನಾಯಕ ಸ್ಥಾನ ಜೆಡಿಎಸ್ ಮನೆ ಬಾಗಿಲಿಗೆ ಬರುತ್ತದೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಭವಿಷ್ಯ ನುಡಿದರು.ವಿಧಾನಸಭೆಯಲ್ಲಿ ‌ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಜೆಡಿಎಸ್ ಸದಸ್ಯ ಜಿಟಿ ದೇವೇಗೌಡ ಮಾತನಾಡುತ್ತಾ, ಬಿಎಸ್ ಯಡಿಯೂರಪ್ಪ ಅವರನ್ನ ಅಧಿಕಾರದಿಂದ ಇಳಿಸಿದ್ರು. ಆದರೆ ಅವರನ್ನು ಯಾಕೆ ಇಳಿಸಿದ್ರು ಅನ್ನೋದು ಗೊತ್ತಿಲ್ಲ.‌ ನರೇಂದ್ರ ಮೋದಿಯವರು ಬಿಟ್ರೆ ಯಾರಿಗೂ ಗೊತ್ತಿಲ್ಲ. ಲಕ್ಷ್ಮಣ್ ಸವದಿ ಅವರು ಉಪ ಮುಖ್ಯಮಂತ್ರಿ ಆಗಿದ್ದರು. ಸವದಿ ಅವರೇ ನಿಮಿಗಾದ್ರೂ ಗೊತ್ತಾ..? ಎಂದು ಪ್ರಶ್ನಿಸಿದರು.

ಈ ವೇಳೆ ಮಧ್ಯಪ್ರವೇಶ ಮಾಡಿದ ಲಕ್ಷ್ಮಣ ಸವದಿ,‌ ಬಿಎಸ್ ವೈ ಅವರನ್ನ ಯಾಕೆ ಇಳಿಸಿದ್ರು ಹೇಗೆ ಇಳಿಸಿದ್ರು ಅನ್ನೋದು ನಮಗಿಂತ ಹೆಚ್ಚು ನಿಮಗೆ ಗೊತ್ತಿದೆ. ನೀವು ಹೇಳ್ತಾ ಇಲ್ಲ ಅಷ್ಟೇ. ಆದರೆ ವಿರೋಧ ಪಕ್ಷದ ನಾಯಕ ಇಲ್ಲ ಅಂತ ಹೇಳುತ್ತಿದ್ದೀರಲ್ವಾ,‌ ಅದಕ್ಕೋಸ್ಕರನೇ ಎರಡನೇ ಸೀಟ್ ನಲ್ಲಿ ಯಾರೂ ಕೂರುತ್ತಿಲ್ಲ. ಸ್ಥಾನಕ್ಕಾಗಿ ಬಹಳ ಕಚ್ಚಾಡ್ತಾ ಇದ್ದಾರೆ ಆದರೆ ಪ್ರಯೋಜನ ಇಲ್ಲ. ಕುಮಾರಸ್ವಾಮಿ ಅವರು ಮಾತ್ರ ವಿರೋಧ ಪಕ್ಷದಲ್ಲಿ ಕೂತು ಕೆಲಸ ಮಾಡ್ತಾ ಇದ್ದಾರೆ. ಅದಕ್ಕಾಗಿಯೇ ಇನ್ನೂ ಆಯ್ಕೆ ಮಾಡಿಲ್ಲ ಅಂತ ಹೊರಗೆ ಚರ್ಚೆ ನಡೀತಾ ಇದೆ ಎಂದರು.

ಈ ವೇಳೆ ಎಚ್ ಡಿ ರೇವಣ್ಣ ಮಧ್ಯಪ್ರವೇಶಿಸಿ,‌ ಸವದಿ ಅವರನ್ನು ಹೊರಗೆ ಹಾಕಿದ್ದು ಯಾರು ಅಂತ ಗೊತ್ತಾಗಲಿಲ್ಲ. ಅವರು ಪಾಪ ಏನು ಮಾಡಿದ್ರು ಯಾಕೆ ಹೊರಗೆ ಕಳಿಸಿದ್ರು ಗೊತ್ತಿಲ್ಲ ಎಂದರು.

ಇಂಗ್ಲಿಷ್ ಇರೋದೇ ತಪ್ಪು ಮಾತಾಡೋಕೆ, ಕನ್ನಡ ಇರೋದು ಸರಿಯಾಗಿ ಮಾತನಾಡಲು: ಪ್ರದೀಪ್ ಈಶ್ವರ್

ಬೆಂಗಳೂರು: ಇಂಗ್ಲಿಷ್ (English) ಇರೋದೇ ತಪ್ಪು ಮಾತಾಡೋಕೆ, ಆದರೆ ಕನ್ನಡ (Kannada) ಇರೋದು ಸರಿಯಾಗಿ ಮಾತನಾಡಲು ಎಂದು ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಹೇಳಿದ್ದಾರೆ.ವಿಧಾನಸಭೆಯಲ್ಲಿ (Visdhana Sabha) ಮಾತನಾಡಿದ ಅವರು, ಬಡವರ ದೇವಾಲಯ ಕನ್ನಡ ಶಾಲೆ. ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯಾ ಎನ್ನುವ ಹಾಗೆ ಬಡವರ ಮಕ್ಕಳು ವಿಧಾನಸೌಧಕ್ಕೆ ಬರಲು ಸಾಧ್ಯವಾಗಿರುವುದು ಸಂವಿಧಾನದಿಂದ. ನಮ್ಮ ಪಕ್ಷದ ನಾಯಕರು ನನ್ನಂತ ಬಡವರ ಮಗನನ್ನು ವಿಧಾನಸೌಧಕ್ಕೆ ಕಳುಹಿಸಿದ್ದಾರೆ ಎಂದರು. 

ಅನ್ನಭಾಗ್ಯ (Annabhagya) ಶ್ರೀಮಂತರ ದೃಷ್ಟಿಯಲ್ಲಿ ರೇಷನ್ ಅಷ್ಟೇ. ಆದರೆ ನನ್ನಂತವನ ದೃಷ್ಟಿಯಲ್ಲಿ ಅನ್ನ ಎನ್ನುವುದು ದೇವರು. ಗೃಹಜ್ಯೋತಿ (Gruhajyothi) ಕೇವಲ ಮನೆಯನ್ನು ಬೆಳಗುತ್ತಿಲ್ಲ. ಕೋಟ್ಯಂತರ ಮಕ್ಕಳು ತಡರಾತ್ರಿಯವರೆಗೆ ಓದಲು ಸಹಾಯಕವಾಗಿದೆ. ಕನ್ನಡ ಮಾಧ್ಯಮದ ಶಾಲೆಗಳನ್ನು ಉಳಿಸಲು ಆದ್ಯತೆ ನೀಡಬೇಕಿದೆ. ಅದರ ಬಗ್ಗೆ ಸಂಬಂಧಿಸಿದ ಸಚಿವರು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.ಸರ್ಕಾರಿ ಆಸ್ಪತ್ರೆಯ ಚಿಕಿತ್ಸಾ ಗುಣಮಟ್ಟ ಚೆನ್ನಾಗಿರುವಂತೆ ನೋಡಿಕೊಳ್ಳಬೇಕು. ಉತ್ತಮ ಚಿಕಿತ್ಸೆ ಸಿಗದೆ ನನ್ನ ಅಪ್ಪ-ಅಮ್ಮನನ್ನು ಕಳೆದುಕೊಂಡೆ. ಅಂತಹ ಸ್ಥಿತಿ ಯಾರಿಗೂ ಬರಬಾರದು. ಅದಕ್ಕಾಗಿ ಸರ್ಕಾರಿ ಆಸ್ಪತ್ರೆ ಉಳಿಸಬೇಕು. ಸಿದ್ದರಾಮನಹುಂಡಿಯಲ್ಲಿ ಹುಟ್ಟಿದ ಸಿದ್ದರಾಮಯ್ಯನವರಿಗೆ (Siddaramaiah) ಹಸಿವಿನ ಅನುಭವವಿದೆ. ಅದಕ್ಕಾಗಿ ಅನ್ನಭಾಗ್ಯ ತಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಐಎಎಸ್ ಮತ್ತು ಮೆಡಿಕಲ್ ಓದಲು ಬರುವ ಕನ್ನಡ ಮಾಧ್ಯಮದವರನ್ನು (Kannada Medium) ಸರ್ಕಾರ ಆದ್ಯತೆ ಮೇಲೆ ಪರಿಗಣಿಸಬೇಕು. ಉನ್ನತ ಶಿಕ್ಷಣ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಗೆ ಮರಿಚೀಕೆ ಆಗಬಾರದು. ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist