ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಶ್ವ ದಾಖಲೆ: ನೋ ಬಾಲ್ ಎಸೆಯದೇ 30,000 ಚೆಂಡೆಸೆದ ಮೊದಲ ಬೌಲರ್ ನಾಥನ್ ಲಿಯಾನ್

Twitter
Facebook
LinkedIn
WhatsApp
ವಿಶ್ವ ದಾಖಲೆ: ನೋ ಬಾಲ್ ಎಸೆಯದೇ 30,000 ಚೆಂಡೆಸೆದ ಮೊದಲ ಬೌಲರ್ ನಾಥನ್ ಲಿಯಾನ್

India vs Australia 1st Test: ನಾಗ್ಪುರದಲ್ಲಿ ನಡೆದ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ನಾಗ್ಪುರದಲ್ಲಿ ನಡೆದ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ 49 ಓವರ್​ ಎಸೆದಿದ್ದರು. ಅಂದರೆ 294 ಎಸೆತಗಳೊಂದಿಗೆ ಇದೀಗ ಆಸೀಸ್ ಸ್ಪಿನ್ನರ್ ಹೊಸ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಯಾವುದೇ ನೋ ಬಾಲ್ ಎಸೆಯದೇ 30,000 ಚೆಂಡೆಸೆದ ಮೊದಲ ಬೌಲರ್ ಎಂಬ ವಿಶ್ವ ದಾಖಲೆಯು ನಾಥನ್ ಲಿಯಾನ್ ಪಾಲಾಗಿದೆ. ಅಂದರೆ ಟೆಸ್ಟ್ ಕೆರಿಯರ್​ನಲ್ಲಿ ಒಟ್ಟು 218 ಇನಿಂಗ್ಸ್​ನಲ್ಲಿ ಬೌಲ್ ಮಾಡಿರುವ ಲಿಯಾನ್ ಇದುವರೆಗೆ ಒಂದೇ ಒಂದು ನೋಬಾಲ್ ಎಸೆದಿಲ್ಲ ಎಂಬುದೇ ಅಚ್ಚರಿ.

2011 ರಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದ ಮೂಲಕ ಟೆಸ್ಟ್ ಕೆರಿಯರ್ ಆರಂಭಿಸಿದ್ದ ನಾಥನ್ ಇದುವರೆಗೆ 5 ಸಾವಿರಕ್ಕೂ ಅಧಿಕ ಓವರ್ ಎಸೆದಿದ್ದಾರೆ. ಈ ವೇಳೆ ಒಮ್ಮೆಯೂ ಗೆರೆದಾಟದೇ ವಿಶ್ವ ದಾಖಲೆ ಬರೆದಿರುವುದೇ ವಿಶೇಷ.

ಇನ್ನು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಒಂದು ನೋಬಾಲ್ ಎಸೆಯದೇ 100 ಟೆಸ್ಟ್ ಪಂದ್ಯವಾಡಿದ ಏಕೈಕ ಬೌಲರ್ ಎಂಬ ವಿಶ್ವ ದಾಖಲೆ ಕೂಡ ನಾಥನ್ ಲಿಯಾನ್ ಹೆಸರಿನಲ್ಲಿದೆ. ಇದೀಗ 30000 ಸಾವಿರ ಬಾಲ್​ಗಳನ್ನು ಪೂರೈಸುವ ಮೂಲಕ ಹೊಸ ಮೈಲುಗಲ್ಲನ್ನು ದಾಟಿದ್ದಾರೆ.

ಇದುವರೆಗೆ 116 ಟೆಸ್ಟ್ ಪಂದ್ಯಗಳನ್ನಾಡಿರುವ ನಾಥನ್ ಲಿಯಾನ್ 30064 ಎಸೆತಗಳಲ್ಲಿ 14689 ರನ್ ನೀಡಿದ್ದಾರೆ. ಈ ವೇಳೆ 461 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಅತ್ಯಧಿಕ ಟೆಸ್ಟ್ ವಿಕೆಟ್ ಪಡೆದ ವಿಶ್ವದ 8ನೇ ಬೌಲರ್ ಎನಿಸಿಕೊಂಡಿದ್ದಾರೆ.

ಹಾಗೆಯೇ ಟೆಸ್ಟ್ ಕ್ರಿಕೆಟ್​ನಲ್ಲಿ ಶೇನ್ ವಾರ್ನ್​ (708) ಬಳಿಕ ಅತೀ ಹೆಚ್ಚು ವಿಕೆಟ್ ಪಡೆದ ಆಸ್ಟ್ರೇಲಿಯಾ ಸ್ಪಿನ್ನರ್ ಎಂಬ ಹೆಗ್ಗಳಿಕೆಗೂ ನಾಥನ್ ಲಿಯಾನ್ ಪಾತ್ರರಾಗಿದ್ದಾರೆ. ಒಟ್ಟಿನಲ್ಲಿ 5 ಸಾವಿರಕ್ಕೂ ಅಧಿಕ ಓವರ್ ಎಸೆದು ಒಂದೇ ಒಂದು ನೋ ಬಾಲ್ ಮಾಡದಿರುವುದು ಸರ್ವಶ್ರೇಷ್ಠ ಸಾಧನೆ ಎಂದೇ ಹೇಳಬಹುದು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ