ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಾಲರಾಮ ಇನ್ನಿಲ್ಲ!
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರೆಯಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಭಾನುವಾರ ಕೊನೆಯುಸಿರೆಳೆದಿದ್ದಾನೆ. ತೀವ್ರ ಅಸ್ವಸ್ಥಗೊಂಡಿದ್ದ ಬಲರಾಮ ಆನೆಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.
ಬಲರಾಮನಿಗೆ ಸುಮಾರು 67 ವರ್ಷ ಪ್ರಾಯವಾಗಿತ್ತು ಕಳೆದ ಕಳೆದ ಹತ್ತು ದಿನಗಳಿಂದ ಬಾಯಿಯಲ್ಲಿ ಹುಣ್ಣಾಗಿ ನಿತ್ರಾಣಗೊಂಡಿದ್ದ, ಬಲರಾಮನಿಗೆ ಟಿ.ಬಿ.(ಕ್ಷಯ) ಇರಬಹುದೆಂದು ವೈದ್ಯರು ಶಂಕಿಸಿದ್ದರು., ವೈದ್ಯಕೀಯ ವರದಿ ಬಂದ ನಂತರವಷ್ಟೆ ಕಾಯಿಲೆ ಕುರಿತು ನಿಖರವಾಗಿ ತಿಳಿಯಲಿದೆ.
ಸ್ಥಳದಲ್ಲೇ ಬೀಡು ಬಿಟ್ಟಿದ್ದರು
ಆಹಾರ ಸೇವಿಸಲು, ನೀರು ಕುಡಿಯಲು ಆಗದಂತಹ ಸ್ಥಿತಿ ಉಂಟಾಗಿದ್ದರಿಂದ ನಾಗರಹೊಳೆ ಪಶುವೈದ್ಯ ಡಾ.ರಮೇಶ್ ಸ್ಥಳದಲ್ಲೇ ಮೊಕ್ಕಾಂ ಹೂಡಿ ಚಿಕಿತ್ಸೆ ನೀಡುತ್ತಿದ್ದರು. ನಾಗರಹೊಳೆ ಮುಖ್ಯಸ್ಥ ಹರ್ಷಕುಮಾರ್ ಚಿಕ್ಕನರಗುಂದ ಮಾರ್ಗದರ್ಶನದಲ್ಲಿ ಆರ್‌ಎಫ್‌ಓ ರತ್ನಾಕರ್, ಡಿಆರ್‌ಎಫ್‌ಓ ಸಿದ್ದರಾಜು ನೇತೃತ್ವದ ತಂಡ ಹಾಗೂ ಬಲರಾಮನ ಮಾವುತ ತಿಮ್ಮ, ಕವಾಡಿ ಮಂಜನಾಥ ಹಾಗೂ ಸಿಬಂದಿ ಸ್ಥಳದಲ್ಲೇ ಇದ್ದು, ಅಸ್ವಸ್ಥ ಬಲರಾಮನ ಆರೈಕೆಯಲ್ಲಿ ತೊಡಗಿಸಿಕೊಂಡಿದ್ದರು