ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಅತ್ತ ಸಮಂತಾ ರುತ್ ಪ್ರಭು, ವಿಡಿಯೋ ವೈರಲ್!
ನಟಿ ಸಮಂತಾ ರುತ್ ಪ್ರಭು ಅವರು ಜೀವನದಲ್ಲಿ ಹಲವು ಏಳು-ಬೀಳುಗಳನ್ನು ಕಂಡಿದ್ದಾರೆ. ವೃತ್ತಿಜೀವನ ಇನ್ನೇನು ಏರುಗತಿಯಲ್ಲಿ ಇದೆ ಎನ್ನುವಾಗಲೇ ಅವರಿಗೆ ಆರೋಗ್ಯ ಕೈ ಕೊಟ್ಟಿತು. ಹಲವು ತಿಂಗಳು ಚಿಕಿತ್ಸೆ ಪಡೆದ ನಂತರವೂ ಅವರು ಪೂರ್ಣವಾಗಿ ಗುಣಮುಖವಾಗಿಲ್ಲ. ಅನಾರೋಗ್ಯದ ನಡುವೆಯೂ ಅವರು ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸುತ್ತಿದ್ದಾರೆ. ಸಮಂತಾ ನಟಿಸಿರುವ ‘ಶಾಕುಂತಲಂ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾ ಟ್ರೇಲರ್ ಬಿಡುಗಡೆ ಆಗಿದೆ. ಹೈದರಾಬಾದ್ನಲ್ಲಿ ಅದ್ದೂರಿ ಇವೆಂಟ್ ಮಾಡಲಾಯಿತು. ಈ ವೇಳೆ ಸಮಂತಾ ಅವರು ಕಣ್ಣೀರು ಹಾಕಿದ್ದಾರೆ. ವೇದಿಕೆ ಮೇಲೆ ಅವರು ಗಳಗಳನೆ ಅತ್ತಿರುವ ವಿಡಿಯೋ ವೈರಲ್ ಆಗಿದೆ.
ಸಮಂತಾ ಅವರಿಗೆ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ಹತ್ತಾರು ಅವಕಾಶಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಆದರೆ ಆರೋಗ್ಯ ಅಡ್ಡಿ ಆಗಿರುವುದರಿಂದ ಸರಿಯಾದ ಸಮಯಕ್ಕೆ ಸಿನಿಮಾ ಕೆಲಸಗಳನ್ನು ಮುಗಿಸಿಕೊಡಲು ಕಷ್ಟವಾಗುತ್ತಿದೆ. ಆ ವಿಚಾರದಲ್ಲಿ ಅವರಿಗೆ ಬೇಸರ ಇದೆ. ಆದರೂ ಕೂಡ ಚಿತ್ರತಂಡದವರು ಸಮಂತಾಗೆ ಸೂಕ್ತ ಬೆಂಬಲ ನೀಡುತ್ತಿದ್ದಾರೆ. ಈ ಬೆಂಬಲವನ್ನು ನೆನೆದು ಅವರು ಎಮೋಷನಲ್ ಆಗಿದ್ದಾರೆ.
‘ಜೀವನದಲ್ಲಿ ನಾನು ಎಷ್ಟೇ ಕಷ್ಟಗಳನ್ನು ಎದುರಿಸಬಹುದು. ಆದರೆ ಒಂದು ವಿಷಯ ಬದಲಾಗುವುದಿಲ್ಲ. ನಾನು ಸಿನಿಮಾವನ್ನು ಎಷ್ಟು ಪ್ರೀತಿಸುತ್ತೀನೋ ಸಿನಿಮಾ ಕೂಡ ನನ್ನನ್ನು ಅಷ್ಟೇ ಪ್ರೀತಿಸುತ್ತದೆ. ಶಾಕುಂತಲಂ ಸಿನಿಮಾದಿಂದ ಈ ಪ್ರೀತಿ ಇನ್ನಷ್ಟು ಹೆಚ್ಚಾಗಲಿದೆ’ ಎಂದು ಸಮಂತಾ ಹೇಳಿದ್ದಾರೆ.
ಅದ್ದೂರಿ ಬಜೆಟ್ನಲ್ಲಿ ‘ಶಾಕುಂತಲಂ’ ಸಿನಿಮಾ ಮೂಡಿಬಂದಿದೆ. ಬೃಹತ್ ಸೆಟ್ಗಳು ಗಮನ ಸೆಳೆಯುತ್ತಿವೆ. ಅತ್ಯಾಧುನಿಕ ಗ್ರಾಫಿಕ್ಸ್ ತಂತ್ರಜ್ಞಾನದಲ್ಲಿ ಮೂಡಿಬಂದಿರುವ ದೃಶ್ಯಗಳು ಈ ಟ್ರೇಲರ್ನಲ್ಲಿ ಹೈಲೈಟ್ ಆಗಿವೆ. ಇದನ್ನು ನೋಡಿದ ಬಳಿಕ ಸಿನಿಮಾ ಮೇಲಿನ ನಿರೀಕ್ಷೆ ಇನ್ನಷ್ಟು ಜಾಸ್ತಿ ಆಗಿದೆ. ಫೆಬ್ರವರಿ 17ರಂದು ‘ಶಾಕುಂತಲಂ’ ಚಿತ್ರ ರಿಲೀಸ್ ಆಗಲಿದೆ. ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಬಿಡುಗಡೆ ಆಗಲಿದೆ. ಸಮಂತಾ ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇರುವುದರಿಂದ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಗಲಿದೆ ಎಂಬ ಭರವಸೆ ಚಿತ್ರತಂಡಕ್ಕಿದೆ.
We're with you sam ?? be strong@Samanthaprabhu2#SamanthaRuthPrabhupic.twitter.com/sDjC9r9dBR
— Jegan (@JeganSammu) January 9, 2023