ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವೈಯಕ್ತಿಕ ಹಿತಾಸಕ್ತಿಗೆ ಆದ್ಯತೆ ನೀಡಿರುವ ಕರಾವಳಿ ಕಾಂಗ್ರೆಸ್, ಆಕ್ರಮಣಕಾರಿಯಾಗಿ ಪಕ್ಷ ಸಂಘಟನೆ ಮಾಡುತ್ತಿರುವ ಬಿಜೆಪಿ ಮುಂದೆ ಇನ್ನಷ್ಟು ನೆಲೆ ಕಳೆದುಕೊಳ್ಳಬಹುದೆ?

Twitter
Facebook
LinkedIn
WhatsApp
ವೈಯಕ್ತಿಕ ಹಿತಾಸಕ್ತಿಗೆ ಆದ್ಯತೆ ನೀಡಿರುವ ಕರಾವಳಿ ಕಾಂಗ್ರೆಸ್, ಆಕ್ರಮಣಕಾರಿಯಾಗಿ ಪಕ್ಷ ಸಂಘಟನೆ ಮಾಡುತ್ತಿರುವ ಬಿಜೆಪಿ ಮುಂದೆ ಇನ್ನಷ್ಟು ನೆಲೆ ಕಳೆದುಕೊಳ್ಳಬಹುದೆ?

ಮಂಗಳೂರು/ಉಡುಪಿ: ಕರಾವಳಿಯಲ್ಲಿ ಪ್ರಮುಖ ರಾಜಕೀಯ ಪಕ್ಷವಾದ ಕಾಂಗ್ರೆಸ್ ನ ನಾಯಕರುಗಳು ತಮ್ಮ ವೈಯಕ್ತಿಕ ಹಿತಾಸಕ್ತಿಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ , ರಾಷ್ಟ್ರರಾಜ್ಯ ನಾಯಕರುಗಳೊಂದಿಗೆ ಸಂಪರ್ಕ ಸಾಧನೆಗೆ ಆದ್ಯತೆ ನೀಡುತ್ತಾ ಪಕ್ಷದ ಸಂಘಟನೆಗೆ ಆದ್ಯತೆ ನೀಡದೆ ಸಂಪೂರ್ಣ ನಿರ್ಲಕ್ಷಿಸುತ್ತಿದ್ದಾರೆ ಎಂಬ ಆರೋಪ ಪಕ್ಷದ ಕಾರ್ಯಕರ್ತರ ವಲಯದಲ್ಲಿ ಕಾಣಬರುತ್ತದೆ. ಈ ಆರೋಪ ಮಾಡಲು ಮುಖ್ಯ ಕಾರಣ ಆಡಳಿತದಲ್ಲಿದ್ದರೂ ಕರಾವಳಿಯಲ್ಲಿ ಬಿಜೆಪಿ ಹಿಂದಿಗಿಂತಲೂ ಆಕ್ರಮಣಕಾರಿಯಾಗಿ ಪಕ್ಷವನ್ನು ಸಂಘಟಿಸುತ್ತಿದೆ. ಬಿಜೆಪಿಯೊಂದಿಗೆ ಬಿಜೆಪಿಯ ಪರಿವಾರ ಸಂಘಟನೆಗಳು ಈ ಕಾರ್ಯದಲ್ಲಿ ಹಿಂದಿಗಿಂತಲೂ ಚುರುಕಾಗಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಈ ನಡುವೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಪಕ್ಷ ಸಂಘಟನೆಯ ಬಗ್ಗೆ ಗಮನ ಹರಿಸುತ್ತಿದ್ದರು, ಬಣ ರಾಜಕೀಯ ಅವರನ್ನು ಹೈರಾಣಾಗಿಸಿದೆ ಎನ್ನುತ್ತದೆ ಪಕ್ಷದ ಆಂತರಿಕ ಮೂಲಗಳು.

ಕಾಂಗ್ರೆಸ್ನ ಯುವ ಪಕ್ಷದ ನಾಯಕರುಗಳು ರಾಜ್ಯ ರಾಷ್ಟ್ರಮಟ್ಟದ ನಾಯಕರುಗಳೊಂದಿಗೆ ಸಂಪರ್ಕ ಸಾಧಿಸುವ ಕಾರ್ಯದಲ್ಲಿ ಮಾತ್ರ ನಿರತರಾಗಿದ್ದಾರೆ. ಅದು ಅಲ್ಲದೆ ತಮ್ಮ ವೈಯಕ್ತಿಕ ಮೌಲ್ಯ ಹೆಚ್ಚಿಸುವ ಕಾರ್ಯಕ್ರಮಗಳನ್ನು ಮಾತ್ರ ಆಯೋಜಿಸುತ್ತಿದ್ದಾರೆ ಎಂಬ ಆಕ್ಷೇಪವನ್ನು ಪಕ್ಷದ ಕಾರ್ಯಕರ್ತರು ವ್ಯಕ್ತಪಡಿಸುತ್ತಿದ್ದಾರೆ.

ಇನ್ನೊಂದು ಕಡೆಯಲ್ಲಿ ಬಿಜೆಪಿ ಮನೆ ಮನೆಗೆ ಭೇಟಿ ನೀಡಿ, ಪಕ್ಷವನ್ನು ಇನ್ನಷ್ಟು ಪುನರ್ ಸಂಘಟನೆ ಮಾಡುತ್ತಿದೆ. ಈ ಕಾರ್ಯಕ್ರಮದಲ್ಲಿ ಪ್ರತಿ ಭಾಗದಲ್ಲೂ ಪಕ್ಷದ ರಾಜ್ಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರೇ ಸ್ವತಃ ಭಾಗವಹಿಸಿದ್ದು ಪಕ್ಷದ ಕಾರ್ಯಕರ್ತರಲ್ಲಿ ಇನ್ನಷ್ಟು ಹುರುಪನ್ನು ತಂದಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಇನ್ನು ವಿಧಾನಸಭೆ ಚುನಾವಣೆಗೆ ಕೇವಲ ಹದಿನಾಲ್ಕು ತಿಂಗಳು ಮಾತ್ರ ಬಾಕಿ ಉಳಿದಿರುವುದನ್ನು ಮನ ಗೊಂಡಿರುವ ಬಿಜೆಪಿ ತನ್ನ ವೈಯಕ್ತಿಕ ತಾರಾ ಮೌಲ್ಯಗಳನ್ನು ಅಭಿವೃದ್ಧಿಪಡಿಸಲು ಮಹತ್ವ ನೀಡದೆ ಬೂತ್ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಆದ್ಯತೆ ನೀಡಿದೆ.

ಕರಾವಳಿ ಕಾಂಗ್ರೆಸ್ಸಿನ ಯುವ ನಾಯಕರುಗಳು ಬೆಂಗಳೂರು, ದೆಹಲಿ ಮಟ್ಟದಲ್ಲಿ ರಾಜಕೀಯ ಮಾಡುವ ಮೂಲಕ ಕರಾವಳಿಯಲ್ಲಿ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬ ಭ್ರಮೆಯಲ್ಲಿದ್ದಾರೆ ಎನ್ನುತ್ತಾರೆ ಓರ್ವ ನೊಂದ ಕಾರ್ಯಕರ್ತರು.
ಪಕ್ಷ ಸಂಘಟನೆ ಗಿಂತ ಟಿಕೆಟ್ ಪಡೆಯುವುದೇ ಮುಖ್ಯ ಅಜೆಂಡಾ ಆಗಿದ್ದುಕೊಂಡು ಪ್ರತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಏನು ಲಾಭ ಇಲ್ಲ ಎನ್ನುತ್ತಾರೆ ಕಾರ್ಯಕರ್ತರು.

ಬಿಜೆಪಿಯ ಶಾಸಕರುಗಳು, ಪಕ್ಷದ ಪದಾಧಿಕಾರಿಗಳು ಸತತ ಜನ ಸಂಪರ್ಕದಲ್ಲಿದ್ದಾರೆ. ಅಲ್ಲದೆ ಕರಾವಳಿ ಮತ್ತೊಮ್ಮೆ ಹಿಂದುತ್ವದ ಕಡೆಗೆ ವಾಲುತ್ತಿರುವುದು ಬಿಜೆಪಿಗೆ ವರದಾನವಾಗಿ ಪರಿಣಮಿಸಬಹುದು ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ತಮ್ಮ ಸ್ವಂತ ಪ್ರಚಾರದ ಸಲುವಾಗಿ ಕಾಂಗ್ರೆಸ್ ನಾಯಕರುಗಳು ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ. ಇದರಿಂದ ಏನೂ ಪ್ರಯೋಜನವಿಲ್ಲ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು. ಅರ್ಹರಲ್ಲದ ಮಂದಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಪಕ್ಷವನ್ನು ಮುಜುಗರಕ್ಕೆ ಈಡು ಮಾಡಿದ್ದಾರೆ, ಪಕ್ಷದ ನಾಯಕರುಗಳು ಇಂಥವರಿಗೆ ಮಣೆಹಾಕುತ್ತಿರುವುದು ದುರಂತ ಎನ್ನುತ್ತಾರೆ ಕಾರ್ಯಕರ್ತರೊಬ್ಬರು. ಹಿಂಬಾಲಕರುಗಳನ್ನು ಪಕ್ಷದ ಪದಾಧಿಕಾರಿಗಳನ್ನಾಗಿ ಮಾಡುವ ಪ್ರಯತ್ನದಿಂದಾಗಿ ಪಕ್ಷ ಇನ್ನಷ್ಟು ಹಿನ್ನಡೆ ಅನುಭವಿಸುವಂತಾಗಿದೆ, ಇದರಿಂದ ಕಾಂಗ್ರೆಸ್ನಲ್ಲಿ ಅರ್ಹ ವ್ಯಕ್ತಿಗಳು ಅವಕಾಶ ವಂಚಿತರಾಗಿದ್ದಾರೆ ಎಂದು ಪಕ್ಷದ ಕಾರ್ಯಕರ್ತರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರಾವಳಿ ಬಿಜೆಪಿ ಸಾಮರ್ಥ್ಯವುಳ್ಳ ಪದಾಧಿಕಾರಿಗಳನ್ನು ಪಕ್ಷದ ಮುಂಚೂಣಿ ಕಾರ್ಯಗಳಿಗೆ ನಿಯೋಜಿಸುತ್ತಿರುವುದು ಅದು ಸುಲಭವಾಗಿ ಪಕ್ಷವನ್ನು ಸಂಘಟನೆ ಮಾಡುವಲ್ಲಿ ಯಶಸ್ಸಿಗೆ ಮುಖ್ಯ ಕಾರಣ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಒಟ್ಟಿನಲ್ಲಿ ಕರಾವಳಿಯ ಕಾಂಗ್ರೆಸ್ ನ ಈ ಸ್ಥಿತಿಗೆ ಹಿಂಬಾಲಕರ ಸಂಸ್ಕೃತಿ ಪೋಷಿಸುತ್ತಿರುವ ರಾಜ್ಯ ನಾಯಕರುಗಳಾದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಬಿಕೆ ಹರಿಪ್ರಸಾದ್ ಅಷ್ಟೇ ಕಾರಣ ಎಂಬುದು ಗುಟ್ಟಾಗಿ ಉಳಿದಿಲ್ಲ.
ಬಿಜೆಪಿ ರಾಜ್ಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ , ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ತ ತನ್ನ ಸ್ವಂತ ಜಿಲ್ಲೆಯಲ್ಲಿ ಪಕ್ಷವನ್ನು ಪ್ರಬಲವಾಗಿ ಸಂಘಟಿಸಲು ಬಹುವಾಗಿ ಪ್ರಯತ್ನ ಮಾಡುತ್ತಿದ್ದಾರೆ ಎಂಬುದು ಅಷ್ಟೇ ಸತ್ಯವಾಗಿದೆ. ಏನಾಗುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು