ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವೈಷ್ಣೋದೇವಿ ಭವನದ ಕಾಲ್ತುಳಿತದಲ್ಲಿ 12 ಮಂದಿ ಸಾವು.

Twitter
Facebook
LinkedIn
WhatsApp
ವೈಷ್ಣೋದೇವಿ ಭವನದ ಕಾಲ್ತುಳಿತದಲ್ಲಿ 12 ಮಂದಿ ಸಾವು.

ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋದೇವಿ ದೇಗುಲದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 12 ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದು ಇದರಲ್ಲಿ 8 ಮಂದಿಯ ಗುರುತು ಪತ್ತೆಯಾಗಿದೆ. ಘಟನೆಯಲ್ಲಿ 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭಕ್ತಾದಿಗಳ ನಡುವೆ ಉಂಟಾದ ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ಸಂಭವಿಸಿದೆ .

ಅವಘಡದ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಬಿಸ್ಪಿ ಮುಖ್ಯಸ್ಥೆ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ. ಇನ್ನು ಘಟನೆಯ ಬಗ್ಗೆ ಪ್ರಧಾನಿ ಮೋದಿ ಇಂಚಿಂಚೂ ಮಾಹಿತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಜಮ್ಮು & ಕಾಶ್ಮೀರದ ತ್ರಿಕೂಟ ಬೆಟ್ಟದ ಗರ್ಭಗುಡಿಯ ಹೊರಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ. ಹೊಸ ವರ್ಷದ ಹಿನ್ನೆಲೆಯಲ್ಲಿ ವೈಷ್ಣೋದೇವಿ ಭವನದಲ್ಲಿ ಅಪಾರ ಸಂಖ್ಯೆಯಲ್ಲಿ ಜನಸ್ತೋಮ ಸೇರಿತ್ತು. ಎಲ್ಲರೂ ಒಟ್ಟಾಗಿ ದೇಗುಲದ ಒಳಕ್ಕೆ ನುಗ್ಗಲು ಯತ್ನಿಸಿದ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಕಾಲ್ತುಳಿತದಲ್ಲಿ 12 ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಹಾಗೂ 14 ಮಂದಿ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕ ಮುಖೇಶ್​ ಸಿಂಗ್​ ಅಧಿಕೃತ ಮಾಹಿತಿ ನೀಡಿದರು.

ಕೂಡಲೇ ಕಾರ್ಯಪ್ರವೃತ್ತರಾದ ರಕ್ಷಣಾ ಪಡೆಗಳು ಭಕ್ತರ ರಕ್ಷಣೆಗೆ ಧಾವಿಸಿವೆ ಎನ್ನಲಾಗಿದೆ. ಅಲ್ಲದೇ ವೈಷ್ಣೋದೇವಿ ಭವನದಲ್ಲಿ ನೆರೆದಿದ್ದ ಬಹುತೇಕ ಭಕ್ತರ ಬಳಿಯಲ್ಲಿ ಅನುಮತಿ ಪತ್ರ ಇರಲಿಲ್ಲ ಎಂದೂ ತಿಳಿದುಬಂದಿದೆ. ಘಟನೆ ಸಂಬಂಧ ಅಸಮಾಧಾನ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಮಾತಾ ವೈಷ್ಣೋ ದೇವಿ ಭವನದಲ್ಲಿ ನೂಕುನುಗ್ಗಲಿನಿಂದ ಪ್ರಾಣಹಾನಿಯಾಗಿರುವುದು ಅತೀವ ದುಃಖ ತಂದಿದೆ ಎಂದು ಟ್ವೀಟಾಯಿಸಿದ್ದಾರೆ.
ಇನ್ನು ದುರ್ಘಟನೆಯಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ಸಿಗಲಿದೆ ಎಂದು ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು