ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವ್ಯಾಪಾರದಲ್ಲಿ ನಷ್ಟ – ಬಟ್ಟೆ ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Twitter
Facebook
LinkedIn
WhatsApp
heroclean 15edit1621693160 3 2

ಮಡಿಕೇರಿ: ವ್ಯಾಪಾರದಲ್ಲಿ ನಷ್ಟದಿಂದಾಗಿ ಬಟ್ಟೆವ್ಯಾಪಾರಿ (Merchant) ನೇಣುಬಿಗಿದು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕೊಡಗು (Kodagu) ಜಿಲ್ಲೆಯ ಮಡಿಕೇರಿ (Madikeri) ತಾಲೂಕಿನ ನಾಪೊಕ್ಲುವಿನಲ್ಲಿ ನಡೆದಿದೆ.

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಡ್ಲಹಳ್ಳಿ ಗ್ರಾಮದ ನಿವಾಸಿಯಾಗಿರುವ ಸಂದೀಪ್ (40) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಕಳೆದ 20 ವರ್ಷಗಳಿಂದ ನಾಪೊಕ್ಲುವಿನಲ್ಲಿ ಆರ್.ಹೆಚ್. ಬಟ್ಟೆಮಳಿಗೆ ನಡೆಸುತ್ತಿದ್ದ ಸಂದೀಪ್ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. ವ್ಯಾಪಾರದಲ್ಲಿ ನಷ್ಟದಿಂದಾಗಿ ವ್ಯಾಪಾರವನ್ನು ಸ್ಥಗಿತಗೊಳಿಸಿ ಬದುಕು ಸಾಗಿಸಲು ಕಷ್ಟಪಡುತ್ತಿದ್ದರು.

ಸೋಮವಾರ ಬೆಳಗ್ಗೆ 7:30ಕ್ಕೆ ತನ್ನ ಸ್ನೇಹಿತ ಸಂದೇಶ್ ಎಂಬುವವರಿಗೆ ಕರೆ ಮಾಡಿ 9 ಗಂಟೆಗೆ ಮನೆಗೆ ಬರುವಂತೆ ಸಂದೀಪ್ ತಿಳಿಸಿದ್ದರು. ಅದರಂತೆ 9 ಗಂಟೆಗೆ ಸಂದೇಶ್ ತನ್ನ ಸ್ನೇಹಿತನಾದ ಸಂದೀಪ್ ಮನೆಗೆ ತೆರಳಿದಾಗ ಸಂದೀಪ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಸಂದೇಶ್ ಅವರು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.

ವ್ಯಾಪಾರದಲ್ಲಿ ಉಂಟಾದ ನಷ್ಟದಿಂದಾಗಿ ಸಂದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ನಾಪೊಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ