ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಲಾ ಬಿಸಿಊಟದ ಅನ್ನದಲ್ಲಿ ಹಲ್ಲಿ ಪತ್ತೆ! 36 ವಿದ್ಯಾರ್ಥಿಗಳು ಅಸ್ವಸ್ಥ

Twitter
Facebook
LinkedIn
WhatsApp
h

ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟದಲ್ಲಿ ಹಲ್ಲಿ ಪತ್ತೆಯಾಗಿದ್ದು, ಆಹಾರ ಸೇವಿಸಿದ 36 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವಿದ್ಯಾರ್ಥಿಯೊಬ್ಬನ ತಟ್ಟೆಯಲ್ಲಿದ್ದ ಅನ್ನದಲ್ಲಿ ಹಲ್ಲಿ ಕಾಣಿಸಿಕೊಂಡಿತ್ತು. ಗುರುವಾರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಸ್ವೀಕರಿಸುವ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿಯೊಬ್ಬ ತನ್ನ ತಟ್ಟೆಯಲ್ಲಿ ಹಲ್ಲಿ ಇರುವುದನ್ನು ಕಂಡು ತಕ್ಷಣ ಶಿಕ್ಷಕರಿಗೆ ಮಾಹಿತಿ ನೀಡಿದ್ದಾನೆ. ನಂತರ ಶಾಲೆಯು ಮಧ್ಯಾಹ್ನದ ಊಟವನ್ನು ಸ್ಥಗಿತಗೊಳಿಸಲಾಯಿತು.

ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿದ ವಿದ್ಯಾರ್ಥಿಗಳನ್ನು ತಕ್ಷಣವೇ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. 36 ವಿದ್ಯಾರ್ಥಿಗಳು ಈಗ ಸ್ಥಿರವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಸದರ್ ಆಸ್ಪತ್ರೆಯ ಡಾ.ಸಂತೋಷ್ ತಿಳಿಸಿದ್ದಾರೆ. ಇದೇ ವೇಳೆ ಘಟನೆ ಕುರಿತು ಸರಕಾರಿ ಶಾಲೆಯಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದೆ. ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಸಂಜಯ್ ಕುಮಾರ್ ರೈ ಅವರು ವಿದ್ಯಾರ್ಥಿಗಳ ಸ್ಥಿತಿಯನ್ನು ತಿಳಿಯಲು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

40 ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಸೇವಿಸಿದ್ದಾರೆ, ಅದರಲ್ಲಿ 36 ಮಂದಿ ಅಸ್ವಸ್ಥರಾಗಿದ್ದಾರೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ಸರಬರಾಜು ಮಾಡುವ ಎನ್‌ಜಿಒ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಡಿಎಂ ಹೇಳಿದರು.

ಜುಲೈ 16, 2013 ರಂದು, ಸರನ್ ಜಿಲ್ಲೆಯ ಮಶ್ರಖ್‌ನ ಪ್ರಾಥಮಿಕ ಶಾಲೆಯಲ್ಲಿ ಕೀಟನಾಶಕದಿಂದ ಕಲುಷಿತಗೊಂಡ ಮಧ್ಯಾಹ್ನದ ಊಟವನ್ನು ಸೇವಿಸಿದ 23 ವಿದ್ಯಾರ್ಥಿಗಳು ಸಾವನ್ನಪ್ಪಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ