ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ, ಇಬ್ಬರು ಶಿಕ್ಷಕರು ಅಮಾನತು

Twitter
Facebook
LinkedIn
WhatsApp
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ, ಇಬ್ಬರು ಶಿಕ್ಷಕರು ಅಮಾನತು

ತುಮಕೂರು: ಶಾಲಾ ವಿದ್ಯಾರ್ಥಿನಿಯರಿಗೆ (Students) ಲೈಂಗಿಕ ಕಿರುಕುಳ ನೀಡುತ್ತಿದ್ದ(sexually harassment)  ಆರೋಪದ ಮೇಲೆ ಬೋರನಕುಂಟೆ ಸರ್ಕಾರಿ ಶಾಲೆ ಶಿಕ್ಷಕ (Teacher) ಮಂಜುನಾಥನನ್ನು ಅಮಾನತು ಮಾಡಲಾಗಿದೆ. ಇನ್ನು ಕರ್ತವ್ಯಲೋಪ ಆರೋಪದ ಮೇಲೆ ಮುಖ್ಯ ಶಿಕ್ಷಕ ನಟರಾಜ್ ಸಹ ಸಸ್ಪೆಂಡ್ ಮಾಡಿ ಮಧುಗಿರಿ ಬಿಇಒ ತಿಮ್ಮರಾಜು ಆದೇಶ ಹೊರಡಿಸಿದ್ದಾರೆ. 

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದೊದ್ದೇರಿ ಹೋಬಳಿ ಬೋರಗುಂಟೆ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ಮಂಜುನಾಥ ನಿತ್ಯ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದರು. ಇದರಿಂದ ರೊಚ್ಚಿಗೆದ್ದಿದ್ದ ಗ್ರಾಮಸ್ಥರು ಶಾಲೆಗೆ ನುಗ್ಗಿ ಮಂಜುನಾಥನನ್ನು ಗ್ರಾಮಸ್ಥರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದರು.

ಮಂಜುನಾಥನ ಕಾಮಚೇಷ್ಟೆ‌ ವಿಷಯ ತಿಳಿದು ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಜು ಹಾಗೂ ಬುಡವನಹಳ್ಳಿ ಪೊಲೀಸ್​ ಇನ್ಸ್​ಪೆಕ್ಟರ್​ ಹನುಮಂತರಾಯಪ್ಪ, ಸಿಡಿಪಿಒ ಅನಿತಾ ಅವರು ವಿದ್ಯಾರ್ಥಿನಿಯರ ವಿಚಾರಣೆ ನಡೆಸಿದ್ದರು. ಇದೀಗ ಬಿಇಒ, ಶಿಕ್ಷಕ ಮಂಜುನಾಥನನ್ನು ಕೆಲಸದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇದರ ಜೊತೆಗೆ ಕರ್ತವ್ಯಲೋಪ ಮೇಲೆ ಮುಖ್ಯ ಶಿಕ್ಷಕ ನಟರಾಜ್ ಅವರನ್ನು ಸಹ ಸಸ್ಪೆಂಡ್ ಮಾಡಿದ್ದಾರೆ. ಸದ್ಯ ಶಿಕ್ಷಕ ಮಂಜುನಾಥ ಬಡವನಹಳ್ಳಿ ಪೊಲೀಸರ ವಶದಲ್ಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ