ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಲೆಗಳಲ್ಲಿ ಮಕ್ಕಳ ಅಪೌಷ್ಟಿಕತೆ, ರಕ್ತಹೀನತೆ ಪರೀಕ್ಷೆ ಮಾಡಿ: ಸಚಿವ ಸುಧಾಕರ್‌ ಸೂಚನೆ

Twitter
Facebook
LinkedIn
WhatsApp
ಶಾಲೆಗಳಲ್ಲಿ ಮಕ್ಕಳ ಅಪೌಷ್ಟಿಕತೆ, ರಕ್ತಹೀನತೆ ಪರೀಕ್ಷೆ ಮಾಡಿ: ಸಚಿವ ಸುಧಾಕರ್‌ ಸೂಚನೆ

ಬೆಂಗಳೂರು (ಡಿ.08): ಮಕ್ಕಳಲ್ಲಿ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಸಮಸ್ಯೆಯ ನಿವಾರಣೆಗಾಗಿ ಗ್ರಾಮೀಣ ಭಾಗಗಳಲ್ಲಿ ಶಾಲೆ ಸೇರಿದಂತೆ ಮಕ್ಕಳಿರುವ ಜಾಗಗಳಲ್ಲಿ ಸರ್ಕಾರಿ ಆರೋಗ್ಯ ಕೇಂದ್ರಗಳ ಸಹಯೋಗದಲ್ಲಿ ಆರೋಗ್ಯ ತಪಾಸಣೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸೂಚನೆ ನೀಡಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಆರೋಗ್ಯ ಮತ್ತು ಕುಟುಂಬ ಇಲಾಖೆ ಆಯೋಜಿಸಿದ್ದ ‘ಅಪೌಷ್ಟಿಕತೆ ಮತ್ತು ರಕ್ತಹೀನತೆ ಮುಕ್ತ ಕರ್ನಾಟಕ’ ಕುರಿತ ಕಾರ್ಯಾಗಾರದಲ್ಲಿ ಸಚಿವರು ಮಾತನಾಡಿದರು.

ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರನ್ನು ಒಟ್ಟುಗೂಡಿಸಿ ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಮಾಡಬೇಕು. ನಮ್ಮ ಇಲಾಖೆಯ ದಾಖಲೆಗಳನ್ನು ಗಮನಿಸಿದರೆ ಗುರಿ ಮುಟ್ಟಿದ್ದೇವೆ ಎಂದು ಹೇಳಲಾಗುತ್ತದೆ. ಆದರೆ ಈ ಬಗ್ಗೆ ನಿಜವಾಗಿ ಆತ್ಮಾವಲೋಕ ಮಾಡಿಕೊಂಡರೆ ನಾವು ಸಂಪೂರ್ಣವಾಗಿ ತಪಾಸಣೆ ನಡೆಸುತ್ತಿಲ್ಲ ಎಂಬುದು ಅರಿವಾಗುತ್ತದೆ. ಆದ್ದರಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ವೈದ್ಯರು ಶಾಲೆಗಳಿಗೆ ಹೋಗುವುದು ಅಥವಾ ಮಕ್ಕಳೇ ಆರೋಗ್ಯ ಕೇಂದ್ರಕ್ಕೆ ಬಂದು ತಪಾಸಣೆ ಮಾಡಿಸಿಕೊಳ್ಳಬೇಕು. ಇದಕ್ಕಾಗಿ ಶಿಕ್ಷಣ ಇಲಾಖೆ ಗಂಭೀರ ಕ್ರಮ ವಹಿಸಬೇಕು ಎಂದರು.

ಬಜೆಟ್‌ನಲ್ಲಿ ಶೇ.8ರಷ್ಟುಪಾಲನ್ನು ಆರೋಗ್ಯ ವಲಯಕ್ಕೆ ಮೀಸಲಿಡಬೇಕು ಎಂಬುದು ತಜ್ಞರ ಅಭಿಪ್ರಾಯ. ಕರ್ನಾಟಕ ಬಜೆಟ್‌ನಲ್ಲಿ ಶೇ.5ರಷ್ಟನ್ನು ಆರೋಗ್ಯಕ್ಕೆ ಮೀಸಲಿಡಲಾಗಿದೆ. ಕಳೆದ 2-3 ವರ್ಷಗಳಲ್ಲಿ ಕೋವಿಡ್‌ ಅವಧಿಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಅನುದಾನ ದೊರೆತಿದ್ದು, ಆರೋಗ್ಯ ಮೂಲಸೌಕರ್ಯವನ್ನು 5-6 ಪಟ್ಟು ಹೆಚ್ಚಿಸಲಾಗಿದೆ. ಉಪಕೇಂದ್ರಗಳನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ನೀಡಿದೆ. ರಾಜ್ಯದಲ್ಲಿ 6,000 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಕಳೆದ ವರ್ಷ ಗುರಿ ನೀಡಿದ್ದು, ರಾಜ್ಯದಲ್ಲಿ 8,250 ಕೇಂದ್ರಗಳನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಸಮಾಜದ ಎಲ್ಲಾ ಕ್ಷೇತ್ರಗಳೂ ತಾಂತ್ರಿಕತೆ ಅವಲಂಬಿಸಿವೆ: ಸಮಾಜದ ಎಲ್ಲಾ ಕ್ಷೇತ್ರಗಳು ಕೂಡ ಇಂದು ತಾಂತ್ರಿಕತೆಯನ್ನು ಹೆಚ್ಚು ಅವಲಂಬಿಸಿರುವುದರಿಂದ ಎಂಜಿನಿಯರಿಂಗ್‌ ಓದುವ ವಿದ್ಯಾರ್ಥಿಗಳು ಹೆಚ್ಚು ಕೌಶಲ್ಯಗಳನ್ನು ಬೆಳೆಸಿಕೊಂಡು ಗುಣಮಟ್ಟದ ಶಿಕ್ಷಣ ಪಡೆಯಬೇಕಿದೆಯೆಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು. ನಗರದ ಹೊರ ವಲಯದ ಎಸ್‌ ಜೆ ಸಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೋಮವಾರ ಬಿ.ಜಿ.ಎಸ್‌ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದ್ದ 2022-23ನೇ ಸಾಲಿನ ಪ್ರಥಮ ವರ್ಷದ ಬಿ.ಇ ವಿದ್ಯಾರ್ಥಿಗಗಳ ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮತನಾಡಿದರು.

ಸಂಶೋಧನೆಯತ್ತ ಒಲವಿರಬೇಕು ಎಲ್ಲ ವೃತ್ತಿಗಳಿಗಿಂತ ಎಂಜಿನಿಯರ್‌ ವೃತ್ತಿ ಇಂದು ಅತ್ಯಂತ ವಿಭಿನ್ನ ಹಾಗೂ ಮಹತ್ವವಾದದು. ಸಮಾಜ ಪ್ರತಿ ನಿತ್ಯ ಒಂದಲ್ಲ ಒಂದು ಸಮಸ್ಯೆ, ಸವಾಲುಗಳನ್ನು ಎದುರಿಸುತ್ತಿದೆ. ಅದಕ್ಕೆ ಪರಿಹಾರ ಕಂಡು ಹಿಡಿಯುವ ನಿಟ್ಟಿನಲ್ಲಿ ತಾಂತ್ರಿಕ ಕ್ಷೇತ್ರ ನೆರವಾಗಬೇಕಿದೆ. ಆದ್ದರಿಂದ ಬಿ.ಇ ಓದುವ ವಿದ್ಯಾರ್ಥಿಗಳಿಗೆ ಸಂಶೋಧನೆ ಕಡೆಗೆ ತುಡಿತ ಇರಬೇಕು. ಗ್ರಾಮೀಣ ಜನರ ಅಭಿವೃದ್ದಿಗೆ ಒತ್ತು ಕೊಡಬೇಕು. ಕೋವಿಡ್‌ ಸಾಂಕ್ರಾಮಿಕ ರೋಗ ಹರಡಿದಾಗ ವೈದ್ಯಕಿಯ ಕ್ಷೇತ್ರಕ್ಕೆ ಬೇಕಾದ ಸಾಕಷ್ಟು ಯಂತ್ರೋಪಕರಣಗಳು ಶರವೇಗದಲ್ಲಿ ಉತ್ಪಾದನೆ ಆಗಲು ಎಂಜಿನಿಯರ್‌ಗಳ ಪರಿಶ್ರಮವೇ ಕಾರಣ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ