ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಸಕ, ಸಂಸದರ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ವಿವರ ನೀಡಿ: ಹೈಕೋರ್ಟ್ ಗಳಿಗೆ ಸುಪ್ರೀಂ ಆದೇಶ

Twitter
Facebook
LinkedIn
WhatsApp
ಶಾಸಕ, ಸಂಸದರ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ವಿವರ ನೀಡಿ: ಹೈಕೋರ್ಟ್ ಗಳಿಗೆ ಸುಪ್ರೀಂ ಆದೇಶ

ನವದೆಹಲಿ: ಸಂಸದರು ಮತ್ತು ಶಾಸಕರ ವಿರುದ್ಧ ಐದು ವರ್ಷಗಳಿಂದ ಬಾಕಿ ಉಳಿದಿರುವ ಕ್ರಿಮಿನಲ್ ಮೊಕದ್ದಮೆಗಳು ಮತ್ತು ಅವುಗಳ ತ್ವರಿತ ವಿಲೇವಾರಿಗೆ ಕೈಗೊಂಡ ಕ್ರಮಗಳ ವಿವರ ಒದಗಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ದೇಶದ ಎಲ್ಲಾ ಹೈಕೋರ್ಟ್‌ಗಳಿಗೆ ಸೂಚಿಸಿದೆ.

ಕ್ರಿಮಿನಲ್ ಪ್ರಕರಣಗಳಲ್ಲಿ ಅಪರಾಧ ಸಾಬೀತಾದ ನಂತರ ರಾಜಕಾರಣಿಗಳು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಆಜೀವ ನಿಷೇಧ ಕೋರಿ 2016ರಲ್ಲಿ ವಕೀಲ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, “ಎಲ್ಲಾ ಹೈಕೋರ್ಟ್‌ಗಳು ಸಂಸದ/ಶಾಸಕರ ವಿರುದ್ಧ ಐದು ವರ್ಷಗಳಿಗೂ ಹೆಚ್ಚು ಕಾಲ ಬಾಕಿ ಇರುವ ಕ್ರಿಮಿನಲ್ ಮೊಕದ್ದಮೆಗಳ ಸಂಖ್ಯೆ ಮತ್ತು ಅವುಗಳ ತ್ವರಿತ ವಿಲೇವಾರಿಗೆ ಕೈಗೊಂಡ ಕ್ರಮಗಳನ್ನು ಸೂಚಿಸುವ ಅಫಿಡವಿಟ್ ಸಲ್ಲಿಸಬೇಕು. ನಾಲ್ಕು ವಾರಗಳಲ್ಲಿ ಈ ಅಫಿಡವಿಟ್‌ಗಳನ್ನು ಸಲ್ಲಿಸಬೇಕು” ಎಂದು ನ್ಯಾಯಾಲಯ ಆದೇಶಿಸಿದೆ.

ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರ ಪೀಠ, ತನ್ನ ಆಗಸ್ಟ್ 10, 2021 ರ ಆದೇಶವನ್ನು ಮಾರ್ಪಡಿಸಿದ್ದು, ಶಾಸಕರ, ಸಂಸದರ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ನ್ಯಾಯಾಂಗ ಅಧಿಕಾರಿಗಳನ್ನು ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ಬದಲಾಯಿಸಬಾರದು ಎಂದು ಹೇಳಿದೆ.

ವಿಶೇಷ ನ್ಯಾಯಾಲಯದ ಸೇವೆಯಿಂದ ಮುಕ್ತರಾಗಲು ಅನುಮತಿ ನೀಡುವಂತೆ ನ್ಯಾಯಾಂಗ ಅಧಿಕಾರಿಗಳು ಸಾಕಷ್ಟು ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ. ಏಕೆಂದರೆ ಅವರಿಗೆ ಬಡ್ತಿ ಅಥವಾ ವರ್ಗಾವಣೆ ಮಾಡಲಾಗಿದೆ ಎಂದು  ಅಮಿಕಸ್ ಕ್ಯೂರಿ ಹಿರಿಯ ವಕೀಲ ವಿಜಯ್ ಹನ್ಸಾರಿಯಾ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ಪರಿಗಣಿಸಿದೆ.

2021ರ ಆಗಸ್ಟ್ 10 ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ ಕೋರ್ಟ್, ಅಂತಹ ನ್ಯಾಯಾಂಗ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲು ಹೈಕೋರ್ಟ್‌ ಮುಖ್ಯ ನ್ಯಾಯಾಧೀಶರಿಗೆ ಸ್ವಾತಂತ್ರ್ಯವಿದೆ ಎಂದು ಹೇಳಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ